ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಉಲ್ಲಂಘಿಸಿದರೆ 3 ವರ್ಷ ಶಿಕ್ಷೆ
ಮೈಸೂರು

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಉಲ್ಲಂಘಿಸಿದರೆ 3 ವರ್ಷ ಶಿಕ್ಷೆ

March 30, 2019

ಮೈಸೂರು: ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಉಲ್ಲಂ ಘಿಸುವವರಿಗೆ ಮೂರು ವರ್ಷ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗುತ್ತದೆ ಎಂದು ಮೈಸೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಇಂದಿಲ್ಲಿ ತಿಳಿಸಿದರು.

ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆ ರಾಜೇಂದ್ರ ಸಭಾಂಗಣದಲ್ಲಿ ಶುಕ್ರವಾರ ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರಗಳ (ನಿಷೇಧ ಕಾಯ್ದೆ) ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಂಟಿಯಾಗಿ `ಭೇಟಿ ಬಚಾವೋ ಭೇಟಿ ಪಡಾವೋ’ ವಿಷಯ ಕುರಿತ ಜನ ಜಾಗೃತಿ ಹಾಗೂ ಜಿಲ್ಲಾ ಮಟ್ಟದ ಪಿಸಿ ಮತ್ತು ಪಿಎನ್‍ಡಿಪಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯಾರೂ ಈ ಕಾಯ್ದೆಯನ್ನು ಕಾನೂನು ಬಾಹಿರವಾಗಿ ಎರಡನೇ ಬಾರಿಯೂ ಉಲ್ಲಂಘಿಸುತ್ತಾರೋ ಅಂಥವರಿಗೆ 5 ವರ್ಷಗಳ ಶಿಕ್ಷೆ ಇದೆ. ಕಟ್ಟುನಿಟ್ಟಾಗಿ ಕ್ರಮ ವಹಿಸಲಾಗುವುದು. ಇದರ ವಿಚಾರವಾಗಿ ಅರಿವು ಮೂಡಿಸಲು ಇಂತಹ ಕಾರ್ಯಾ ಗಾರ ಬಹಳ ಉಪಯುಕ್ತವಾಗಿದೆ ಎಂದು ಹೇಳಿದರು. ಜಿಲ್ಲೆಯ ರೇಡಿಯಾಲಜಿಸ್ಟ್, ಸೋನಾಲಜಿಸ್ಟ್, ಗೈನಕಾಲಜಿಸ್ಟ್, ಆಡಳಿತ ವೈದ್ಯಾಧಿಕಾರಿಗಳು, ತಾಲೂಕು ಆರೋ ಗ್ಯಾಧಿಕಾರಿಗಳು, ಖಾಸಗಿ ಆಸ್ಪತ್ರೆ ಮುಖ್ಯ ಸ್ಥರು, ಸ್ಟಾಫ್ ನರ್ಸ್‍ಗಳು ಇನ್ನಿತರರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಗಾರದ ಉದ್ಘಾಟನೆ ಸಂದರ್ಭ ದಲ್ಲಿ ಸಿವಿಲ್ ನ್ಯಾಯಾಧೀಶ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಬಿ.ಪಿ.ದೇವಮಾನೆ, ಜಿಪಂ ಸಿಇಓ ಕೆ.ಜ್ಯೋತಿ, ವಿಭಾಗೀಯ ಸಹ ನಿರ್ದೇಶಕ ಎ.ರಾಮಚಂದ್ರ ಬಾಯಿರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಂ.ಪಶುಪತಿ ಇನ್ನಿತರರಿದ್ದರು.

Translate »