ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರಕದಿದ್ದರೆ ಸರ್ಕಾರದ ಗೋದಾಮುಗಳಲ್ಲಿ ಸಂಗ್ರಹಕ್ಕೆ ಅವಕಾಶ

ಬೆಂಗಳೂರು, ಫೆ.18(ಕೆಎಂಶಿ)-ಮಾರುಕಟ್ಟೆ ಯಲ್ಲಿ ಸೂಕ್ತ ಬೆಲೆ ದೊರೆಯದಿದ್ದರೆ, ರೈತರು ತಮ್ಮ ಕೃಷಿ ಉತ್ಪನ್ನವನ್ನು ಸರ್ಕಾರದ ಅಧೀನದ ಗೋದಾಮುಗಳಲ್ಲಿ ಸಂಗ್ರಹ ಮಾಡಬಹುದಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಕೃಷಿಕರಿಂದ ಶೇಖರಣೆ ಮಾಡಿದ ದಾಸ್ತಾನಿಗೆ ಸಂಗ್ರಹಣಾ ಶುಲ್ಕದಲ್ಲಿ ಶೇ.20ರಷ್ಟು ಹಾಗೂ ಪರಿಶಿಷ್ಟ ಜಾತಿ ಪಂಗಡದವ ರಿಗೆ ಶೇ.25ರಷ್ಟು ರಿಯಾಯಿತಿ ಸಹ ದೊರೆಯಲಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಾ ಬಂದಿದೆ. ಇದಲ್ಲದೆ ನಿಗಮದ ರಾಜ್ಯಾದ್ಯಂತ ಇರುವ ಉಗ್ರಾಣ ಕೇಂದ್ರಗಳಲ್ಲಿ ಗಣಕೀಕರಣ ವ್ಯವಸ್ಥೆ ಆಗಿದ್ದು, ಆನ್‍ಲೈನ್ ವ್ಯವಸ್ಥೆ ಸಹ ಇರಲಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು. ಕನಿಷ್ಠ ಬೆಂಬಲ ಬೆಲೆಯಡಿ ಖರೀ ದಿಸಿದ ಉತ್ಪನ್ನಗಳ ದಾಸ್ತಾನಿಗೆ ಅನುಕೂಲ ವಾಗುತ್ತದೆ ಎಂದರು. ರೈತರಿಂದ ಭತ್ತ, ರಾಗಿ, ಬಿಳಿ ಜೋಳ, ತೊಗರಿ, ಕಡಲೆ, ಹೆಸರು, ಉದ್ದು ಸೇರಿದಂತೆ ಮೊದಲಾದ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆ ಯಡಿಯಲ್ಲಿ ಖರೀದಿಸಲಾಗುತ್ತಿದ್ದು ಇವುಗಳನ್ನು ರಾಜ್ಯ ಉಗ್ರಾಣಗಳ ಗೋದಾಮುಗಳಲ್ಲಿ ದಾಸ್ತಾನು ಮಾಡಲಾಗು ತ್ತಿದೆ. ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ನೂತನ ಆಡಳಿತ ಕಚೇರಿ ಕಟ್ಟಡವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದ ನಂತರ ಮಾತನಾಡಿದ ಸಚಿವರು, 50 ವರ್ಷಗಳ ಹಳೆಯ ಕಟ್ಟಡವನ್ನು ಕೆಡವಿ 3.76 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ ಎಂದರು.