ಮಾಸ್ಕ್ ಧರಿಸದಿದ್ದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದಲ್ಲಿ ಕಾನೂನು ಕ್ರಮ
ಮೈಸೂರು

ಮಾಸ್ಕ್ ಧರಿಸದಿದ್ದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದಲ್ಲಿ ಕಾನೂನು ಕ್ರಮ

June 26, 2020

ಮೈಸೂರು, ಜೂ.25- ಕೋವಿಡ್-19 ರೋಗಾಣು ಹರಡುವಿಕೆ ನಿಯಂ ತ್ರಣ ಸಂಬಂಧ ಸರ್ಕಾರದ ಮಾರ್ಗ ಸೂಚಿಯಂತೆ ಸಾರ್ವಜನಿಕರು ಮುಖಕ್ಕೆ ಮಾಸ್ಕ್ ಧರಿಸುವುದು ಹಾಗೂ ಸಾಮಾ ಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಆದರೆ ಸಾರ್ವ ಜನಿಕರು ಮುಖಕ್ಕೆ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದು ಕಂಡು ಬಂದ ಹಿನ್ನೆಲೆ ಮೈಸೂರು ನಗರದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ರೀತ್ಯಾ ಪ್ರಕ ರಣ ದಾಖಲು ಮಾಡ ಲಾಗುವುದಾಗಿ ನಗರ ಪೊಲೀಸ್ ಆಯು ಕ್ತರು ತಿಳಿಸಿದ್ದಾರೆ. ಜೂ. 23ರಂದು ಸಂಜೆ 6 ಗಂಟೆಗೆ ಬಳಿಕ ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದು, ಹೆಬ್ಬಾಳು, ಆಲನ ಹಳ್ಳಿ, ವಿದ್ಯಾರಣ್ಯಪುರಂ, ದೇವರಾಜ ಪೊಲೀಸ್ ಠಾಣೆಗಳಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಲಾಗಿದೆ. 9 ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗಿದೆ.

ಇದೇ ರೀತಿಯಾಗಿ ವಿಶೇಷ ಕಾರ್ಯಾಚರಣೆ ಮುಂದುವರೆಯ ಲಿದ್ದು, ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ರೀತ್ಯಾ ಪ್ರಕರಣ ದಾಖಲಿಸುವುದಾಗಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »