ಶವ ಸಂಸ್ಕಾರದ ವೇಳೆ ಜೇನು ದಾಳಿ; 20ಕ್ಕೂ ಹೆಚ್ಚು ಮಂದಿಗೆ ಗಾಯ
ಚಾಮರಾಜನಗರ

ಶವ ಸಂಸ್ಕಾರದ ವೇಳೆ ಜೇನು ದಾಳಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

September 3, 2018

ಚಾಮರಾಜನಗರ:  ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಜೇನು ಹುಳುಗಳು ದಾಳಿ ನಡೆಸಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಡೊಳ್ಳಿಪುರ ಗ್ರಾಮದಲ್ಲಿ ಇಂದು ನಡೆದಿದೆ.

ಗ್ರಾಮದ ರತ್ನಮ್ಮ ಎಂಬುವರು ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಶವವನ್ನು ಅವರ ಜಮೀನಿಗೆ ಕೊಂಡೊಯ್ಯಲಾಗಿತ್ತು. ಜಮೀನಿನಲ್ಲಿ ಶವ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಶವಕ್ಕೆ ಪೂಜೆ ಸಲ್ಲಿಸುತ್ತಿದ್ದ ವೇಳೆ ಜೇನು ಹುಳುಗಳು ದಾಳಿ ನಡೆಸಿವೆ. ಇದರಿಂದ ಗಾಬರಿಗೊಂಡ ಸಂಬಂಧಿಕರು ಶವವನ್ನು ಅಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿದರು. ಆದರೂ 20ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿದ್ದು, ಗಾಯಾಳುಗಳಿಗೆ ಚಾಮರಾಜ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ ಓರ್ವ ವೃದ್ಧೆಯ ಸ್ಥಿತಿ ಗಂಭೀರ ವಾಗಿದೆ ಎಂದು ತಿಳಿದು ಬಂದಿದೆ. ನಂತರ ಜೇನು ಹುಳುಗಳೆಲ್ಲಾ ಹೋದ ಮೇಲೆ ಮತ್ತೇ ಜಮೀನಿಗೆ ತೆರಳಿದ ಬಂಧುಗಳು ಶವದ ಅಂತ್ಯ ಸಂಸ್ಕಾರ ನೆರವೇರಿಸಿದರು.

Translate »