ಜನರ ತೀರ್ಪಿಗೆ ತಲೆ ಬಾಗುವೆ ಕಸಾಪ ಚುನಾವಣೆಯ ಪರಾಜಿತ ಅಭ್ಯರ್ಥಿ ನಾಗರಾಜು

ಮೈಸೂರು, ನ.೨೪(ಎಂಟಿವೈ)-ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಸ್ಥಾನದ ಚುನಾವಣೆ ಯಲ್ಲಿ ಜನರು ಕೊಟ್ಟ ತೀರ್ಮಾನವನ್ನು ತಲೆಬಾಗಿ ಸ್ವೀಕರಿಸಿ, ನೂತನ ಅಧ್ಯಕ್ಷ ಮಡ್ಡಿಕೆರೆ ಗೋಪಾಲರೊಂದಿಗೆ ಕೈಜೋಡಿಸಿ ಕನ್ನಡದ ಕೆಲಸ ಮಾಡುತ್ತೇನೆ ಎಂದು ಪರಾಜಿತ ಅಭ್ಯರ್ಥಿ ಕೆ.ಎಸ್.ನಾಗರಾಜು ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕಳೆದ ೫ ವರ್ಷಗಳ ಅವಧಿಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ದ್ದೇನೆ. ಆ ಅವಧಿಯಲ್ಲಿ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರ ಮಾರ್ಗದರ್ಶನ ಮತ್ತು ಇಚ್ಛೆಯಂತೆ ೪೦೦ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಮಾಡಿದ್ದೇನೆ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ಒಪ್ಪಲೇಬೇಕು. ಹೀಗಾಗಿ ಜನರ ತೀರ್ಪಿಗೆ ನಾನು ಬದ್ಧನಾಗಿ ಕಸಾಪದ ಬೆಳವಣ ಗೆಗೆ ಶ್ರಮಿಸುತ್ತೇನೆ ಎಂದರು.

ಚುನಾವಣೆಯಲ್ಲಿ ಪರಾಭವಗೊಂಡರೂ ಕನ್ನಡ ಸಾಹಿತ್ಯ ಪರಿಷತ್‌ನಿಂದ ವಿಮುಖ ನಾಗುವುದಿಲ್ಲ. ಕನ್ನಡದ ಕೆಲಸದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುತ್ತೇನೆ. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡಿಗರ ಸಾರ್ವಭೌಮ ಸ್ವತ್ತಾಗ ಬೇಕೆ ವಿನಃ ಯಾರ ವೈಯಕ್ತಿಕ ಸ್ವತ್ತಾಗಬಾರದು. ಕಸಾಪದಲ್ಲಿ ಯಾವ ಗುಂಪುಗಾರಿಕೆ ಹಾಗೂ ವೈಯಕ್ತಿಕ ಹಿತಾಸಕ್ತಿ ಇರಬಾರದು ಎಂದರು. ಸಾಹಿತಿಗಳು, ಬುದ್ಧಿ ಜೀವಿಗಳು ಹಾಗೂ ವಿದ್ಯಾ ವಂತರೇ ಇರುವ ಸಾಹಿತ್ಯ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರೂ ಜವಾಬ್ದಾರಿಯಿಂದ ತಪ್ಪದೆ ಮತದಾನ ಕೇಂದ್ರಕ್ಕೆ ಬಂದು ನಿಮ್ಮ ಹಕ್ಕನ್ನು ಚಲಾಯಿಸುವುದರ ಮೂಲಕ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹಾಗೂ ಗೌರವವನ್ನು ಎತ್ತಿ ಹಿಡಿಯುವ ದಿಕ್ಕಿನಲ್ಲಿ ಜಾಗೃತರಾಗ ಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಲೇಖಕಿ ಎಸ್.ನಿರ್ಮಲಾ, ಕೆ.ಟಿ.ವೆಂಕಟೇಶ್, ನಿವೃತ್ತ ಶಿಕ್ಷಕ ಬೋರೇಗೌಡ, ಕೃಷ್ಣೇಗೌಡ ಇದ್ದರು.