ಸಂತ್ರಸ್ತರಿಗೆ ಮನೆ, ಬಡಾವಣೆ ನಿರ್ಮಾಣಕ್ಕೆ ಸಿದ್ಧತೆ: ಹೆಚ್ಚುವರಿ ಡಿಸಿ ಜಗದೀಶ್
ಕೊಡಗು

ಸಂತ್ರಸ್ತರಿಗೆ ಮನೆ, ಬಡಾವಣೆ ನಿರ್ಮಾಣಕ್ಕೆ ಸಿದ್ಧತೆ: ಹೆಚ್ಚುವರಿ ಡಿಸಿ ಜಗದೀಶ್

September 23, 2018

ಮಡಿಕೇರಿ: ಪ್ರಕೃತಿ ವಿಕೋಪ ದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವ ನಿಟ್ಟಿನಲ್ಲಿ ಜಿಲ್ಲಾ ಡಳಿತದಿಂದ ಅಗತ್ಯ ಕ್ರಮಕೈಗೊಳ್ಳುತ್ತಿದೆ.

ಈಗಾಗಲೇ ನಾಲ್ಕು ಮಾದರಿಯ ಮನೆ ಗಳ ಪ್ರಾತ್ಯಕ್ಷಿಕೆ ಪ್ರದರ್ಶನಕ್ಕೆ ಇಡಲಾಗಿದ್ದು, ಸಂತ್ರಸ್ತರಿಗೆ ಒಪ್ಪಿಗೆ ಆಗುವ ಮನೆ ನಿರ್ಮಿ ಸಿಕೊಡಲು ಮುಂದಾಗಲಾಗಿದೆ. ಮನೆ ನಿರ್ಮಾಣ ಸಂಬಂಧ ಈಗಾಗಲೇ ಗುರು ತಿಸಲಾಗಿರುವ ಕೆ.ನಿಡುಗಣೆ, ಕರ್ಣಂಗೇರಿ, ಗಾಳಿಬೀಡು, ಮದೆ, ಬಿಳಿಗೇರಿ, ಸಂಪಾಜೆ, ಜಂಬೂರು ಗ್ರಾಮಗಳಲ್ಲಿ ಒಟ್ಟು 110 ಎಕರೆ ಭೂಮಿಯನ್ನು ಗುರುತಿಸಲಾಗಿದ್ದು, ನಿವೇಶನ ಸಮತಟ್ಟು ಕಾರ್ಯವು ಪೂರ್ಣ ಗೊಂಡಿದೆ ಎಂದು ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.

ಸದ್ಯ ಲೇಔಟ್ ನಿರ್ಮಾಣಕ್ಕೆ 5 ಕೋಟಿ ರೂ. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸ ಲಾಗಿದ್ದು, ಘಟಕ ವೆಚ್ಚ ನಿಗಧಿಯಾದ ನಂತರ ಒಪ್ಪಿಗೆಯಾಗುವ ಮನೆಯನ್ನು ನಿರ್ಮಿಸಲಾಗುವುದು. ಆ ನಿಟ್ಟಿನಲ್ಲಿ ಗೃಹ ಮಂಡಳಿ ವತಿಯಿಂದ ಮನೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಎಲ್ಲೆಲ್ಲಿ ಜಾಗ ಗುರುತು: ಕರ್ಣಂಗೇರಿ ಗ್ರಾಮದ ಸರ್ವೆ ನಂ.178 ರಲ್ಲಿ ನಾಲ್ಕು ಎಕರೆ ಗುರುತಿಸಲಾಗಿದ್ದು, ಸುಮಾರು 80 ನಿವೇಶನಗಳು ಲಭ್ಯವಾಗಲಿದೆ. ಈ ಗ್ರಾಮ ದಲ್ಲಿ ಕರ್ಣಂಗೇರಿಯ 13, ಮಕ್ಕಂದೂ ರಿನ 11, ಹಚ್ಚಿನಾಡಿ 1, ಹೊದಕಾನ 9 ಹಾಗೂ ನಗರದ 43 ಸೇರಿದಂತೆ ಒಟ್ಟು 65 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಿಲಾಗಿದೆ.

ಕೆ.ನಿಡುಗಣೆ ಗ್ರಾಮದ ಸರ್ವೆ ನಂ.1/13ರಲ್ಲಿ ಅಂದಾಜು 5 ಎಕರೆ ಜಾಗ ಗುರು ತಿಸಲಾಗಿದ್ದು, ಕಾಲೂರು ಗ್ರಾಮದ 22 ಕುಟುಂಬಗಳಿಗೆ, ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಸರ್ವೆ ನಂ.103 ರಲ್ಲಿ 7 ಎಕರೆ ಜಾಗ ಗುರುತಿಸಲಾಗಿದ್ದು, ಹೆಬ್ಬೆಟ್ಟ ಗೇರಿಯ 90 ಕುಟುಂಬಗಳಿಗೆ, ಗಾಳಿ ಬೀಡು ಸರ್ವೆ ನಂ.99/3, 100/3, 100/4 ರಲ್ಲಿ 13 ಎಕರೆ ಜಾಗ ಗುರುತಿಸಲಾ ಗಿದ್ದು, ಗಾಳಿಬೀಡು ಗ್ರಾಮದ 19 ಕುಟುಂ ಬಗಳಿಗೆ, ನಿಡುವಟ್ಟಿನ 26 ಕುಟುಂಬ ಗಳಿಗೆ ಬಾರಿಬೆಳ್ಳಚ್ಚು 2 ಕುಟುಂಬಗಳಿಗೆ, ಒಂದನೇ ಮೊಣ್ಣಂಗೇರಿ 9 ಕುಟುಂಬ ಗಳಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ.

ಮದೆ ಗ್ರಾಮದ ಸರ್ವೆ ನಂ.399 ರಲ್ಲಿ 10 ಎಕರೆ ಜಾಗ ಗುರುತಿಸಲಾಗಿದ್ದು, ಎರ ಡನೇ ಮೊಣ್ಣಂಗೇರಿಯ 188 ಕುಟುಂಬ ಗಳಿಗೆ, ಮದೆ ಗ್ರಾಮದ 79 ಕುಟುಂಬ ಗಳಿಗೆ, ಸಂಪಾಜೆಯಲ್ಲಿ ಸರ್ವೆ ನಂ.54/1 ರಲ್ಲಿ 1.50 ಎಕರೆ ಗುರುತಿಸಲಾಗಿದ್ದು, ಸಂಪಾಜೆಯ 4 ಕುಟುಂಬಗಳಿಗೆ, ಬಿಳಿ ಗೇರಿಯ ಸರ್ವೆ ನಂ.347/3 ರಲ್ಲಿ 1.88 ಎಕರೆ ಜಾಗ ಗುರುತಿಸಲಾಗಿದ್ದು, ಹೆರವ ನಾಡಿನ 10 ಸೇರಿದಂತೆ ಒಟ್ಟು 281 ಕುಟುಂ ಬಗಳಿಗೆ, ಜಂಬೂರು ಗ್ರಾಮದ ಸರ್ವೆ ನಂ.13/1 ರಲ್ಲಿ 50 ಎಕರೆ ಜಾಗ ಗುರುತಿ ಸಲಾಗಿದ್ದು, ಮಕ್ಕಂದೂರು ಗ್ರಾಮದ 99 ಕುಟುಂಬಗಳಿಗೆ, ಎಮ್ಮೆತಾಳು ಗ್ರಾಮದ 39 ಕುಟುಂಬಳಿಗೆ, ಮುಕ್ಕೋಡ್ಲು ಗ್ರಾಮದ 9 ಕುಟುಂಬಗಳಿಗೆ, ಮೇಘತ್ತಾಳು ಗ್ರಾಮದ 26 ಸೇರಿದಂತೆ ಒಟ್ಟು 173 ಕುಟುಂಬ ಗಳಿಗೆ ಜಾಗ ಗುರುತಿಸಲಾಗಿದೆ.

ಸೋಮವಾರಪೇಟೆ ತಾಲೂಕಿನ ಚೌಡ್ಲು 2 ಕುಟುಂಬಗಳಿಗೆ, ಕಿರಂಗಂದೂರು 6, ಬೇಳೂರು 4, ಹಾನಗಲ್ಲು 3, ನೆರುಗಳಲೆ 1, ಹಾಡಗೇರಿ 22, ಮುವತ್ತೋಕ್ಲು 4, ಇಗ್ಗೋಡ್ಲು 9, ಕಡಗದಾಳು 11, ಕಾಂಡನ ಕೊಲ್ಲಿ 5, ಕೊಪ್ಪತ್ತೂರು 3, ಜಂಬೂರು 4, ಗರ್ವಾಲೆ 2, ಶಿರಂಗಳ್ಳಿ 1, ಮಂಕ್ಯ 1, ಕಿಕ್ಕರಳ್ಳಿ 1, ಹಾಲೇರಿ 5 ಸೇರಿದಂತೆ ಒಟ್ಟು 84 ಕುಟುಂಬಗಳಿಗೆ ನಿವೇಶನ ಗುರುತಿಸಲಾಗಿದೆ ಎಂದು ವಿಶೇಷ ಹೆಚ್ಚು ವರಿ ಜಿಲ್ಲಾಧಿಕಾರಿ ಎಂ.ಕೆ.ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.

Translate »