ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ದೆಹಲಿ ನಾಯಕರಿಗೆ ಂಖಿಒ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಒಂದು ಕುಟುಂಬಕ್ಕೆಂಖಿಒ
ಮಂಡ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ದೆಹಲಿ ನಾಯಕರಿಗೆ ಂಖಿಒ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಒಂದು ಕುಟುಂಬಕ್ಕೆಂಖಿಒ

December 31, 2022

ಮಂಡ್ಯ, ಡಿ.30-ಕಾಂಗ್ರೆಸ್ ಭ್ರಷ್ಟಾಚಾರಿ ಪಕ್ಷ, ಜೆಡಿಎಸ್ ಒಂದು ಕುಟುಂಬ ಪಕ್ಷ ವಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ದೆಹಲಿ ನಾಯಕರಿಗೆ ಎಟಿಎಂ ಆಗುತ್ತದೆ. ಜೆಡಿಎಸ್ ಬಂದರೆ ಒಂದು ಕುಟುಂಬದ ಎಟಿಎಂ ಆಗುತ್ತದೆ ಎಂದ ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಜ್ಯದಲ್ಲಿ ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರ ಮುಕ್ತ ಗೊಳಿಸಲು ಮೋದಿ ನೇತೃತ್ವದ ಡಬ್ಬಲ್ ಎಂಜಿನ್ ಸರ್ಕಾರ ಇನ್ನೂ ಐದು ವರ್ಷ ಕರ್ನಾಟಕದಲ್ಲಿ ಆಡಳಿತ ನಡೆಸಬೇಕಾದ ಅನಿವಾರ್ಯತೆ ಇದೆ ಎಂದರು.

ಮಂಡ್ಯ ವಿಶ್ವವಿದ್ಯಾನಿಲಯದ (ಬಾಯ್ಸ್ ಕಾಲೇಜ್) ಆವರಣದಲ್ಲಿ ಇಂದು ನಡೆದ ಬಿಜೆಪಿ ಜನ ಸಂಕಲ್ಪ ಸಮಾವೇಶವನ್ನು ದ್ದೇಶಿಸಿ ಮಾತನಾಡಿದ ಅವರು, ಈ ಭಾಗದ ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜಾತಿವಾದಿಗಳು ಮಾತ್ರವಲ್ಲದೇ ಭ್ರಷ್ಟಾಚಾರದಲ್ಲಿ ತೊಡಗಿದ್ದವು. ಜೊತೆಗೆ ಈ ಪಕ್ಷಗಳು ಕ್ರಿಮಿನಲ್‍ಗಳನ್ನು ಪೋಷಿ ಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದವು. ಈ ಪಕ್ಷಗಳು ಅಧಿಕಾರ ದಲ್ಲಿದ್ದಾಗ ದಲಿತರು ಹಾಗೂ ಆದಿವಾಸಿ ಗಳಿಗೆ ಅನ್ಯಾಯ ಮಾಡಿವೆ ಎಂದರು.

ಆದರೆ ಬಿಜೆಪಿ ದಲಿತರು ಹಾಗೂ ಆದಿ ವಾಸಿಗಳ ಪರವಾಗಿದ್ದು, ದಲಿತರಾದ ರಮಾ ನಾಥ ಕೋವಿಂದ್, ಆದಿವಾಸಿ ಮಹಿಳೆ ಯಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಗಳನ್ನಾಗಿ ಮಾಡಿದೆ. ದಲಿತರಿಗೆ ಮತ್ತು ಆದಿವಾಸಿಗಳಿಗೆ ರಾಷ್ಟ್ರದ ಅತ್ಯುನ್ನತ ಅಧಿಕಾರ ನೀಡಿದ ದೇಶದ ಏಕೈಕ ಪಕ್ಷ ಬಿಜೆಪಿ ಎಂದರು. 2018ರಲ್ಲಿ ನಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷನಾಗಿದ್ದಾಗ ಮಂಡ್ಯದಲ್ಲೇ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದೆ ಎಂದ ಅವರು, ಈಗಲೂ ಕೂಡ ಮಂಡ್ಯ ದಿಂದಲೇ ಚುನಾವಣಾ ಪ್ರಚಾರ ಆರಂಭಿಸಿ ದ್ದೇನೆ ಎಂದರು. 2019ರಲ್ಲಿ ನರೇಂದ್ರ ಮೋದಿಯವರು 2ನೇ ಬಾರಿಗೆ ಪ್ರಧಾನಿ ಯಾಗಲು ಕರ್ನಾಟಕದ ಕೊಡುಗೆ ಅಪಾರ ವಾಗಿದ್ದು, ನೀವು ಶೇ.52ರಷ್ಟು ಮತ ನೀಡಿ, 26 ಸಂಸದರನ್ನು ಗೆಲ್ಲಿಸಿಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದರು. ಈ ಬಾರಿ ಚುನಾವಣೆಯಲ್ಲಿ
ಮಂಡ್ಯ ಮತ್ತು ಮೈಸೂರು ಭಾಗದಿಂದಲೂ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಸಿಗಲಿವೆ ಎಂಬ ವಿಶ್ವಾಸ ನನಗಿದೆ. ಮಂಡ್ಯ ಹಾಗೂ ಮೈಸೂರು ಭಾಗದ ಜನರಿಂದ ಮತ ಹಾಕಿಸಿಕೊಂಡ ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಭಾಗದ ಜನರಿಗೆ ಏನನ್ನೂ ಮಾಡಿಲ್ಲ ಎಂದ ಅವರು, ರೈತರಿಗೆ ಅನುಕೂಲವಾಗುವುದು ಕಾಂಗ್ರೆಸ್‍ಗೆ ಬೇಕಿಲ್ಲ. ಹೀಗಾಗಿ ಅವರು ಅಧಿಕಾರದಲ್ಲಿದ್ದಾಗ ಮೈಷುಗರ್ ಕಾರ್ಖಾನೆಯನ್ನು ಆರಂಭಿಸಿಲ್ಲ. ಬಸವರಾಜ ಬೊಮ್ಮಾಯಿ ಅವರು ಮೈಷುಗರ್ ಕಾರ್ಖಾನೆ ಆರಂಭಿಸಿ, ರೈತರ ನೆರವಿಗೆ ನಿಂತಿದ್ದಾರೆ ಎಂದು ಶ್ಲಾಘಿಸಿದರು. ಮೈಸೂರು ಮತ್ತು ಮಂಡ್ಯ ಭಾಗದ ಜನರು ಬಿಜೆಪಿಯನ್ನು ಬೆಂಬಲಿಸಿದರೆ ಮೋದಿ ನೇತೃತ್ವದ ಡಬ್ಬಲ್ ಎಂಜಿನ್ ಸರ್ಕಾರ ಈ ಪ್ರದೇಶಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುತ್ತದೆ ಎಂದರಲ್ಲದೆ, ಮೈಸೂರು-ಬೆಂಗಳೂರು ಎಕ್ಸ್‍ಪ್ರೆಸ್ ಹೈವೇ ತಂದದ್ದು ಹಾಗೂ ಮೈಸೂರು ಮತ್ತು ಬೆಂಗಳೂರು ನಡುವೆ ರೈಲ್ವೇ ಡಬ್ಬಲ್ ಟ್ರ್ಯಾಕ್ ಮಾಡಿದ್ದು ಬಿಜೆಪಿ ಸರ್ಕಾರ ಎಂದು ಹೇಳಿದರು.

ಕುರುಬ ಸಮುದಾಯವನ್ನು ಎಸ್‍ಟಿಗೆ ಸೇರ್ಪಡೆಗೊಳಿಸುವ ಮೂಲಕ ಲಕ್ಷಾಂತರ ಜನರಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದು ಬಿಜೆಪಿ ಸರ್ಕಾರವೇ ಹೊರತು ಬೇರ್ಯಾರೂ ಅಲ್ಲ ಎಂದು ಹೇಳಿದ ಅವರು, ನರೇಂದ್ರ ಮೋದಿಯವರು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಡಿ ತಲಾ 6 ಸಾವಿರ ರೂ.ಗಳನ್ನು ನೀಡಿದರೆ, ಆಗ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಅದಕ್ಕೆ 4 ಸಾವಿರ ಸೇರಿಸಿ ಕರ್ನಾಟಕದ ರೈತರಿಗೆ 10 ಸಾವಿರ ರೂ. ಸಿಗುವಂತೆ ಮಾಡಿದರು ಎಂದರು.

ಸಿದ್ದರಾಮಯ್ಯನವರ ಸರ್ಕಾರ ಪಿಎಫ್‍ಐ ಅನ್ನು ನಿಷೇಧ ಮಾಡಲಿಲ್ಲ. ಬದಲಾಗಿ ಪಿಎಫ್‍ಐ ಮೇಲಿದ್ದ 156 ಕೇಸ್‍ಗಳನ್ನು ವಾಪಸ್ ಪಡೆಯಿತು. ಆದರೆ ನರೇಂದ್ರ ಮೋದಿ ಸರ್ಕಾರ ಪಿಎಫ್‍ಐ ನಿಷೇಧಿಸಿ ಭಯೋತ್ಪಾದನೆಯನ್ನು ತಡೆದಿದೆ ಎಂದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸದಾ ಕಾಲ ರೈತರು ಹಾಗೂ ಬಡವರ ಪರ ಇದ್ದು, ದೇಶದ 80 ಕೋಟಿ ಜನರಿಗೆ ತಲಾ 5 ಕೆ.ಜಿ.ಅಕ್ಕಿಯನ್ನು ಕೊಟ್ಟಿದ್ದೇವೆ. ಬಡವರ ಮನೆಗೆ ಬೆಳಕು ನೀಡುವುದರ ಜೊತೆಗೆ ಶೌಚಾಲಯ ನಿರ್ಮಿಸಿ ಅವರಿಗೆ ಗೌರವದ ಬದುಕು ಕಲ್ಪಿಸಿಕೊಟ್ಟಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಲಸಿಕೆ ನೀಡಿ ಜನರ ಪ್ರಾಣ ಉಳಿಸಿದ್ದೇವೆ ಎಂದು ಅವರು ಹೇಳಿದರು. ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಗೋಪಾಲಯ್ಯ, ಅಶ್ವತ್ಥನಾರಾಯಣ, ಕೆ.ಸಿ.ನಾರಾಯಣಗೌಡ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ನಿರಂಜನಕುಮಾರ್, ಪ್ರೀತಂಗೌಡ, ಎನ್.ಮಹೇಶ್, ಸಿ.ಪಿ.ಯೋಗೇಶ್ವರ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ನಿರ್ಮಲ್ ಕುಮಾರ್ ಸುರಾಣ, ಮೈಲ್ಯಾಕ್ ಅಧ್ಯಕ್ಷ ಆರ್.ರಘು ಕೌಟಿಲ್ಯ, ಪಕ್ಷದ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಮಾಜಿ ಸಚಿವ ಬಿ.ಸೋಮಶೇಖರ್, ಸ್ಥಳೀಯ ಮುಖಂಡರಾದ ಚಂದಗಾಲು ಶಿವಣ್ಣ, ಕೆ.ಎಸ್.ನಂಜುಂಡೇಗೌಡ, ಡಾ. ಸಿದ್ದರಾಮಯ್ಯ, ಅಶೋಕ್ ಜಯರಾಂ, ಲಕ್ಷ್ಮಿ ಅಶ್ವಿನ್‍ಗೌಡ, ಸಚ್ಚಿದಾನಂದ, ಎಸ್.ಪಿ.ಸ್ವಾಮಿ, ಡಾ. ಲಿಂಗರೇಶ್, ಮುನಿರಾಜು ಉಪಸ್ಥಿತರಿದ್ದರು. ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ ಅವರು ಅಮಿತ್ ಷಾ ಭಾಷಣವನ್ನು ಭಾಷಾಂತರ ಮಾಡಿದರು.

Translate »