ಭಯೋತ್ಪಾದನೆ ತೊಡೆದು ಹಾಕಲು ನಾನು ಬಯಸಿದರೆ,  ವಿರೋಧಿಗಳು ನನ್ನನ್ನೇ ಮುಗಿಸಲು ಹೊಂಚು ಹಾಕುತ್ತಿದ್ದಾರೆ
ಮೈಸೂರು

ಭಯೋತ್ಪಾದನೆ ತೊಡೆದು ಹಾಕಲು ನಾನು ಬಯಸಿದರೆ, ವಿರೋಧಿಗಳು ನನ್ನನ್ನೇ ಮುಗಿಸಲು ಹೊಂಚು ಹಾಕುತ್ತಿದ್ದಾರೆ

March 4, 2019

ಪಾಟ್ನಾ: ನಾನು ಭಯೋತ್ಪಾದನೆಯನ್ನು ತೊಡೆದು ಹಾಕಲು ಬಯಸುತ್ತಿದ್ದೇನೆ. ಆದರೆ, ವಿರೋಧಿಗಳು ನನ್ನನ್ನು ಮುಗಿಸಲು ಹೊಂಚು ಹಾಕುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಹೇಳಿದರು.

ಬಿಹಾರದ ಪಾಟ್ನಾದಲ್ಲಿ ನಡೆದ ಎನ್‍ಡಿಎ ರ್ಯಾಲಿಯನ್ನು ಉದ್ದೇ ಶಿಸಿ ಮಾತನಾಡಿದ ಅವರು, ಭಯೋತ್ಪಾದಕರ ತರಬೇತಿ ಶಿಬಿರ ಗಳ ಮೇಲೆ ವಾಯು ದಾಳಿ ನಡೆದ ಬಳಿಕವೂ ಕಾಂಗ್ರೆಸ್ ಮತ್ತಿ ತರ ಪಕ್ಷಗಳವರು ತಮ್ಮ ಹೇಳಿಕೆಗಳ ಮೂಲಕ ಪಾಕಿಸ್ತಾನವನ್ನು ಮೆಚ್ಚಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ವಿರೋಧ ಪಕ್ಷಗಳು ಮೊನ್ನೆ ನಡೆದ ಏರ್ ಸ್ಟ್ರೈಕ್‍ನ ಪುರಾವೆ ಗಳನ್ನು ಕೇಳುತ್ತಿವೆ. ಭಾರತೀಯ ಸೇನೆಯಲ್ಲಿನ ಆತ್ಮಬಲವನ್ನು ಕುಗ್ಗಿಸಲು ಪ್ರಯತ್ನಿಸುತ್ತಿವೆ. ಈ ಮೂಲಕ ಶತ್ರು ರಾಷ್ಟ್ರದ ಬಲ ಹೆಚ್ಚಿಸಲು ವಿರೋಧ ಪಕ್ಷಗಳು ಹೊರಟಿವೆಯೇ? ಎಂದು ಅವರು ಪ್ರಶ್ನಿಸಿದರು. ಭಾರತೀಯರೆಲ್ಲ ಒಗ್ಗಟ್ಟಾಗಿ ಗಟ್ಟಿ ಧ್ವನಿಯಲ್ಲಿ ನಮ್ಮ ಯೋಧರಿಗೆ ಸಲಾಂ ಎನ್ನುತ್ತಿರುವಾಗ, 21 ವಿರೋಧ ಪಕ್ಷಗಳ ನಾಯಕರು ಅದನ್ನು ಖಂಡಿಸಿ ನಿರ್ಣಯ ಕೈಗೊಳ್ಳಲು ದೆಹಲಿಯಲ್ಲಿ ಸಭೆ ಸೇರುತ್ತಿದ್ದಾರೆ. ಪುಲ್ವಾಮಾ ದಾಳಿಯ ಬಳಿಕ ಇಡೀ ರಾಷ್ಟ್ರ ನಮ್ಮ ಸೈನಿಕರ ಕುಟುಂಬದೊಡನೆ ಇದೆ ಎಂದ ಮೋದಿ, ಇದು ನವಭಾರತ. ನಾವೀಗ ನಮ್ಮ ಸೈನಿಕರ ಹತ್ಯೆಯಾ ದರೆ ಸುಮ್ಮನೇ ಕೈಕಟ್ಟಿ ಕೂರಲಾರೆವು ಎಂದು ಗುಡುಗಿದರು.
ಪುಲ್ವಾಮಾದಲ್ಲಿ ಆತ್ಮಹತ್ಯಾ ದಾಳಿ ನಡೆಸಿ 40 ಸಿಆರ್‍ಪಿಎಫ್ ಯೋಧರನ್ನು ಬಲಿ ತೆಗೆದುಕೊಂಡ ಪಾಕಿಸ್ತಾನ್ ಮೂಲದ ಜೈಷ್ ಉಗ್ರ ಸಂಘಟನೆಯ ಭಯೋತ್ಪಾದಕ ದಾಳಿಯನ್ನು ಜಗತ್ತಿನ ಹಲವು ದೇಶಗಳು ಖಂಡಿಸಿದ್ದವು. ಭಯೋತ್ಪಾದನೆ ವಿರುದ್ಧ ಭಾರತ ನಡೆಸುವ ಸಮರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಆ ದೇಶಗಳು ಘೋಷಿಸಿವೆ ಎಂದು ಪ್ರಧಾನಿ ಮೋದಿ ಹೇಳಿದರು.

ರ್ಯಾಲಿಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‍ಕುಮಾರ್, ಲೋಕಶಕ್ತಿ ಪಕ್ಷದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಸಹ ಭಾಗವಹಿಸಿದ್ದರು. ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಅವರುಗಳು ಪ್ರಶಂಸನೀಯ ಕೆಲಸ ಮಾಡಿದ್ದಾರೆ ಎಂದು ಪ್ರಶಂಸಿಸಿದ ಮೋದಿ, ಮುಂದಿನ ಲೋಕಸಭಾ ಚುನಾ ವಣೆಯಲ್ಲಿ ಬಿಹಾರದಲ್ಲಿ ಎನ್‍ಡಿಎ ಮೈತ್ರಿಕೂಟ ಹೆಚ್ಚು ಸ್ಥಾನ ಗಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ಸರ್ಕಾರವನ್ನು ಹಾಡಿ ಹೊಗಳಿದ ಪಿ. ಚಿದಂಬರಂ!

ಚೆನ್ನೈ: ಸದಾಕಾಲ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದ ಕಾಂಗ್ರೆಸ್‍ನ ಹಿರಿಯ ನಾಯಕ, ಮಾಜಿ ಸಚಿವ ಪಿ.ಚಿದಂಬರಂ ಅವರು ಪ್ರಧಾನಿ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವನ್ನು ಹಾಡಿ ಹೊಗಳುವ ಮೂಲಕ ಅಚ್ಚರಿ ಮೂಡಿಸಿರುವುದಲ್ಲದೇ, ರಾಜಕೀಯ ಪಂಡಿತರು ಹುಬ್ಬೇರಿಸು ವಂತೆ ಮಾಡಿದ್ದಾರೆ.

ಇಂದಿಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಸರ್ಕಾರ ಹಮ್ಮಿ ಕೊಂಡಿರುವ ಗಂಗಾ ಸ್ವಚ್ಛತಾ ಅಭಿಯಾನ, ಹೆದ್ದಾರಿಗಳ ನಿರ್ಮಾಣ ಹಾಗೂ ಆಧಾರ್‍ಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರಗಳನ್ನು ಪ್ರಶಂಸಿಸಿ ದ್ದಾರೆ. ಮೋದಿ ನೇತೃತ್ವದ ಸರ್ಕಾರದ ದೃಢ ನಿರ್ಧಾರ ಹಾಗೂ ಪರಿಶ್ರಮದಿಂದ ಗಂಗಾ ನದಿ ಶುದ್ಧಗೊಂಡಿದೆ. ಈ ವಿಚಾರವಾಗಿ ನಾನು ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ. ಈಗಾಗಲೇ ಎನ್‍ಡಿಎ ಸರ್ಕಾರ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯಕ್ರಮವೂ ಯಶಸ್ಸು ಕಂಡಿದೆ. ಇಷ್ಟೇ ಅಲ್ಲದೆ ಆಧಾರ್ ಜಾರಿಗೊಳಿಸಿ ಇದನ್ನು ಮತ್ತಷ್ಟು ಬಲಪಡಿಸಿದೆ ಎಂದು ತಿಳಿಸಿದ್ದಾರೆ. ಆದರೆ ನೋಟು ಅಮಾನ್ಯೀಕರಣ ನಿರ್ಧಾರದಿಂದಾಗಿ ನನಗೆ ತುಂಬಾ ಕೋಪ ಬಂದಿದೆ. ಜೊತೆಗೆ ಜಿಎಸ್‍ಟಿ ಎಂಬುದು ಅತಿ ದೊಡ್ಡ ತಪ್ಪು ಎಂದು ತಿಳಿಸಿದ್ದಾರೆ.

Translate »