ನಾನು ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದ ಶಾಸಕ ಎನ್.ಮಹೇಶ್
ಮೈಸೂರು

ನಾನು ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದ ಶಾಸಕ ಎನ್.ಮಹೇಶ್

May 26, 2019

ಚಾಮರಾಜನಗರ: ನಾನು ಬಿಜೆಪಿಗೆ ಹೋಗುವ ಪ್ರಶ್ನೆಯೆ ಇಲ್ಲ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ತಿಳಿಸಿದ್ದಾರೆ.

ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವದಂತಿಯ ಬಗ್ಗೆ ಮಾತನಾಡಿದ ಅವರು ನಾನು ಬಿಜೆಪಿಗೆ ಹೋಗುವ ಮಾತೇ ಇಲ್ಲ. ನಾನು ಬಿಎಸ್‍ಪಿ ಪಕ್ಷದ ಶಿಸ್ತಿನ ಸಿಪಾಯಿ ಯಾಗಿದ್ದೇನೆ. ಪಕ್ಷದ ಹೈಕಮಾಂಡ್ ಮಾಯಾವತಿ ಅವರು ಹೇಳಿದರೆ ನಾನು ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದರು.

ಇದಕ್ಕೂ ಮೊದಲು ನನ್ನ ವಿರುದ್ಧದ ಹೇಳಿಕೆಗಳು ಕೇವಲ ಉಹಾಪೆÇೀಹಗಳು ಅಷ್ಟೇ. ನಾನು ಈಗ ಸಮ್ಮಿಶ್ರ ಸರ್ಕಾರದಿಂದ ತಾಂತ್ರಿಕವಾಗಿ ಹೊರಗುಳಿದಿದ್ದೇನೆ ಎಂದು ಅವರು ತಮ್ಮ ವಿರುದ್ಧದ ಹೇಳಿಕೆಗಳ ಬಗ್ಗೆ ಸ್ಪಷ್ಟ ಉತ್ತರ ನೀಡಿದ್ದಾರೆ. ಬಿಎಸ್‍ಪಿ ಹೈಕಮಾಂಡ್ ತೆಗದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಸೂಚನೆ ನೀಡಿದ್ದಾರೆ.

Translate »