ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮೈಸೂರು ನಗರದ ಹೊರವರ್ತುಲ ರಸ್ತೆ-ಹುಣಸೂರು ರಸ್ತೆಯ ಹಿನಕಲ್ ಜಂಕ್ಷನ್‍ನಲ್ಲಿ ನಿರ್ಮಿ ಸಿರುವ ಫ್ಲೈ ಓವರ್ ಕಾಮಗಾರಿಯ ಉದ್ಘಾಟನಾ ಸಮಾರಂಭ ಡಿ.23ರಂದು ಮಧ್ಯಾಹ್ನ 1.30ಕ್ಕೆ ನಡೆಯಲಿದೆ. ಕೇಂದ್ರ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನಾ ಸಚಿವ ಹದೀಪ್ ಸಿಂಗ್ ಘನ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉನ್ನತ ಶಿಕ್ಷಣ ಸಚಿವರೂ ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸುವರು.
ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಜಿಪಂ ಅಧ್ಯಕ್ಷ ರಾದ ನಯೀಮಾ ಸುಲ್ತಾನ ನಜೀರ್ ಅಹಮದ್, ಸಂಸದರಾದ ಪ್ರತಾಪ್‍ಸಿಂಹ, ಆರ್.ಧ್ರುವನಾರಾಯಣ್, ಎಲ್.ಆರ್.ಶಿವರಾಮೇಗೌಡ, ಶಾಸಕರಾದ ತನ್ವೀರ್ ಸೇಠ್, ಎ.ಹೆಚ್.ವಿಶ್ವನಾಥ್, ಎಸ್.ಎ.ರಾಮದಾಸ್, ಕೆ.ಮಹದೇವ, ಡಾ.ಯತೀಂದ್ರ, ಹರ್ಷ ವರ್ಧನ್, ಅನಿಲ್, ಅಶ್ವಿನ್‍ಕುಮಾರ್, ಎಲ್.ನಾಗೇಂದ್ರ,ರವೀಂದ್ರ ಶ್ರೀಕಂಠಯ್ಯ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ ಎಸ್.ನಾಗರಾಜು, ಕೆ.ವಿ. ನಾರಾಯಣಸ್ವಾಮಿ, ಆರ್.ಧರ್ಮಸೇನ, ಉಪಮೇಯರ್ ಷಫೀ ಅಹಮದ್, ಜಿಪಂ ಉಪಾಧ್ಯಕ್ಷ ಜಿ.ನಟರಾಜು, ಸದಸ್ಯ ರಾಕೇಶ್ ಪಾಪಣ್ಣ, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಉಪಾಧ್ಯಕ್ಷ ಎನ್.ಬಿ.ಮಂಜು, ಹಿನಕಲ್ ಗ್ರಾಪಂ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷ ಭೈರನಾಯಕ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.