ಡಿ. 27, ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ
ಚಾಮರಾಜನಗರ

ಡಿ. 27, ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ

December 24, 2019

ಚಾಮ ರಾಜನಗರ, ಡಿ.23- ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕಗಳ ಹಣ ಎಣಿಕೆ ಕಾರ್ಯವು ಡಿ.27 ರಂದು ಬೆಳಿಗ್ಗೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿ ಸಹಯೋಗದೊಂದಿಗೆ ನಡೆಯಲಿದೆ ಎಂದು ಶ್ರೀ ಮಲೆ ಮಹ ದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Translate »