ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ
ಮೈಸೂರು

ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ

October 11, 2019

ಮೈಸೂರು: ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ. ಏಕೆಂ ದರೆ ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಕೆ.ವಂಟಿಗೋಡಿ ಅಭಿಪ್ರಾಯಪಟ್ಟರು.

ಮೈಸೂರಿನ ಕೆ.ಆರ್.ಆಸ್ಪತ್ರೆಯ ಎಂಎಂಸಿ-ಆರ್‍ಐ ಪೆಥಾಲಜಿ ಸಭಾಂ ಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀ ಲರ ಸಂಘ, ಮೈಸೂರು ಮೆಡಿಕಲ್ ಕಾಲೇಜು ಜಂಟಿ ಆಶ್ರಯದಲ್ಲಿ ಏರ್ಪಡಿ ಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾ ಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ಮಕ್ಕಳಿಗೆ ಲೋಕರೂಡಿಯ ಪರಿಚಯವೇ ಇಲ್ಲ. ಜನರೊಂದಿಗೆ ಹೇಗೆ ನಡೆದುಕೊಳ್ಳಬೇಕು? ಮನೆಗೆ ಯಾರಾ ದರೂ ಬಂದರೆ ಹೇಗೆ ಮಾತನಾಡಿಸಿ, ಸತ್ಕ ರಿಸಬೇಕು? ಎಂಬುದೇ ತಿಳಿದಿಲ್ಲ. ಸಮಾಜ ದಲ್ಲಿ ನಾನು ಮಾಡಿದ್ದೇ ಸರಿ ಎನ್ನುವ ಭಾವನೆ ಮುಂದುವರಿದು ಅವರು ಮಾನಸಿಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದರು.

ಹೀಗಾಗಿ ದೈಹಿಕ ಆರೋಗ್ಯಕ್ಕಿಂತ ಹೆಚ್ಚಾಗಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳ ಬೇಕು. ಯೋಗ ಧ್ಯಾನ, ಪ್ರಾಣಾ ಯಾಮಗಳ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯಗಳೆರಡನ್ನೂ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.

ತುಂಬಾ ವರ್ಷಗಳ ಹಿಂದೆ ಲಕ್ಷದಲ್ಲಿ ಒಬ್ಬ ರಿಗೆ ಮಾನಸಿಕ ರೋಗ ಇರುತ್ತಿತ್ತು. ಅವ ರಿಗೆ ಸೂಕ್ತ ಚಿಕಿತ್ಸೆ ಇಲ್ಲದೆ ನರಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕಾಯಿಲೆ ಹೆಚ್ಚು ತ್ತಿದೆ. ವ್ಯಸನಗಳಿಂದ ದೂರವಿದ್ದು, ಮಾನ ಸಿಕ ಆರೋಗ್ಯ ಕಾಪಾಡಿಕೊಳ್ಳುವುದರತ್ತ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆ.ಆರ್.ಆಸ್ಪತ್ರೆಯ ಮನೋರೋಗ ವಿಭಾಗದ ಮುಖ್ಯಸ್ಥ ಡಾ. ಬಿ.ಎನ್.ರವೀಶ್, ವಕೀಲ ಎನ್.ಸುಂದರ ರಾಜು ಉಪನ್ಯಾಸ ನೀಡಿದರು. ಜಿಪಂ ಸಿಇಓ ಕೆ.ಜ್ಯೋತಿ, ಡಿಸಿಪಿ ವಿ.ಟಿ.ಕವಿತಾ, ಡಿಹೆಚ್‍ಓ ಡಾ.ಆರ್.ವೆಂಕಟೇಶ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ನಂಜರಾಜು, ಕೆ.ಆರ್.ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನಂಜುಂಡಸ್ವಾಮಿ ಉಪಸ್ಥಿತರಿದ್ದರು.

Translate »