ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಹಿಂಜರಿದರೆ ನಿರ್ದಾಕ್ಷಿಣ್ಯ ಕ್ರಮ
ಮೈಸೂರು

ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಹಿಂಜರಿದರೆ ನಿರ್ದಾಕ್ಷಿಣ್ಯ ಕ್ರಮ

July 8, 2020

ಧಾರವಾಡ, ಜು. 7-ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್-19 ನಿಯಂ ತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಕೂಡಾ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಖಾಸಗಿ ವೈದ್ಯರಿಗೆ ಸಹಕಾರ ನೀಡಲು ಕೋರಿಕೊಳ್ಳಲಾಗುವುದು. ಸಕಾರಾತ್ಮಕವಾಗಿ ಸ್ಪಂದಿಸ ದಿದ್ದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಜಿಲ್ಲಾಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಕಾರ್ಯಪಡೆ ಸಭೆಯನ್ನು ದ್ದೇಶಿಸಿ ಮಾತನಾಡಿದ ಸಚಿವರು, ಖಾಸಗಿ ಆಸ್ಪತ್ರೆಗಳು ಈ ಕಠಿಣ ಸಂದರ್ಭದಲ್ಲಿ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು. ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಸಲಹೆಗಳ ಪ್ರಕಾರ ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಂಡರೆ ಸೋಂಕು ತಡೆಯಬಹುದು. ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ವಾಟ್ಸಪ್, ಫೆÇೀನ್ ಹಾಗೂ ಇ-ಮೇಲ್ ಮೂಲಕ ಜನಸ್ಪಂದನೆ ಮಾಡಬೇಕು.

Translate »