ಹಿಜಾಬ್ ಪ್ರಕರಣ: ಇಂದು ಬೆಳಗ್ಗೆ 10.30ಕ್ಕೆ ಅಂತಿಮ ತೀರ್ಪು
News

ಹಿಜಾಬ್ ಪ್ರಕರಣ: ಇಂದು ಬೆಳಗ್ಗೆ 10.30ಕ್ಕೆ ಅಂತಿಮ ತೀರ್ಪು

March 15, 2022

ಬೆಂಗಳೂರು, ಮಾ. 14- ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದ್ದು, ನಾಳೆ (ಮಾ.15, ಮಂಗಳವಾರ) ಕರ್ನಾಟಕ ಹೈಕೋರ್ಟ್‍ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ಮೂರು ವಾರಗಳ ಕಾಲ ವಿಚಾರಣೆ ನಡೆದಿತ್ತು. ಅನಂತರ ಅಂತಿಮ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಸಹ ಪೀಠದಲ್ಲಿದ್ದಾರೆ.
ಶಿಕ್ಷಣ ಸಂಸ್ಥೆಗಳಲ್ಲಿ ಸ್ಕಾರ್ಫ್ ಬಳಸುವುದನ್ನು ನಿಷೇಧಿಸುವ ಯಾವುದೇ ಕಾನೂನು ಇಲ್ಲ ಎಂದು ವಿದ್ಯಾರ್ಥಿಗಳ ಪರ ವಕೀಲರು ಹೈಕೋರ್ಟ್‍ನಲ್ಲಿ ವಾದಿಸಿದ್ದರು. ಹಿಜಾಬ್ ಅನ್ನು ಸಂವಿಧಾನವು ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಅಡಿಯಲ್ಲಿ ರಕ್ಷಿಸಲಾಗಿದೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಉಲ್ಲಂಘನೆಯ ದೃಷ್ಟಿಯಿಂದ ಅದನ್ನು ನಿಷೇಧಿಸುವ ಅಧಿಕಾರವನ್ನು ಯಾವುದೇ ಕಾಲೇಜು ಅಭಿವೃದ್ಧಿ ಮಂಡಳಿ ಹೊಂದಿಲ್ಲ ಎಂದು ವಕೀಲರು ವಾದಿಸಿದ್ದಾರೆ.
ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಬಳಿಕ ಕರ್ನಾಟಕದ ಹಲವು ಶಾಲಾ- ಕಾಲೇಜುಗಳಿಗೆ ಹಬ್ಬಿತ್ತು. ಈ ವಿವಾದ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸದ್ದು ಮಾಡಿತ್ತು. ಹಿಜಾಬ್ ವಿವಾದ ಹಿನ್ನೆಲೆ ಹೈಕೋರ್ಟ್?ನಲ್ಲಿ 13 ದಿನಗಳ ಕಾಲ ಚರ್ಚೆ ನಡೆಸಿ ತೀರ್ಪು ಕಾಯ್ದಿರಿಸಲಾಗಿತ್ತು. ನಾಳೆ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿರುವ ಪೂರ್ಣ ಪೀಠದಿಂದ ತೀರ್ಪು ಹೊರ ಬೀಳಲಿದೆ.

Translate »