ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್‍ನಂತೆ ಕೆಲಸ ಮಾಡಿದೆ…
ಮೈಸೂರು

ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್‍ನಂತೆ ಕೆಲಸ ಮಾಡಿದೆ…

August 26, 2019
  • ಮಾಜಿ ಸಿಎಂ ಸಿದ್ದರಾಮಯ್ಯನವರೇ ನನ್ನ ಮೊದಲ ಶತ್ರು
  • ಶಾಸಕರ ರಾಜೀನಾಮೆಗೂ ಸಿದ್ದರಾಮಯ್ಯ ನೇರ ಕಾರಣ
  • ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶದ ಕಿಡಿ

ಬೆಂಗಳೂರು, ಆ.25-ಮೈತ್ರಿ ಸರ್ಕಾರ ಪತನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆರೋಪಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೂಡ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮೈತ್ರಿ ಸರ್ಕಾರ ದಲ್ಲಿ ನಾನು ಮುಖ್ಯಮಂತ್ರಿಯಾಗಿರಲಿಲ್ಲ. ಕ್ಲರ್ಕ್ ರೀತಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಖಾಸಗಿ ವೆಬ್‍ಸೈಟ್‍ವೊಂದಕ್ಕೆ ಸಂದರ್ಶನ ನೀಡಿದ ಕುಮಾರಸ್ವಾಮಿ, ಜಿಲ್ಲಾಧಿಕಾರಿ ವರ್ಗಾ ವಣೆ ಸೇರಿದಂತೆ ಎಲ್ಲಾ ವರ್ಗಾವಣೆಗಳನ್ನು ಕಾಂಗ್ರೆಸ್‍ನವರು ಹೇಳಿದಂತೆ ಮಾಡಬೇಕಾ ಗಿತ್ತು ಎಂದು ತಮ್ಮ ಅಳಲನ್ನು ತೋಡಿಕೊಂಡರಲ್ಲದೆ, ಮುಖ್ಯಮಂತ್ರಿ ಸ್ಥಾನದಿಂದ ತಮ್ಮನ್ನು ಕೆಳಗಿಳಿಸಲು ಕುತಂತ್ರ ರಾಜಕಾರಣ ಮಾಡಿರುವ ಸಿದ್ದರಾಮಯ್ಯ ಅವರೇ ನನ್ನ ಮೊದಲ ಶತ್ರುವೇ ಹೊರತು, ಬಿಜೆಪಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈತ್ರಿ ಸರ್ಕಾರ ಮುಂದುವರೆಸಬೇಕೆಂಬುದು ಕಾಂಗ್ರೆಸ್ ಹೈಕಮಾಂಡ್‍ನ ಆಶಯ ವಾಗಿದ್ದರೂ, ಅದು ಸಿದ್ದರಾಮಯ್ಯನವರಿಗೆ ಇಷ್ಟವಿರಲಿಲ್ಲ.

ಹೀಗಾಗಿ ಪ್ರತಿ ನಿತ್ಯ ಸರ್ಕಾರವನ್ನು ಪತನಗೊಳಿಸಲು ಪ್ರಯತ್ನಿಸುತ್ತಿದ್ದರು. ತಮ್ಮ ಆಪ್ತ ಶಾಸಕ ರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುವ ಮೂಲಕ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿ ದ್ದಾರೆ. ಶಾಸಕರ ರಾಜೀನಾಮೆಗೂ ಸಿದ್ದರಾಮಯ್ಯನವರೇ ನೇರ ಕಾರಣ ಎಂದು ಆರೋಪಿಸಿ ದರು. ಉದ್ದೇಶಪೂರ್ವಕವಾಗಿಯೇ ಸಿದ್ದರಾಮಯ್ಯ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ ಸರ್ಕಾರ ಪತನಗೊಳಿಸಿದ್ದಾರೆ. ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಎಂ ಯಡಿಯೂರಪ್ಪ ಸಿಬಿಐ ತನಿಖೆಗೆ ವಹಿಸಿರುವುದರ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಎಂದು ಆರೋಪಿಸಿದ ಅವರು, ಒಂದು ವೇಳೆ ಮೈತ್ರಿ ಸರ್ಕಾರ ಪತನಗೊಂಡರೆ, ತಾವೇ ಮುಖ್ಯಮಂತ್ರಿ ಆಗುವ ಲೆಕ್ಕಾ ಚಾರದಲ್ಲಿ ಸಿದ್ದರಾಮಯ್ಯ ಇದ್ದರು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ನಾನು ಕೈಗೊಂಡ ತೀರ್ಮಾನಗಳ ವಿರುದ್ಧ ತಮ್ಮ ಆಪ್ತ ಶಾಸಕರನ್ನು `ಛೂ’ ಬಿಡುವ ಮೂಲಕ ಬಂಡಾಯಕ್ಕೆ ನಾಂದಿ ಹಾಡಿದ್ದರು. ಶಾಸಕರನ್ನು ವಿಶೇಷ ವಿಮಾನದಲ್ಲಿ ಮುಂಬೈಗೆ ಕಳುಹಿಸುವ ಮೂಲಕ ಸರ್ಕಾರದ ಪತನಕ್ಕೆ ಕಾರಣವಾದರು. ಕಾಂಗ್ರೆಸ್ ಹೈಕಮಾಂಡ್ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ನೀಡಿರಲಿಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

 

Translate »