ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ಮೂರ್ಖತನದ ಹೇಳಿಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಖಡಕ್ ನುಡಿ
ಮೈಸೂರು

ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ಮೂರ್ಖತನದ ಹೇಳಿಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಖಡಕ್ ನುಡಿ

March 10, 2020

ಬೆಂಗಳೂರು, ಮಾ.9(ಕೆಎಂಶಿ)- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಮಾತುಗಳು ಕಳೆದ ಕೆಲ ದಿನಗಳಿಂದ ಕೇಳಿಬರುತ್ತಿವೆ. ಈ ಬಗ್ಗೆ ಸ್ವತಃ ಟ್ವೀಟ್ ಮಾಡಿ ರುವ ಅವರು ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿ ರುವುದು ಮೂರ್ಖತನದ ಹೇಳಿಕೆ ಎಂದಿದ್ಧಾರೆ.

ಸಿಎಂ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಭೇಟಿ ಹಿನ್ನೆಲೆ ಯಲ್ಲಿ ರಾಜ್ಯ ರಾಜಕಾರಣದ ಪಡಸಾಲೆಯಲ್ಲಿ ಅವರು ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಕೆಲವು ಸಚಿವರು ಸಿದ್ದರಾಮಯ್ಯ ಬಿಜೆಪಿ ಸೇರಿದರೂ ಸೇರಬಹುದು ಎಂದಿದ್ದರು. ಈ ವದಂತಿಗಳಿಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರು ವುದು ಮೂರ್ಖತನದ ಹೇಳಿಕೆ. ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿನಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ. ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಆ ಪಕ್ಷ ಸೇರಲು ಸಾಧ್ಯವೇ, ಇದೊಂದು ಮೂರ್ಖತನದ ಪ್ರಚಾರ ಎಂದಿದ್ದಾರೆ. ಮತ್ತೊಂದು ಟ್ವಿಟ್‍ನಲ್ಲಿ, ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೆ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜ ಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮ ಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಎಂದಿದ್ದಾರೆ.

Translate »