ಕೊಡಗಿನ ನೆರೆ ಸಂತ್ರಸ್ತರಿಗೆ ವಾರದಲ್ಲಿ ಮನೆ ನಿರ್ಮಾಣ ಆರಂಭ
ಮೈಸೂರು

ಕೊಡಗಿನ ನೆರೆ ಸಂತ್ರಸ್ತರಿಗೆ ವಾರದಲ್ಲಿ ಮನೆ ನಿರ್ಮಾಣ ಆರಂಭ

November 28, 2018

ಬೆಂಗಳೂರು: ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡಲು ಸರ್ಕಾರ ನಿರ್ಧರಿಸಿದ್ದು, ವಾರದಲ್ಲಿ ಮನೆ ನಿರ್ಮಾಣ ಕಾರ್ಯ ಆರಂಭಿಸಬೇಕು ಎಂದು ಸಭೆಯಲ್ಲಿ ಮುಖ್ಯಮಂತ್ರಿ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೊಡಗಿನಲ್ಲಿ ಪ್ರವಾಹ ಉಂಟಾದಾಗ ನಿರ್ವಹಿಸಿದ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕೊಡಗು ಸೇರಿದಂತೆ ಅತಿವೃಷ್ಟಿಗೆ 4.50 ಕೋಟಿ ರೂ. ನಷ್ಟವಾಗಿತ್ತು. ಮಾರ್ಗಸೂಚಿ ಪ್ರಕಾರ, 722 ಕೋಟಿ ರೂ. ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಮನವಿ ಮಾಡಲಾಗಿತ್ತು. ಕೇಂದ್ರ ಸರ್ಕಾರ 546 ಕೋಟಿ ರೂ. ನೀಡಿದೆ. ಅದಕ್ಕಾಗಿ ಕೇಂದ್ರ ಸರ್ಕಾರವನ್ನು ಅಭಿನಂದಿಸುವುದಾಗಿ ಡಾ. ಪರಮೇಶ್ವರ್ ಇದೇ ವೇಳೆ ತಿಳಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜನರು ಪ್ರತಿಭಟನೆ ಮಾಡುವುದನ್ನು ತಪ್ಪಿಸಲು ಸೂಚಿಸಿದರು. ವಿಶೇಷವಾಗಿ ಉತ್ತರ ಕನ್ನಡ ಭಾಗದಲ್ಲಿನ ಸಮಸ್ಯೆಗಳ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸುವರ್ಣ ವಿಧಾನಸೌಧ ಕಟ್ಟಿರುವುದೇ ಪ್ರತಿಭಟನೆ ಮಾಡಲು ಎಂಬ ಭಾವನೆ ಬರುತ್ತಿದೆ. ಅದನ್ನು ನಿವಾರಿಸ ಬೇಕು. ಕಬ್ಬು ಬೆಳೆಗಾರರ ಸಮಸ್ಯೆ ಅರ್ಥ ಮಾಡಿಕೊಂಡು ದೊಡ್ಡ ಪ್ರಮಾಣದಲ್ಲಿ ಬೆಳೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಹಿಂದಿನ ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಗಳು ಗ್ರಾಮ ವಾಸ್ತವ್ಯವನ್ನು ತಿಂಗಳಿಗೊಮ್ಮೆ ಮಾಡಿ ಹೋಬಳಿಗಳಲ್ಲಿ ಅದಾಲತ್ ನಡೆಸುವಂತೆ ಸೂಚಿಸಲಾಗಿತ್ತು. ಅದರ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿ ಎಂದರು.

Translate »