ಮೈಸೂರು, ಅ.12(ಆರ್‍ಕೆಬಿ)- ಮೈಸೂರು ಮುಡಾ ಅಧ್ಯಕ್ಷರಾಗಿ ಇತ್ತೀ ಚೆಗಷ್ಟೇ ನೇಮಕಗೊಂಡಿರುವ ಹೆಚ್.ವಿ. ರಾಜೀವ್ ಅವರು ಮೈಸೂರು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಸತತ ನಾಲ್ಕನೇ ಬಾರಿಗೆ ಅವಿರೋಧ ಆಯ್ಕೆಯಾಗಿರುವ ಅವರನ್ನು ಮತ್ತು ನೂತನ ನಿರ್ದೇಶಕರನ್ನು ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಹಾಗೂ ಸುನೀತಾ ವೀರಪ್ಪ ಗೌಡ ಹಾಗೂ ಇತರರು ಅಭಿನಂದಿಸಿದರು.
ಹೆಚ್.ವಿ.ರಾಜೀವ್‍ಗೆ ಬ್ರಾಹ್ಮಣ ಸಂಘದಿಂದ ಅಭಿನಂದನೆ
ಮೈಸೂರು, ಅ.12(ಆರ್‍ಕೆಬಿ)- ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಪುನರಾಯ್ಕೆಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಹೆಚ್.ವಿ.ರಾಜೀವ್ ಮತ್ತು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾಗಿ ಆಯ್ಕೆಯಾದ ಅಗಸ್ತ್ಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಪ್ರÀ್ರಶಾಂತ್ ತಾತಾಚಾರ್ ಅವರನ್ನು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಮುಡಾ ಕಚೇರಿಯಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಅಗಸ್ತ್ಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಸಿ.ವಿ.ಪಾರ್ಥಸಾರಥಿ, ನಿರ್ದೇಶಕರಾದ ಪ್ರೀತಂ, ಬ್ರಾಹ್ಮಣ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಮುಳ್ಳೂರು ಗುರುಪ್ರಸಾದ್, ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಕಡಕೊಳ ಜಗದೀಶ್, ಸುಚೀಂದ್ರ, ರಘು ಭಾರದ್ವಾಜ್ ಇನ್ನಿತರರು ಇದ್ದರು.