ಇಂದಿನಿಂದ ಹೋಟೆಲ್ ಊಟ, ತಿಂಡಿ ದರ ಏರಿಕೆ
ಮೈಸೂರು

ಇಂದಿನಿಂದ ಹೋಟೆಲ್ ಊಟ, ತಿಂಡಿ ದರ ಏರಿಕೆ

November 8, 2021

ಬೆಂಗಳೂರು,ನ.೭-ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿ ರುವ ಹಿನ್ನೆಲೆಯಲ್ಲಿ ನಾಳೆ (ನ.೮)ಯಿಂದ ಹೋಟೆಲ್‌ಗಳಲ್ಲಿ ಕಾಫಿ, ತಿಂಡಿ, ಊಟ ಗಳ ದರ ಹೆಚ್ಚಿಸಲು ರಾಜ್ಯ ಹೋಟೆಲ್ ಅಸೋಸಿಯೇಷನ್ ನಿರ್ಧರಿಸಿದೆ.

ಪ್ರತಿಯೊಂದು ಆಹಾರ ಉತ್ಪನ್ನದ ಮೇಲೆ ಕನಿಷ್ಠ ಶೇ.೧೦ ಹೆಚ್ಚಳ ಮಾಡುವ ಬಗ್ಗೆ ನಿರ್ಧರಿಸ ಲಾಗಿದೆ. ಈ ಸಂಬAಧ ಕೆಲ ದಿನಗಳ ಹಿಂದೆ ಹೋಟೆಲ್ ಮಾಲೀಕರ ಸಂಘದ ಸಭೆ ನಡೆದಿತ್ತು. ಇದೀಗ ನಾಳೆ (ಸೋಮವಾರ)ಯಿಂದ ಹೊಟೇಲ್ ಗಳಲ್ಲಿ ಹಂತಹAತವಾಗಿ ದರ ಏರಿಕೆ ಮಾಡಲು ಹೋಟೆಲ್ ಅಸೋಸಿಯೇಷನ್ ತೀರ್ಮಾನಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಕಡಿತಗೊಳಿಸಿ ದ್ದವು. ಆದರೆ, ಗ್ಯಾಸ್ ದರ ಇಳಿಕೆ ಮಾಡದ ಹಿನ್ನೆಲೆ ಹೋಟೆಲ್‌ಗಳಿಗೆ ದೊಡ್ಡ ಹೊಡೆತ ಬಿದ್ದಿದೆ ಹಾಗಾಗಿ ಹೋಟೆಲ್ ಆಹಾರಗಳ ದರ ಹೆಚ್ಚಾಗಿದೆ.

Translate »