ವಿರಾಜಪೇಟೆ: ಶಬರಿಮಲೆಗೆ ಸ್ತ್ರೀಯರ ಪ್ರವೇಶ ಹಾಗೂ ಯಾತ್ರೆಯ ನಿಯಮ ಉಲ್ಲಂಘನೆ ಮಾಡಿರುವುದನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ವಿರಾಜಪೇಟೆ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿ ಕೇರಳದ ಕಮ್ಯುನಿಸ್ಟ್ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಇನ್ನೊಂದೆಡೆ ರಾಜ್ಯ ಸರಕಾರದ ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿ ಸಿಬ್ಬಂದಿ ಬಳಿ ವಿಧಾನಸೌದದಲ್ಲಿಯೇ ರೂ.26 ಲಕ್ಷ ನಗದು ಸಿಕ್ಕಿರುವ ಹಿನ್ನಲೆಯಲ್ಲಿ ಪುಟ್ಟ ರಂಗಶೆಟ್ಟಿ ತಮ್ಮ ಸ್ಥಾನಕ್ಕೆ ಕೂಡಲೆ ರಾಜೀ ನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯ ಕರ್ತರು ಪಟ್ಟಣದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕೇಂದ್ರ ಸರಕಾರ ಜನರಿಗೆ ಅನುಕೂಲವಾಗಲೆಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದ್ದರೂ ಕೂಡ ರಾಜ್ಯ ಸರ ಕಾರ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಏರಿಕೆ ಮಾಡಿರುವುದು ಜನರಿಗೆ ಹೊರೆ ಯಾದಂತಾಗಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ರಘು ನಾಣಯ್ಯ, ಕಾಫಿ ಮಂಡಳಿಯ ರೀನಾ ಪ್ರಕಾಶ್, ಪ್ರಿನ್ಸ್ ಗಣ ಪತಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿ ಸುಬ್ರಮಣಿ, ಭವ್ಯ, ಬಿಜೆಪಿ ಸಮಿತಿಯ ತಾಲೂಕು ಅಧ್ಯಕ್ಷ ಅರುಣ್ ಭೀಮಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಉಪಾಧ್ಯಕ್ಷ ನೆಲ್ಲಿರ ಚಲನ್, ಸದಸ್ಯರಾದ ಬಿ.ಎಂ.ಗಣೇಶ್, ಕೆ.ಎಂ.ಜನೀಶ್, ಗಿರೀಶ್ ಗಣಪತಿ, ಮುಖಂಡರಾದ ಕುಂಬೆ ಯಂಡ ಗಣೇಶ್, ಮಲ್ಲಂಡ ಮಧು ದೇವಯ್ಯ ಹಾಗೂ ಪಪಂನ ಬಿಜೆಪಿ ಸದಸ್ಯರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.