ಹೆಚ್‍ಐವಿ ಪಾಸಿಟಿವಿಟಿ ದರ: 8ನೇ ಸ್ಥಾನದಲ್ಲಿ ಮೈಸೂರು ಜಿಲ್ಲೆ
ಮೈಸೂರು

ಹೆಚ್‍ಐವಿ ಪಾಸಿಟಿವಿಟಿ ದರ: 8ನೇ ಸ್ಥಾನದಲ್ಲಿ ಮೈಸೂರು ಜಿಲ್ಲೆ

December 2, 2022

ಮೈಸೂರು, ಡಿ.1 (ಆರ್‍ಕೆಬಿ)- ವಿಶ್ವ ಏಡ್ಸ್ ದಿನದ ಅಂಗವಾಗಿ ನೂರಾರು ಮಂದಿ ಗುರುವಾರ ಮೈಸೂರಿನಲ್ಲಿ ಹೆಚ್‍ಐವಿ/ಏಡ್ಸ್ ಕುರಿತ ಜಾಗೃತಿ ಜಾಥಾ ನಡೆಸಿದರು. ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಮಿಲೇನಿಯಂ ವೃತ್ತ (ಎಲ್‍ಐಸಿ ವೃತ್ತ)ದ ಬಳಿ ಜಾಗೃತಿ ಜಾಥಾಕ್ಕೆ ಮೈಸೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ (ಡಿಎಲ್‍ಎಸ್‍ಎ) ಸದಸ್ಯ ಕಾರ್ಯದರ್ಶಿ ದೇವರಾಜ ಭೂತೆ ಚಾಲನೆ ನೀಡಿದರು.

ಮೈಸೂರು ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾ ಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರ, ಆಶೋದಯ ಸಮಿತಿ, ಎಸ್‍ವಿವೈಎಂ, ಮಹಾನ್ ಹಾಗೂ ಇನ್ನಿತರೆ ಸೇವಾ ಸಂಸ್ಥೆ ಗಳ ಆಶ್ರಯದಲ್ಲಿ ಜಾಥಾ ನಡೆಯಿತು. ವಿವಿಧ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ, ಹೆಚ್‍ಐವಿ/ಏಡ್ಸ್ ಬಗ್ಗೆ ಜನಜಾಗೃತಿ ಮೂಡಿ ಸಿದರು. ಬನ್ನಿಮಂಟಪ ಬಡಾವಣೆಯ ವಿವಿಧ ರಸ್ತೆಗಳ ಮೂಲಕ ಸಾಗಿದ ಜಾಥಾ ದಲ್ಲಿ ಹೆಚ್‍ಐವಿ/ಏಡ್ಸ್ ಕುರಿತ ಘೋಷಣಾ ಫಲಕಗಳನ್ನು ಹಿಡಿದಿದ್ದ ವಿದ್ಯಾರ್ಥಿಗಳು, ಏಡ್ಸ್ ಬಗ್ಗೆ ಜನರು ಎಚ್ಚರಿಕೆ ವಹಿಸುವಂತೆ ಸಾರಿದರು. ಜಾಥಾ ಬಳಿಕ ಜೆಎಸ್‍ಎಸ್ ಫಾರ್ಮಸಿ ಕಾಲೇಜಿನಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸಮ್ಮುಖದಲ್ಲಿ ವಿದ್ಯಾರ್ಥಿ ಗಳಿಂದಲೇ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಲಾಯಿತು. ನಂತರ ಮಾತ ನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಹೆಚ್‍ಐವಿ/ಏಡ್ಸ್ ಪ್ರಕರಣಗಳು ಹೆಚ್ಚುತ್ತಿ ರುವ ಹಿನ್ನೆಲೆಯಲ್ಲಿ ಏಡ್ಸ್ ಹರಡುವುದನ್ನು ತಡೆಯಲು ವಿಶ್ವದಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗು ತ್ತಿದೆ. ಏಡ್ಸ್‍ಗೆ ಪ್ರಮುಖವಾದ ನಾಲ್ಕು ಕಾರಣಗಳೆಂದರೆ, ಅಸುರಕ್ಷಿತ ಲೈಂಗಿಕ ಸಂಪರ್ಕ, ಪರೀಕ್ಷೆ ಮಾಡದ ಸೋಂಕಿತ ರಕ್ತ, ರಕ್ತ ಉತ್ಪನ್ನಗಳ ವರ್ಗಾವಣೆ ಮಾಡು ವುದರಿಂದ, ಸಂಸ್ಕರಿಸದ ಹರಿತವಾದ ಸಾಧನ ಗಳು, ಸೂಜಿ, ಸಿರಿಂಜು, ಶಸ್ತ್ರಕ್ರಿಯಾ ಸಾಧನೆ ಗಳ ಉಪಯೋಗದಿಂದ ಹಾಗೂ ಹೆಚ್‍ಐವಿ ಸೋಂಕು ಇರುವ ತಾಯಿಯಿಂದ ಆಕೆಯ ಮಗುವಿಗೆ ಹರಡುತ್ತದೆ. ಜೊತೆಗೆ ಡ್ರಗ್ಸ್, ಹಚ್ಚೆ ಹಾಕಿಸಿಕೊಳ್ಳುವಾಗ ಸೂಜಿಗಳ ಬಳಕೆ ಯಿಂದಲೂ ಸೋಂಕು ಬರಬಹುದು. ಹೀಗಾಗಿ ಇವೆಲ್ಲದರ ಬಗ್ಗೆ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಯುವಜನಾಂಗ ಎಚ್ಚರಿಕೆ ವಹಿಸಬೇಕು ಎಂದು ಕರೆ ನೀಡಿದರು. ಏಡ್ಸ್ ಪೀಡಿತರನ್ನು ಕೀಳಾಗಿ ಕಾಣುವ ಮನೋಭಾವ ಹೋಗಬೇಕು. ನೈತಿಕವಾಗಿ ಅವರನ್ನು ಬೆಂಬಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿದ ಜಿಲ್ಲಾಧಿಕಾರಿಗಳು, ಹೆಚ್‍ಐವಿ ಸೋಂಕಿತರಾಗಿದ್ದರೆ ಆತಂಕಪಡುವ ಅಗತ್ಯವಿಲ್ಲ. ಅದಕ್ಕೆ ಅಗತ್ಯ ಔಷಧೋಪಚಾರ, ಚಿಕಿತ್ಸೆ ಪಡೆಯಲು ಅವಕಾಶವಿದೆ ಎಂದು ಧೈರ್ಯ ತುಂಬಿದರು. ಡಿಹೆಚ್‍ಓ ಡಾ.ಕೆ.ಹೆಚ್.ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೆಎಸ್‍ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಪರೀಕ್ಷಾ ನಿಯಂತ್ರಕ ಡಾ.ಸುಧೀಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು.

Translate »