ಬೆಂಗಳೂರು,ಜು.14- ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರು ದೋಸ್ತಿ ನಾಯಕ ರಿಗೆ ಕೈಕೊಟ್ಟು ಮುಂಬೈಗೆ ಹಾರಿದ್ದಾರೆ. ಅತೃಪ್ತ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್, ಸುಧಾಕರ್ ಮುಂಬೈಗೆ ಹೋಗು ವಾಗ ಬಿಜೆಪಿ ನಾಯಕ ಆರ್.ಅಶೋಕ್ ಉಪಸ್ಥಿತರಿದ್ದ ಹಿನ್ನೆಲೆ ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಶಾಸಕರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಸ್ನೇಹಿತರು ಎಲ್ಲರಿಗೂ ಕಿವಿ ಮೇಲೆ ಹೂ ಇಡುತ್ತಿದ್ದರು. ನಮಗೂ ಇದಕ್ಕೂ ಸಂಬಂಧವಿಲ್ಲ. ಇದು ಅವರ ಪಕ್ಷದ ಆಂತರಿಕ ವಿಚಾರ. ನಾವು ಯಾವುದಕ್ಕೂ ತಲೆ ಹಾಕಲ್ಲ ಎಂದು ಹೇಳುತ್ತಿದ್ದರು. ಆದರೆ ಹೋಟೆಲ್, ಬಾಂಬೆ, ದೆಹಲಿ, ಏರ್‍ಪೆÇೀರ್ಟ್, ಫ್ಲೈಟ್ ವ್ಯವಸ್ಥೆ ಸೇರಿದಂತೆ ಎಲ್ಲಾ ಆಪರೇಷನ್ ಬಿಜೆಪಿಯವರದ್ದೇ ಎಂದು ಕಿಡಿಕಾರಿದರು.
ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ, ಪ್ರಜಾಪ್ರಭುತ್ವದಲ್ಲಿ ಎಲ್ಲವನ್ನೂ ಒಪ್ಪಿಕೊಳ್ಳಬೇಕು. ನಾವು ಮಾಡುತ್ತಿದ್ದೇವೆ, ಈ ಆಪರೇಷನ್ ನಮ್ಮದೇ, ನಮಗೆ ಸಿಎಂ ಕುರ್ಚಿ ಬೇಕು ಅಂತ ಬಿಜೆಪಿ ನಾಯಕರು ಒಪ್ಪಿಕೊಳ್ಳಬೇಕು. ಪಂಚಾಯಿತಿಗಳಲ್ಲಿ ನಡೆದ ಹಾಗೆ ನಾವು ಮಾಡುತ್ತಿದ್ದೇವೆ ಎಂದು ಒಪ್ಪಿಕೊಳ್ಳಲಿ ಎಂದು ಆಗ್ರಹಿಸಿದರು. ನಾವು ಶಾಂತಿಪ್ರಿಯರು ಅಂತ ಬಿಜೆಪಿಯವರು ಇಂತಹ ಕೆಲಸ ಮಾಡಿದ್ದಾರೆ. ಜನತೆ ಎಲ್ಲವನ್ನೂ ನೋಡುತ್ತಿದ್ದಾರೆ. ನಮಗೆ ಈಗಲೂ ವಿಶ್ವಾಸವಿದೆ. ವಿಶ್ವಾಸಮತ ಸಂದರ್ಭ ದಲ್ಲಿ ನಮ್ಮ ಶಾಸಕರು ನಮಗೆ ಬೆಂಬಲ ನೀಡುತ್ತಾರೆ. ಈಗಾಗಲೇ ಕಾರ್ಯಕರ್ತರು, ಜನರು ಶಾಸಕರಿಗೆ ರಾಜೀನಾಮೆ ನೀಡದಂತೆ ಮನವಿ ಮಾಡುತ್ತಿದ್ದಾರೆ. ನಮ್ಮ ಶಾಸಕರಿಗೆ ಕರುಣೆ ಬಂದು ನಮ್ಮ ಸರ್ಕಾರ ಉಳಿಸಿಕೊಳ್ಳುತ್ತಾರೆ. ನಮ್ಮ ಪರವಾಗಿ ಶಾಸಕರು ಮತ ಹಾಕುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಂಟಿಬಿ ನಾಗರಾಜ್ ತಮ್ಮ ನೋವನ್ನು, ಕಷ್ಟವನ್ನು ಹೇಳಿಕೊಂಡಿದ್ದಾರೆ. ಯಾರ್ಯಾರ ಒತ್ತಡ ಏನು ಎನ್ನುವುದನ್ನು ಹೇಳಿಕೊಂಡಿದ್ದಾರೆ. ಯಾವ ಒತ್ತಡ ಎಂಬುದನ್ನು ಹೇಳುವುದು ಈಗ ಬೇಡ ಎಂದು ಸಚಿವ ಡಿಕೆಶಿ ಹೇಳಿದರು.
ಬಿಎಸ್‍ವೈಗೆ ತಿರುಗೇಟು: ಸೋಮವಾರವೇ ವಿಶ್ವಾಸ ಮತ ಸಾಬೀತುಪಡಿಸಬೇಕು ಎಂಬ ಬಿಎಸ್‍ವೈ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದರು. ಅವರು ಮೊದಲು ಬಿಸಿನೆಸ್ ಅಡ್ವೈಸರಿ ಕಮಿಟಿ ಮೀಟಿಂಗ್‍ಗೆ ಬರಲಿ. ಮೀಟಿಂಗ್‍ಗೆ ಬಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರೂಲ್ ಬುಕ್‍ನ್ನು ನೋಡಲಿ. ಹಿಂದೆ ಮೀಟಿಂಗ್ ಅನ್ನು ಅವರು ಬಹಿಷ್ಕರಿಸಿದ್ದರು. ರೂಲ್ ಪುಸ್ತಕದ ಬಗ್ಗೆ ಅವರಿಗೆ ಗೌರವವಿಲ್ಲ. ಮೊದಲು ಕಾನೂನಿಗೆ ಗೌರವ ಕೊಡುವ ಕೆಲಸವನ್ನು ಬಿಜೆಪಿಯವರು ಮಾಡಲಿ ಎಂದು ಕಿಡಿಕಾರಿದರು.
ಬೆಂಗಳೂರು, ಜು.14-ಅತೃಪ್ತ ಶಾಸಕರ ಬಣ ಸೇರಲು ಶಾಸಕ ಎಂಟಿಬಿ ನಾಗ ರಾಜ್ ಬಿಜೆಪಿ ನಾಯಕ ಆರ್.ಅಶೋಕ್ ಜೊತೆ ಮುಂಬೈಗೆ ತೆರಳುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿ ಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡವು.
ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಮಾಧು ಸ್ವಾಮಿ, ಸಿ.ಟಿ.ರವಿ ಸೇರಿದಂತೆ ಕೆಲ ಬಿಜೆಪಿ ನಾಯಕರು ಪಕ್ಷದ ಮುಂದಿನ ನಡೆ, ಸೋಮವಾರ ವಿಧಾನಸಭೆಯಲ್ಲಿ ಪಕ್ಷ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು. ಬಿಜೆಪಿ ಪಾಳಯದಲ್ಲಿ ಉತ್ಸಾಹ ಇಮ್ಮಡಿಯಾಗಿದ್ದು, ರಾಜಕೀಯ ತಂತ್ರ ಪ್ರತಿತಂತ್ರಗಳ ಕುರಿತು ಯಡಿಯೂರಪ್ಪ ತಮ್ಮ ಆಪ್ತ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಬಳಿಕ ಅವರು ಪಕ್ಷದ ಮುಖಂಡ ರೊಡನೆ ಮತ್ತೆ ರೆಸಾರ್ಟ್‍ನತ್ತ ಹೆಜ್ಜೆ ಹಾಕಿದರು. ಈ ನಡುವೆ ಮಾತನಾಡಿದ ಯಡಿ ಯೂರಪ್ಪ ರಾಜ್ಯದ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಹಾಗಾಗಿ ಸೋಮ ವಾರವೇ ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡಬೇಕು ಇಲ್ಲವೇ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ. “ಜೆಡಿಎಸ್ ಮತ್ತು ಕಾಂಗ್ರೆಸ್‍ನ 15ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡಿರುವುದರಿಂದ ನಾನು ತಕ್ಷಣವೇ ರಾಜೀನಾಮೆ ನೀಡುವಂತೆ ಕುಮಾರಸ್ವಾಮಿಗೆ ಸಲಹೆ ನೀಡುತ್ತೇನೆ. ಇಬ್ಬರು ಪಕ್ಷೇತರ ಶಾಸಕರು ರಾಜೀನಾಮೆ ನೀಡಿ ರಾಜ್ಯಪಾಲರನ್ನು ಭೇಟಿ ಮಾಡಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದರು. ಆದ್ದರಿಂದ ಅವರು ಬಹುಮತವನ್ನು ಕಳೆದುಕೊಂಡಿದ್ದಾರೆ ಎಂದು “ಯಡಿಯೂರಪ್ಪ ತಿಳಿಸಿದರು.ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶುಕ್ರವಾರ ವಿಧಾನಸಭೆಯ ಅಧಿವೇಶನದಲ್ಲಿ ವಿಶ್ವಾಸ ಮತಯಾಚನೆಗೆ ಅವಕಾಶ ನೀಡುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರ ಅನುಮತಿ ಕೋರಿದ್ದರು. ಕಳೆದ ವರ್ಷ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಒಂದಿಲ್ಲೊಂದು ಭಿನ್ನಮತವು ಸಮ್ಮಿಶ್ರ ಸರ್ಕಾರ ವನ್ನು ಕಾಡುತ್ತಿದೆ. ಕಾಂಗ್ರೆಸ್‍ನ 13 ಮತ್ತು ಜೆಡಿಎಸ್‍ನ ಮೂವರು ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದರೊಂದಿಗೆ ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದೆ
ರಂಗೇರಿದ ಅಧಿವೇಶನ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿ ನಾಯಕರು ಕೊನೆ ಘಳಿಗೆಯ ಪ್ರಯತ್ನಗಳಲ್ಲಿ ನಿರತವಾಗಿದ್ದು, ಮತ್ತೊಂದೆಡೆ ಬಿಜೆಪಿ ಪಾಳಯದಲ್ಲಿ ಸರ್ಕಾರ ರಚಿಸುವ ಕಾರ್ಯತಂತ್ರಗಳು ರೂಪುಗೊಳ್ಳುತ್ತಿವೆ
ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದು 16 ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಅಂಗೀಕಾರ, ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿ ಸುವ ವಿಚಾರದಲ್ಲಿ ಮಂಗಳವಾರದವರೆಗೆ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಅತೃಪ್ತರನ್ನು ಮನವೊಲಿಸುವ ಮೈತ್ರಿ ನಾಯಕರ ಪ್ರಯತ್ನ ಸಫಲವಾಗಿಲ್ಲ. ಎಂ.ಟಿ.ಬಿ. ನಾಗರಾಜ್ ಕೈಕೊಟ್ಟ ನಂತರ ಹೆಬ್ಬಾಳದ ಬಳಿ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‍ನ ಶಾಸಕ ನಾಗೇಂದ್ರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರುತ್ತಾರೆ ಎನ್ನುವ ಸುದ್ದಿ ಹಬ್ಬಿದ್ದು, ಹೀಗಾಗಿ ಅವರನ್ನು ಕುಮಾರ ಸ್ವಾಮಿ, ಶಿವಕುಮಾರ್ ಭೇಟಿ ಮಾಡಿ ಚರ್ಚಿಸಿದರು. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಬೇಕು. ಕಾಂಗ್ರೆಸ್ ತೊರೆಯಬಾರದು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.
¸