ಜೆಡಿಎಸ್ ಅಧಿಕಾರಕ್ಕೆ ಬಂದರೆ ಮತ್ತೆ ರೈತರ ಸಾಲ ಮನ್ನಾ
News

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮತ್ತೆ ರೈತರ ಸಾಲ ಮನ್ನಾ

January 12, 2023

ಬೆಂಗಳೂರು, ಜ.11(ಕೆಎಂಶಿ)-ಜಾತ್ಯಾತೀತ ಜನತಾ ದಳ ಅಧಿಕಾರದ ಚುಕ್ಕಾಣಿ ಹಿಡಿದರೆ ಮತ್ತೆ ರೈತರ ಸಾಲ ಮನ್ನಾ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರು ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ನೀಡುವ ಭರವಸೆ ಜನತೆಗೆ ನೀಡುತ್ತಿದ್ದಂತೆ ಮತ್ತೊಂದೆಡೆ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸಿ ರುವ ಕುಮಾರಸ್ವಾಮಿ ಇನ್ನು ನಾಲ್ಕು ತಿಂಗಳ ಕಾಲ ತಡೆದುಕೊಳ್ಳಿ, ಸಾಲದಿಂದ ಹೊರೆ ಹೊತ್ತು ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ರೈತರಲ್ಲಿ ಮನವಿ ಮಾಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರೈತರಿಗೆ ನೀಡಿದ ಭರವಸೆ ಈಡೇರಿಸಿದ್ದೇನೆ. ನನಗೆ ಪೂರ್ಣ ಬಹುಮತದ ಸರ್ಕಾರ ದೊರಕದಿದ್ದರೂ ಮೈತ್ರಿ ಸರ್ಕಾ ರದಲ್ಲಿ ಇದ್ದ ಇತಿಮಿತಿಯಲ್ಲೇ ರೈತರ ಪೂರ್ಣ ಕೃಷಿ ಸಾಲ ಮನ್ನಾ ಮಾಡಿದ್ದೇನೆ. ಸಾಲಕ್ಕೆ ಭಯ ಪಟ್ಟು ಕುತ್ತಿಗೆಯನ್ನು ನೇಣಿಗೆ ಕೊಡಬೇಡಿ. ನಿಮ್ಮ ಜೊತೆ ನಾನಿದ್ದೇನೆ. ನೀಡಿದ ಭರವಸೆಯನ್ನು ಈಡೇರಿಸು ತ್ತೇನೆ. ನಮಗೆ ಒಮ್ಮೆ ಬಹುಮತದ ಸರ್ಕಾರ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆಗೆ ಮೊರೆ ಹೋಗುತ್ತಿದ್ದಾರೆ. ಇತ್ತ ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರ ಗಮನ ಹರಿಸುತ್ತಿಲ್ಲ. ರೈತರಿಗೆ ಈ ಸರ್ಕಾರ ದಲ್ಲಿ ಪರಿಹಾರ ದೊರೆಯುತ್ತಿಲ್ಲ. ರೈತರು ಮೂರು ನಾಲ್ಕು ತಿಂಗಳು ಧೈರ್ಯದಿಂದ ಕಾಲ ತಳ್ಳಿ. ನನಗೆ ವಿಶ್ವಾಸವಿದೆ. ನಿಮ್ಮ ಕಷ್ಟವನ್ನು ಬಗೆಹರಿಸುತ್ತೇನೆ. ನಿಮ್ಮ ಬದುಕಿಗೆ ಉತ್ತಮ ವಾತಾವರಣ ಕಲ್ಪಿಸಿಕೊಡುತ್ತೇನೆ. 193 ಕೋಟಿ ಬೆಳೆ ವಿಮೆ ಹಣವನ್ನು ರೈತರು ಕಟ್ಟಿದ್ದಾರೆ. ಆದರೆ ವಿಮಾ ಕಂಪನಿಗಳು ನಿಮಗೆ ನೀಡಿರುವುದು ಕೇವಲ 28 ಕೋಟಿ ರೂ ಮಾತ್ರ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಹೆಸರಲ್ಲಿ ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ. ನಿಮ್ಮೆಲ್ಲ ಕಷ್ಟ-ಸುಖಗಳನ್ನು ಬಗೆಹರಿ ಸಲು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇನೆ ಎಂಬ ವಿಶ್ವಾಸ ತಮಗಿದೆ ಎಂದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸ್ಯಾಂಟ್ರೋ ರವಿ ಬಿಜೆಪಿ ಸಕ್ರಿಯ ಕಾರ್ಯಕರ್ತ ಎಂದು ಪೊಲೀಸ್ ಠಾಣೆಗೆ ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ. ನಮ್ಮ ಪಕ್ಷದ ಶಾಸಕರು, ಸಚಿವರ ಜೊತೆ ನನಗೆ ಒಡನಾಟ ಇದೆ. ಹಾಗಾಗಿ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದೇನೆ. ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದಾನೆ. ಅಷ್ಟೇ ಅಲ್ಲ ಆ ಮುಚ್ಚಳಿಕೆಯಲ್ಲಿ ವರ್ಗಾವಣೆ ಮಾಡಿಸಿದ ಅಧಿಕಾರಿಗಳ ಪಟ್ಟಿ ಬರೆದಿದ್ದಾನೆ. ಇವರು ಪವಿತ್ರ ಕೇಸರಿ ಬಟ್ಟೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಸ್ಯಾಂಟ್ರೋ ರವಿ, ಸೈಲೆಂಟ್ ಸುನಿಲ್, ಫೈಟರ್ ರವಿ ಅಂಥವರ ಹೆಗಲ ಮೇಲೆ ಕೇಸರಿ ಹಾಕಿದ್ದಾರೆ. ಪವಿತ್ರ ಕೇಸರಿ ಬಟ್ಟೆ ಹಾಕಿ ಅದರ ಪಾವಿತ್ರ್ಯತೆಯನ್ನು ಬಿಜೆಪಿ ಅವರು ಹಾಳುಮಾಡಿದ್ದಾರೆ ಎಂದರು.

Translate »