ನನಗೆ ನನ್ನದೇ ಶಕ್ತಿ ಇದೆ, ನನ್ನ ಯಾರೂ ಮುಗಿಸಲು ಸಾಧ್ಯವಿಲ್ಲ…

ಬೆಂಗಳೂರು, ಡಿ.15(ಕೆಎಂಶಿ)-ಬಿಜೆಪಿಯಲ್ಲಿ ನನ್ನನ್ನು ಮುಗಿ ಸಲು ಷಡ್ಯಂತ್ರ ನಡೆದಿದೆ ಎಂಬ ವರದಿಗಳಲ್ಲಿ ಸತ್ಯಾಂಶ ಇಲ್ಲ. ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ, ನನಗೆ ನನ್ನದೇ ಆದ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂ ರಪ್ಪ ಇಂದಿಲ್ಲಿ ಖಡಕ್ಕಾಗಿ ನುಡಿದಿದ್ದಾರೆ.

ಪ್ರವಾಸಕ್ಕೆ ತೆರಳುವ ಮುನ್ನ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇದು ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಇದನ್ನೇ ಮುಂದುವರೆಸುತ್ತೇನೆ ಎಂದರು.

ಬಿಜೆಪಿ ನನ್ನನ್ನು ನಿರ್ಲಕ್ಷ್ಯ ಮಾಡು ತ್ತಿದೆ ಎಂಬುದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಪಕ್ಷದ ಎಲ್ಲ ಕಾರ್ಯಕ್ರಮಗಳಿಗೂ ನಾನು ಹೋಗುತ್ತಾ ಇದ್ದೇನೆ. ಸರ್ಕಾರಿ ಕಾರ್ಯಕ್ರಮಕ್ಕೆ ನಾನು ಹೋಗೊದು ಸರಿ ಇಲ್ಲ ಅಂತ ಹೋಗಿಲ್ಲ. ಪಕ್ಷದ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ನನ್ನನ್ನು ಯಾರೂ ಕರೆಯಬೇಕಾಗಿಲ್ಲ.
ನನ್ನ ಕರ್ತವ್ಯ ನಾನು ಮಾಡುತ್ತೇನೆ ಎಂದರು.ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಾಗಲೀ, ಗೊಂದಲಗ ಳಾಗಲೀ ಇಲ್ಲ. ಮಾಧ್ಯಮ ಸ್ನೇಹಿತರು ಯಾವುದನ್ನು ಸೃಷ್ಟಿ ಮಾಡಲು ಹೋಗಬೇಕಿಲ್ಲ. ನಾವೆಲ್ಲ ಒಂದಾಗಿದ್ದೇವೆ. ನಮ್ಮದು ಒಂದೇ ಅಜೆಂಡಾ. ಅದು ಮುಂದೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರೋದು ಎಂದು ಹೇಳಿದರು.

ಕೊಪ್ಪಳದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಬೇರೆ ಕಾರಣಕ್ಕೆ ಹೋಗ ಲಾಗುತ್ತಿರಲಿಲ್ಲ. ಆದರೆ ನಡ್ಡಾ ಅವರು ಭಾಗವಹಿಸುತ್ತಿರುವುದರಿಂದ ಹೋಗಲೇ ಬೇಕಾದ ಪರಿಸ್ಥಿತಿ ಬಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಇಬ್ಬರೂ ಒಟ್ಟಾಗಿ ಕಾರ್ಯಕ್ರಮದಲ್ಲಿ ಸ್ವಾಗತಿಸುತ್ತೇವೆ. ನಮ್ಮಲ್ಲಿ ಭಿನ್ನಾಭಿಪ್ರಾಯ, ಗೊಂದಲ ಇಲ್ಲ ಎಂದರು.

ನಡ್ಡಾ ನೇತೃತ್ವದಲ್ಲಿ ರಾಜ್ಯದಲ್ಲಿ ಹೆಚ್ಚಿನ ಕಾರ್ಯಕ್ರಮಗಳು ನಡೆಯುತ್ತವೆ. ಇದೆಲ್ಲ ದ್ದರ ಪರಿಣಾಮ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದರು.ಕೊಪ್ಪಳ ಕಾರ್ಯಕ್ರಮಕ್ಕೆ ಕೊನೇ ಘಳಿಗೆಯಲ್ಲಿ ನನಗೆ ಆಹ್ವಾನ ಬಂದಿಲ್ಲ. ನಾನು ಹೋಗುವ ಸ್ಥಿತಿಯಲ್ಲಿರಲಿಲ್ಲ. ಇದಕ್ಕೆ ನಾನು ಹೋಗ ದಿರಲು ನಿರ್ಧರಿಸಿದ್ದೆ. ನಡ್ಡಾ ಬರ್ತಿದ್ದಾರೆ ಅದಕ್ಕೆ ಹೋಗುತ್ತಿದ್ದೇನೆ ಎಂದರು.

ಮಾಜಿ ಸಚಿವ ಜನಾರ್ದನರೆಡ್ಡಿ ಅವರು ನನ್ನನ್ನು ಭೇಟಿಯಾಗಿದ್ದರು. ನನ್ನೊಂದಿಗೆ ಮಾತನಾಡಿದ್ದಾರೆ. ನಮ್ಮ ಜತೆಗೇ ಇರು ತ್ತಾರೆ. ಅವರನ್ನೂ ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ. ಅವರ ಮೇಲೆ ಸಣ್ಣ-ಪುಟ್ಟ ಪ್ರಕರಣಗಳಿದ್ದು, ಇತ್ಯರ್ಥವಾದ ಮೇಲೆ ಬಿಜೆಪಿಗೆ ಬರುತ್ತಾರೆ. ಗಂಗಾವತಿ ಯಲ್ಲಿ ಅವರು ಮನೆ ಮಾಡಿರುವುದು ಗೊಂದಲ ಸೃಷ್ಟಿಯಾಗಿದೆ. ಪಕ್ಷಕ್ಕೆ ಬಂದ ಮೇಲೆ ಸ್ಪರ್ಧೆ ಎಲ್ಲಿ ಎಂಬ ಬಗ್ಗೆ ತೀರ್ಮಾನ ವಾಗುತ್ತದೆ. ರೆಡ್ಡಿ ಅವರ ಪರವಾಗಿ ಪಕ್ಷದ ಮುಖಂಡರು ಇದ್ದಾರೆ. ಮುಂದೆ ಯಾವುದೇ ಗೊಂದಲವಿಲ್ಲದೆ ಅವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತದೆ ಎಂದು ಯಡಿಯೂರಪ್ಪ ಹೇಳಿದರು.