ಗುಂಡ್ಲುಪೇಟೆ ಕ್ಷೇತ್ರದ ಅಭಿವೃದ್ಧಿಗೆ ಎಚ್‍ಎಸ್‍ಎಂ ಕೊಡುಗೆ ಅಪಾರ
ಚಾಮರಾಜನಗರ

ಗುಂಡ್ಲುಪೇಟೆ ಕ್ಷೇತ್ರದ ಅಭಿವೃದ್ಧಿಗೆ ಎಚ್‍ಎಸ್‍ಎಂ ಕೊಡುಗೆ ಅಪಾರ

August 14, 2018

ಗುಂಡ್ಲುಪೇಟೆ:  ‘ಮಾಜಿ ಸಚಿವ ದಿ.ಮಹದೇವ ಪ್ರಸಾದ್ ಅವರು ಜೀವಿತ ಅವಧಿಯ ಉದ್ದಕ್ಕೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದರು’ ಎಂದು ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್ ಹೇಳಿದರು.

ತಾಲೂಕಿನ ಬೇಗೂರಿನ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ದಿವಂಗತ ಎಚ್.ಎಸ್.ಮಹದೇವ ಪ್ರಸಾದ್ ಅವರ 60ನೇ ಹುಟ್ಟುಹಬ್ಬ ಆಚರಣೆ ಅಂಗವಾಗಿ ಎಸ್.ಎಲ್.ವಿ.ಗ್ರೂಪ್ಸ್ ಮಾಲೀಕ ಉದ್ಯಮಿ ಆರ್.ಯಶವಂತಕುಮಾರ್ ಆಯೋಜಿಸಿದ್ದ ಉಚಿತ ಕಣ್ಣು ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ನನ್ನ ಅಣ್ಣನ 60ನೇ ವರ್ಷದ ಹುಟ್ಟುಹಬ್ಬ ಆಚರಣೆ ವೇಳೆಯಲ್ಲಿ ಪ್ರತಿ ವರ್ಷವೂ ಕೂಡ ಅನೇಕ ಕಡೆ ಅವರ ಅಭಿಮಾನಿಗಳು ರಕ್ತದಾನ ಶಿಬಿರ, ಬಡರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.

ಮಹದೇವ ಪ್ರಸಾದ್ ಅವರು ಜೀವಿತಾವಧಿಯ ಉದ್ದಕ್ಕೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದಾರೆ. ಅವರಿಲ್ಲದಿದ್ದರೂ ಇಂದಿಗೂ ಅವರ ಅಭಿವೃದ್ಧಿ ಕೆಲಸಗಳೇ ಮಾತನಾಡುತ್ತಿವೆ. ಆ ಮಾದರಿಯಲ್ಲಿ ಅವರು ಕೆಲಸ ಮಾಡಿದ್ದಾರೆ. ಅವರ ಕಾಲದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಮೂಲ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಿ ಗುಂಡ್ಲುಪೇಟೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಿದ್ದಾರೆ ಎಂದರು.

ವೈದ್ಯಾಧಿಕಾರಿ ಡಾ.ಶಿವಸ್ವಾಮಿ ಮಾತನಾಡಿ, ಎಲ್ಲರಿಗೂ ಕಣ್ಣು ಪ್ರಮುಖ ಅಂಗವಾಗಿದ್ದರೂ ಕಾಲಕಾಲಕ್ಕೆ ತಪಾಸಣೆ ನಡೆಸದೆ ನಿರ್ಲಕ್ಷ್ಯವಹಿಸಲಾಗುತ್ತಿದೆ. ಹಾಗಾಗಿ, ಇಂತಹ ಶಿಬಿರಗಳನ್ನು ಸದ್ಬಳಕೆಯನ್ನು ಎಲ್ಲರು ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಉದ್ಯಮಿ ಆರ್.ಯಶವಂತಕುಮಾರ್ ಅವರು ಬಡ ರೋಗಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಿದರು. ನೂರಕ್ಕೂ ಹೆಚ್ಚು ಮಂದಿ ಕಣ್ಣಿನ ತಪಾಸಣೆ ಮಾಡಿಸಿಕೊಂಡರು.

ಶಿಬಿರದಲ್ಲಿ ಅರವಿಂದ ಕಣ್ಣಿನ ಆಸ್ಪತ್ರೆಯ ವೈದ್ಯ ಡಾ.ಶಿವಪ್ರಸನ್ನ, ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯಕಾಂತ್, ನ್ಯಾóಷನಲ್ ಅಸೋಸಿಯೇಷನ್ ಆಫ್ ಬ್ಲೈಂಡ್ಸ್ ಸಂಸ್ಥೆಯ ಸಂಯೋಜಕ ಕೆ.ರಮೇಶ್, ಡಾ.ಶ್ರೀಚಂದ್, ಡಾ.ಮೀನಾ, ಶುಶ್ರೂಷಕಿ ಲಲಿತಾ, ಮುಖಂಡರಾದ ರಮೇಶ್ ಬೇಗೂರ್, ಪಂಚಾಕ್ಷರಿ ಇದ್ದರು.

Translate »