ನಿರಾಶ್ರಿತರಿಗೆ ಮನೆ ನಿರ್ಮಾಣ ಸದ್ಯದಲ್ಲೇ ಆರಂಭ: ಜಗದೀಶ್

ಮಡಿಕೇರಿ:  ‘ ಆಗಸ್ಟ್‌ನಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದಾಗಿ ಜಿಲ್ಲೆಯ ಜನಜೀವನ ಅಸ್ತ ವ್ಯಸ್ತವಾಗಿತ್ತು. ಇದರಿಂದ ಹಲವು ಕುಟುಂಬಗಳು ಮನೆ-ಮಠ ಕಳೆದುಕೊಂಡು ನಿರಾಶ್ರಿತರಾದರು. ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಯಿತು. ಈ ನಿಟ್ಟಿನಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಈಗಾಗಲೇ ಜಾಗ ಗುರುತಿಸಿದ್ದು, ಸಮತಟ್ಟು ಮಾಡುವ ಕಾರ್ಯ ಪೂರ್ಣಗೊಂಡು, ಬಡಾವಣೆ ನಿರ್ಮಾಣ ಸಂಬಂಧ ಅನುಮೋದನೆ ಪಡೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದರು.

ಮನೆ ನಿರ್ಮಾಣ ಸಂಬಂಧ ನಿರ್ಮಾಣಗೊಳ್ಳುತ್ತಿರುವ ಹಲವು ಬಡಾವಣೆಯ ನೀಲ ನಕಾಶೆ ತಯಾರಾಗಿದ್ದು, ಒಳಚರಂಡಿ ವ್ಯವಸ್ಥೆ, ವಿದ್ಯುತ್ ಮಾರ್ಗ, ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳ ತಂಡಗಳೊಂದಿಗೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಬಡಾವಣೆ ನಿರ್ಮಾಣ ಸಂಬಂಧ ಇನ್ನೂ ಒಂದು ವಾರದಲ್ಲಿ ಅನುಮೋದನೆ ದೊರೆಯ ಲಿದ್ದು, ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾ ವನೆ ಸಲ್ಲಿಸಲಾಗುವುದು. ಅನುಮೋದನೆ ದೊರತ ನಂತರ ನಿರಾಶ್ರಿತರಿಗೆ ಒಪ್ಪಿಗೆಯಾಗುವ ಮನೆ ನಿರ್ಮಿಸುವ ಕಾರ್ಯ ಶುರುವಾಗಲಿದೆ ಎಂದು ಮಾಹಿತಿ ನೀಡಿದರು.

ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣ ದಲ್ಲಿ ಕೃಷಿ, ತೋಟಗಾರಿಕೆ, ಕಾಫಿ, ಕರಿಮೆಣಸು, ಏಲಕ್ಕಿ, ಬಾಳೆ ಹೀಗೆ ವಿವಿಧ ಬೆಳೆಗಳು ನಷ್ಟ ಉಂಟಾ ಗಿದ್ದು, ಬೆಳೆ ನಷ್ಟ ಪರಿಹಾರಕ್ಕೆ 100 ಕೋಟಿ ರೂ. ಹೆಚ್ಚು ಹಣ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.

ಪುನರ್ವಸತಿ ಕಲ್ಪಿಸಿರುವ ಸ್ಥಳದ ವಿವರ

ಕರ್ಣಂಗೇರಿ ಗ್ರಾಮ: ಈ ಗ್ರಾಮದಲ್ಲಿ ನಾಲ್ಕು ಎಕರೆ ಗುರುತಿಸಲಾಗಿದ್ದು, ಸುಮಾರು 80 ನಿವೇಶನಗಳು ಲಭ್ಯವಾಗಲಿದೆ.
ಈ ಗ್ರಾಮದಲ್ಲಿ ಕರ್ಣಂಗೇರಿಯ 13, ಮಕ್ಕಂದೂರಿನ 11, ಹಚ್ಚಿನಾಡಿ 1, ಹೊದಕಾನ 9 ಹಾಗೂ ನಗರದ 43 ಸೇರಿ ಒಟ್ಟು 65 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ.

ಕೆ.ನಿಡುಗಣೆ ಗ್ರಾಮ: ಈ ಗ್ರಾಮದಲ್ಲಿ ಅಂದಾಜು 5 ಎಕರೆ ಜಾಗ ಗುರು ತಿಸಲಾಗಿದ್ದು, ಕಾಲೂರು ಗ್ರಾಮದ 22 ಕುಟುಂಬಗಳಿಗೆ, ಗಾಳಿಬೀಡು ಗ್ರಾಪಂ ವ್ಯಾಪ್ತಿಯಲ್ಲಿ ಸರ್ವೆ ನಂ.103ರಲ್ಲಿ 7 ಎಕರೆ ಜಾಗ ಗುರುತಿಸ ಲಾಗಿದ್ದು, ಹೆಬ್ಬೆಟ್ಟಗೇರಿಯ 90 ಕುಟುಂಬಗಳಿಗೆ, ಗಾಳಿಬೀಡು ಗ್ರಾಮದಲ್ಲಿ 13 ಎಕರೆ ಜಾಗ ಗುರುತಿಸಲಾಗಿದ್ದು, 19 ಕುಟುಂಬಗಳಿಗೆ, ನಿಡುವಟ್ಟಿನ 26 ಕುಟುಂಬಗಳಿಗೆ ಬಾರಿಬೆಳ್ಳಚ್ಚು 2 ಕುಟುಂಬಗಳಿಗೆ, ಒಂದನೇ ಮೊಣ್ಣಂಗೇರಿ 9 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ.

ಮದೆ ಗ್ರಾಮ: ಈ ಗ್ರಾಮದಲ್ಲಿ 10 ಎಕರೆ ಜಾಗ ಗುರುತಿಸಲಾಗಿದ್ದು, ಎರಡನೇ ಮೊಣ್ಣಂಗೇರಿಯ 188 ಕುಟುಂಬಗಳಿಗೆ, ಮದೆ ಗ್ರಾಮದ 79 ಕುಟುಂಬಗಳಿಗೆ, ಸಂಪಾಜೆಯಲ್ಲಿ 1.50 ಎಕರೆ ಗುರುತಿಸಲಾಗಿದ್ದು, ಸಂಪಾ ಜೆಯ 4 ಕುಟುಂಬಗಳಿಗೆ, ಬಿಳಿಗೇರಿಯಲ್ಲಿ 1.88 ಎಕರೆ ಜಾಗ ಗುರುತಿಸ ಲಾಗಿದ್ದು, ಹೆರವನಾಡಿನ 10 ಕುಟುಂಬಗಳು ಸೇರಿ ಒಟ್ಟು 281 ಕುಟುಂಬ ಗಳಿಗೆ, ಜಂಬೂರು ಗ್ರಾಮದಲ್ಲಿ 50 ಎಕರೆ ಜಾಗ ಗುರುತಿಸಲಾಗಿದ್ದು, ಮಕ್ಕಂದೂರು ಗ್ರಾಮದ 99 ಕುಟುಂಬಗಳಿಗೆ, ಎಮ್ಮೆತಾಳು ಗ್ರಾಮದ 39 ಕುಟುಂಬಳಿಗೆ, ಮುಕ್ಕೋಡ್ಲು ಗ್ರಾಮದ 9 ಕುಟುಂಬಗಳಿಗೆ, ಮೇಘತ್ತಾಳು ಗ್ರಾಮದ 26 ಕುಟುಂಬಗಳು ಸೇರಿ ಒಟ್ಟು 173 ಕುಟುಂಬಗಳಿಗೆ ಜಾಗ ಗುರುತಿಸಲಾಗಿದೆ.

ಸೋಮವಾರಪೇಟೆ: ತಾಲೂಕಿನ ಚೌಡ್ಲು 2 ಕುಟುಂಬಗಳಿಗೆ, ಕಿರಂ ಗಂದೂರು 6, ಬೇಳೂರು 4, ಹಾನಗಲ್ಲು 3, ನೆರುಗಳಲೆ 1, ಹಾಡಗೇರಿ 22, ಮುವತ್ತೋಕ್ಲು 4, ಇಗ್ಗೋಡ್ಲು 9, ಕಡಗದಾಳು 11, ಕಾಂಡನಕೊಲ್ಲಿ 5, ಕೊಪ್ಪತ್ತೂರು 3, ಜಂಬೂರು 4, ಗರ್ವಾಲೆ 2, ಶಿರಂಗಳ್ಳಿ 1, ಮಂಕ್ಯ 1, ಕಿಕ್ಕರಳ್ಳಿ 1, ಹಾಲೇರಿ 5 ಒಟ್ಟು 84 ಕುಟುಂಬಗಳಿಗೆ ನಿವೇಶನ ಗುರು ತಿಸಲಾಗಿದೆ ಎಂದು ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಕೆ.ಜಗದೀಶ್ ಅವರು ಮಾಹಿತಿ ನೀಡಿದರು.