ಕೋವಿಡ್-19 ಮುನ್ನೆಚ್ಚರಿಕೆ ಪಾಲಿಸದಿದ್ದರೆ  ಕಠಿಣ ನಿಯಮ ಅನಿವಾರ್ಯ: ಡಾ.ಸುಧಾಕರ್
News

ಕೋವಿಡ್-19 ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ನಿಯಮ ಅನಿವಾರ್ಯ: ಡಾ.ಸುಧಾಕರ್

March 17, 2021

ಬೆಂಗಳೂರು,ಮಾ.16-ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಾಗರಿಕರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ ಎಂದು ನೀಡಿರುವ ಎಚ್ಚರಿಕೆ ಸಮಂಜಸ ವಾಗಿದೆ ಎಂದರು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ ಎಂದು ಸಿಎಂ ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು.

ಇಂದಿನಿಂದ ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜಾಗೃತಿ ಮೂಡಿಸುತ್ತೇವೆ. ಲಸಿಕೆ ವಿತರಣೆಯನ್ನು ಇನ್ನಷ್ಟು ಹೆಚ್ಚಿಸಲಾಗು ವುದು. ಇದುವರೆಗೂ 15 ಲಕ್ಷ ಜನರಿಗೆ ಲಸಿಕೆ ನೀಡಿದ್ದೇವೆ. ಪ್ರತಿ ದಿನ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ 100 ಜನರಿಗೆ ಟೆಸ್ಟ್ ಮಾಡಲೇ ಬೇಕು. ಜನರಲ್ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತ ವ್ಯಕ್ತಿಗೆ 20 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮಾಡಲೇ ಬೇಕು ಎಂದು ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ಇನ್ನು ಗಡಿ ರಾಜ್ಯಗಳಲ್ಲಿ ಸೋಂಕು ಏರಿಕೆ ಆಗಿರು ವುದು ಜಿಲ್ಲೆಗಳಲ್ಲಿ ಕೊರೊನಾ ಏರಿಕೆಗೆ ಪ್ರಮುಖ ಕಾರಣ ವಾಗಿದೆ. ಸಭೆ ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ಮಾಡಲಾಗುವುದು. ಪ್ರತಿಭಟನೆ, ಸಿನಿಮಾ ಹಾಲ್‍ಗಳಿಗೂ ಟಫ್ ರೂಲ್ಸ್ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ನಾಳೆ ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸುತ್ತಾರೆ. ಬಹಿರಂಗ ಸಭೆ-ಸಮಾ ರಂಭಗಳಿಗೆ ಕಠಿಣ ನಿಯಮ ಜಾರಿ ವಿಚಾರ ಕೂಡ ಆ ಬಳಿಕ ನಿರ್ಧಾರ ಆಗುತ್ತದೆ ಎಂದರು.

ಸಿಎಂಗಳ ಜೊತೆ ಪ್ರಧಾನಿ ಸಭೆ: ಇನ್ನು ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣ ನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಮಾ.17ರಂದು ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯ ಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಈ ವೇಳೆ ಪ್ರಧಾನಿಗಳ ಸಲಹೆ ಪಡೆದು ಇನ್ನೂ ಬಿಗಿಯಾದ ಕ್ರಮ ತೆಗೆದುಕೊಳ್ಳಬಾರದು. ಮತ್ತೊಮ್ಮೆ ಲಾಕ್‍ಡೌನ್ ಆಗಬಾರದು ಎಂದರೆ ಜನರೇ ಹೆಚ್ಚಿನ ಸುರಕ್ಷತೆ ವಹಿಸಬೇಕು. ಜಾತ್ರೆಗಳಲ್ಲಿ ಹೆಚ್ಚಿನ ಜನ ಮಾಸ್ಕ್ ಹಾಕುವುದಿಲ್ಲ. ಜನರ ಸಹಕಾರ ಇಲ್ಲದೇ ನಾವು ಈ ಸಾಂಕ್ರಾ ಮಿಕದ ವಿರುದ್ಧ ಯಶಸ್ವಿಯಾಗಲ್ಲ ಎಂದು ಮುಖ್ಯಮಂತ್ರಿ ಬಿಎಸ್‍ವೈ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

Translate »