ಮೈಸೂರು, ಜು.26(ಪಿಎಂ)- ಎನ್‍ಆರ್ ವಿಧಾನಸಭಾ ಕ್ಷೇತ್ರದ ಕೊರೊನಾ ಟಾಸ್ಕ್‍ಫೋರ್ಸ್ ಅಧ್ಯಕ್ಷನಾಗಿ ನಾನೇ ಇರುತ್ತೇನೆ ಎಂದು ಕ್ಷೇತ್ರದ ಶಾಸಕ ತನ್ವೀರ್‍ಸೇಠ್ ಹೇಳಿದರು. ತನ್ವೀರ್ ಅವರಿಗೆ ಅನಾ ರೋಗ್ಯವಾಗಿದ್ದ ಕಾರಣ ಸಂಸದ ಪ್ರತಾಪ್ ಸಿಂಹ ಅವರಿಗೆ ಎನ್‍ಆರ್ ಕ್ಷೇತ್ರದ ಟಾಸ್ಕ್‍ಫೋರ್ಸ್ ಜವಾಬ್ದಾರಿ ನೀಡಲಾಗಿತ್ತು.
ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವ ರಿಗೆ ಪ್ರತಿಕ್ರಿಯೆ ನೀಡಿದ ಅವರು, ಅನಾರೋಗ್ಯ ಕಾರಣದಿಂದ ಜನರ ನಡುವೆ ಇರಲು ಸಾಧ್ಯವಾಗಿರಲಿಲ್ಲ. ಕ್ಷೇತ್ರದ ಬಗ್ಗೆ ಮಾಹಿತಿ ಪಡೆಯು ತ್ತಿದ್ದೆ. ಇದೀಗ ಚೇತರಿಸಿಕೊಳ್ಳುತ್ತಿದ್ದು, ಈವರೆಗೆ ಕ್ಷೇತ್ರದಲ್ಲಿ ಏನೆಲ್ಲಾ ಆಗಿದೆ ಎಂಬ ಬಗ್ಗೆ ಜಿಲ್ಲಾಡಳಿತ ಮತ್ತು ನಗರ ಪಾಲಿಕೆಯಿಂದ ಮಾಹಿತಿ ಪಡೆದುಕೊಂಡಿದ್ದೇನೆ ಎಂದರು.
ಕ್ಷೇತ್ರದಲ್ಲಿ ಈಗಾಗಲೇ ಖಾಸಗಿಯಾಗಿ ಕೋವಿಡ್ ಸೆಂಟರ್ ಪ್ರಾರಂಭ ಮಾಡಲಾ ಗಿದೆ. ಇನ್ನು ಎರಡು ಪ್ರಾರಂಭವಾಗುವ ಹಂತದಲ್ಲಿವೆ. ಕ್ಷೇತ್ರದಲ್ಲಿ ಖಾಸಗಿ ಆಸ್ಪತ್ರೆಯವರೂ ಸಾಕಷ್ಟು ಕೆಲಸ ಪ್ರಾರಂಭ ಮಾಡಿದ್ದಾರೆ. ಒಟ್ಟಾರೆ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಾಗ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಪ್ರಚಾರ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಿಗೆ ನಾನು ವಾಪಸ್ ಬಂದಿರುವ ಬಗ್ಗೆ ಮಾಹಿತಿ ನೀಡಿದ್ದೇನೆ. ಈಗಾಗಲೇ ಕ್ಷೇತ್ರದಲ್ಲಿ ಪಾಲಿಕೆ ಸದಸ್ಯರು, ಧರ್ಮಗುರುಗಳು, ರಾಜಕೀಯ ಮುಖಂ ಡರು ಕೊರೊನಾ ನಿಯಂತ್ರಣದ ಕೆಲಸ ಪ್ರಾರಂಭ ಮಾಡಿದ್ದು, ಅವರಿಗೆ ಸಹಕಾರ ನೀಡುತ್ತೇನೆ. ಬಹುತೇಕ ಶಂಕಿತರು ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಲು ಭಯ ಪಡುತ್ತಿದ್ದಾರೆ. ಭಯ ದಿಂದ ಅವರನ್ನು ಹೊರತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿವರಿಸಿದರು.