ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಇದ್ದ ಅಡೆತಡೆ ನಿವಾರಣೆ
ಮೈಸೂರು

ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಇದ್ದ ಅಡೆತಡೆ ನಿವಾರಣೆ

April 13, 2019

ಮೈಸೂರು: ಮೇರು ನಟ, ಸಾಹಸಸಿಂಹ ಡಾ.ವಿಷ್ಣು ವರ್ಧನ್ ಸ್ಮಾರಕ ನಿರ್ಮಾಣಕ್ಕೆ ಎದು ರಾಗಿದ್ದ ವಿಘ್ನ ನಿವಾರಣೆಯಾಗಿದ್ದು, ಕೆಳ ನ್ಯಾಯಾಲಯ ಸ್ಮಾರಕ ನಿರ್ಮಾಣದ ಭೂ ಒಡೆತನಕ್ಕೆ ಸಂಬಂಧಿಸಿದಂತೆ ನೀಡಿದ್ದ ತಾತ್ಕಾಲಿಕ ಪ್ರತಿಬಂಧಕಾಜ್ಞೆ(ಸಿವಿಲ್ ಇಂಜೆಕ್ಷನ್)ಯನ್ನು ತೆರವುಗೊಳಿಸಿ ಕಟ್ಟಡ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಮೈಸೂರು ತಾಲೂಕಿನ ಉದ್ಬೂರು ಗೇಟ್ ಬಳಿ ಮಾನಂದವಾಡಿ ಮುಖ್ಯ ರಸ್ತೆಗೆ ಹೊಂದಿ ಕೊಂಡಂತೆ ಇರುವ ಕಸಬಾ ಹೋಬಳಿ ಹಾಲಾಳು ಗ್ರಾಮದ ಸರ್ವೆ ನಂ.8ರಲ್ಲಿ 6 ಎಕರೆ 5 ಗುಂಟೆ ಸರ್ಕಾರಿ ಭೂಮಿಯಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ 5 ಎಕರೆ ಭೂಮಿಯನ್ನು ಜಿಲ್ಲಾಡಳಿತ ಮಂಜೂರು ಮಾಡಿತ್ತು. ಆದರೆ ಆ ಭೂಮಿ ನಮಗೆ ಮಂಜೂರಾಗಿದ್ದು, ಅದರ ಒಡೆ ತನ ನಮ್ಮದು. ಸ್ಮಾರಕ ನಿರ್ಮಾಣಕ್ಕೆ ತಡೆ ನೀಡುವಂತೆ ಮೈಸೂರಿನ 2ನೇ ಜೆಎಂ ಎಫ್‍ಸಿ ನ್ಯಾಯಾಲಯಕ್ಕೆ ಮಹದೇವಮ್ಮ ಹಾಗೂ ಇನ್ನಿತರರು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಪ್ರತಿಬಂಧ ಕಾಜ್ಞೆ (ಸಿವಿಲ್ ಇಂಜೆಕ್ಷನ್) ನೀಡಿ, ಸ್ಮಾರಕ ನಿರ್ಮಾಣಕ್ಕೆ ತಡೆಯೊಡ್ಡಿತ್ತು. ಇದನ್ನು ತೆರವುಗೊಳಿಸುವಂತೆ ಅಂದಿನ ತಹಶೀ ಲ್ದಾರ್ ಟಿ.ರಮೇಶ್‍ಬಾಬು 4ನೇ ಜೆಎಂ ಎಫ್‍ಸಿ ನ್ಯಾಯಾಲಯದಲ್ಲಿ ಸಿವಿಲ್ ಇಂಜೆಕ್ಷನ್ ಅನ್ನು ತೆರವುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಆ ನ್ಯಾಯಾ ಲಯವೂ ಸಿವಿಲ್ ಇಂಜೆಕ್ಷನ್ ಅನ್ನು ಎತ್ತಿ ಹಿಡಿದಿತ್ತು. ಇದರಿಂದ ಸ್ಮಾರಕ ನಿರ್ಮಾಣಕ್ಕೆ ವಿಘ್ನ ಎದುರಾಗಿತ್ತು. ಇದು ವಿಷ್ಣುವರ್ಧನ್ ಅಭಿಮಾನಿಗಳಲ್ಲಿ ಭಾರಿ ನಿರಾಸೆ ಮೂಡಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿಯಲ್ಲಿ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು.
ಇಂದು ಬೆಳಿಗ್ಗೆ ಪ್ರಕರಣದ ವಿಚಾರಣೆ ಗೆತ್ತಿಕೊಂಡ ಹೈಕೋರ್ಟ್, ಮೈಸೂರು ಜಿಲ್ಲಾ ಡಳಿತ ನೀಡಿದ್ದ ಮಾಹಿತಿಯನ್ನು ಆಧರಿಸಿ ಕೆಳ ನ್ಯಾಯಾಲಯ ನೀಡಿದ್ದ ಸಿವಿಲ್ ಇಂಜೆ ಕ್ಷನ್ ಅನ್ನು ತೆರವುಗೊಳಿಸಿ, ಸ್ಮಾರಕ ನಿರ್ಮಾ ಣಕ್ಕೆ ಅನುಮತಿ ನೀಡಿದೆ. ಇದರಿಂದ ಲೋಕಸಭಾ ಚುನಾವಣೆ ಮುಗಿದ ಬಳಿಕ ಸ್ಮಾರಕ ನಿರ್ಮಾಣದ ಪ್ರಕ್ರಿಯೆ ಆರಂಭ ವಾಗಲಿದೆ. ಇದು ವಿಷ್ಣು ಅಭಿಮಾನಿಗಳಲ್ಲಿ ಸಂತಸವನ್ನುಂಟು ಮಾಡಿದೆ.

Translate »