ಕನ್ನಡ ನಮ್ಮ ಜೀವನದ ಭಾಗವಾಗಬೇಕಾದರೆ ಎಲ್ಲರ ಸಹಕಾರ ಅಗತ್ಯ
ಮೈಸೂರು

ಕನ್ನಡ ನಮ್ಮ ಜೀವನದ ಭಾಗವಾಗಬೇಕಾದರೆ ಎಲ್ಲರ ಸಹಕಾರ ಅಗತ್ಯ

November 3, 2019

ಮೈಸೂರು,ನ.೨-ಕನ್ನಡವನ್ನು ನಮ್ಮ ಜೀವ ನದ ಭಾಗವಾಗಿಸಲು ಮತ್ತು ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ ಎಂದು ಮೈಸೂರು ಜಿಲ್ಲಾ ಉಸ್ತು ವಾರಿ ಸಚಿವ ವಿ.ಸೋಮಣ್ಣ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಮೈಸೂರಿನ ಅರಮನೆ ಉತ್ತರ ದ್ವಾರ, ಕೋಟೆ ಆಂಜನೇಯಸ್ವಾಮಿ ದೇವ ಸ್ಥಾನದ ಎದುರು ಕನ್ನಡ ರಾಜ್ಯೋತ್ಸವ ಆಚರಣೆಯನ್ನು ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಅಲ್ಲದೆ ಸಚಿವರು ಕನ್ನಡ ಧ್ವಜಾರೋ ಹಣ ನೆರವೇರಿಸಿ, ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.

ಸ್ವಾತಂತ್ರಾö್ಯನAತರ ಮೈಸೂರು ರಾಜ್ಯ ವನ್ನು ಏಕೀಕರಣಗೊಳಿಸುವಲ್ಲಿ ಮೈಸೂರು ರಾಜವಂಶಸ್ಥರ ಕೊಡುಗೆಗಳನ್ನು ಸ್ಮರಿಸಿ ದರು. ಈಗ ಕರ್ನಾಟಕ ರಾಜ್ಯವೆಂದು ಕರೆಯಲಾಗುತ್ತಿದೆ. ಇಂಗ್ಲಿಷ್ ಭಾಷೆಯ ವ್ಯಾಮೋಹ ಮತ್ತು ಪ್ರಭಾವದಿಂದಾಗಿ ಕನ್ನಡ ಭಾಷೆ ತನ್ನತನವನ್ನು ಕಳೆದುಕೊಳ್ಳು ತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಅವರು, ನಮ್ಮ ಭೂಮಿ, ಭಾಷೆ, ಪರಂಪರೆ ಮತ್ತು ಸಂಸ್ಕöÈತಿಯ ಶ್ರೀಮಂತಿಕೆಯ ಬಗ್ಗೆ ನಮ್ಮ ಯುವಕರನ್ನು ಸಂವೇದನಾ ಶೀಲಗೊಳಿ ಸುವ ಅಗತ್ಯವಿದೆ ಅವರು ಒತ್ತಿ ಹೇಳಿದರು.

ಇದೇ ವೇಳೆ ಕನ್ನಡಕ್ಕೆ ಹೋರಾಟ ಮಾಡಿದ ಮಹನೀಯರಾದ ಆಲೂರು ವೆಂಕಟರಾಯರು, ಕೆಂಗಲ್ ಹನು ಮಂತಯ್ಯ, ಎಸ್.ನಿಜಲಿಂಗಪ್ಪ ಇನ್ನಿ ತರರನ್ನು ಸ್ಮರಿಸಿದರು. ರಾಜ್ಯದ ಭೂಮಿ, ಭಾಷೆ, ಪರಂಪರೆ ಮತ್ತು ಸಂಸ್ಕöÈತಿಯ ಶ್ರೀಮಂತಿಕೆಯ ಬಗ್ಗೆ ಮುಂದಿನ ಪೀಳಿಗೆಗೆ ತಿಳಿ ಹೇಳಬೇಕು ಎಂದರು. ಯುವ ಪೀಳಿಗೆ ಕನ್ನಡ ಸಾಹಿತ್ಯ, ಸಂಸ್ಕöÈತಿ ಮತ್ತು ಕಲೆಗಳ ಬಗ್ಗೆ ಉತ್ಸಾಹ ಬೆಳೆಸಿಕೊಳ್ಳಬೇಕು ಎಂದರು.

ನಗರ ವಿಕಾಸ ಯೋಜನೆಯಡಿ ಜಿಲ್ಲೆಗೆ ಹೆಚ್ಚಿನ ಅನುದಾನ: ಅಭಿವೃದ್ಧಿ ಕಾಮಗಾರಿ ಕುರಿತು ಮಾತನಾಡಿದ ಅವರು, ಮಹಾತ್ಮ ಗಾಂಧಿ ವಿಕಾಸ ಯೋಜನೆಯಡಿ ಮೈಸೂರು ಜಿಲ್ಲೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಸೋಮಣ್ಣ ಅವರು ಹೇಳಿದರು.

ಈ ಹೆಚ್ಚುವರಿ ಅನುದಾನವು ಮೈಸೂ ರಿನ ಸ್ವಚ್ಛತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗೆ ಸಹಾಯವಾಗುವುದರಿಂದ ಸ್ವಚ್ಛನಗರಿ ಪಟ್ಟಿಯಲ್ಲಿ ಒಂದನೇ ಸ್ಥಾನ ಪಡೆಯಲು ಸಹಕಾರಿಯಾಗಲಿದೆ ಎಂದರು. ಇದಕ್ಕೆ ೧೫೦ ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು.

ಪ್ರವಾಹ ಸಂತ್ರಸ್ತರ ಪರಿಹಾರ ಕ್ರಮದ ಬಗ್ಗೆ ಮಾತನಾಡಿದ ಅವರು, ಪ್ರವಾಹ ದಿಂದ ೪,೯೭೭ ಮನೆಗಳು ನಾಶವಾಗಿದ್ದು, ರಾಜ್ಯ ಸರ್ಕಾರ ೫ ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದರು.

ಮಳೆ ಹಾನಿಯಿಂದ ಮನೆಗಳನ್ನು ಕಳೆದು ಕೊಂಡ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿ ಸಲು ರೂ. ೧೪.೦೫ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿ ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ ಲಾಗುವುದು ಎಂದರು. ಪ್ರವಾಹ ಪರಿಹಾರ ಮತ್ತು ಪುನರ್ವಸತಿ ಕಾಮಗಾರಿಗೆ ಸರ್ಕಾರ ಈಗಾಗಲೇ ಮೈಸೂರು ಜಿಲ್ಲೆಗೆ ೩೦ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದರು.

ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ತನ್ವೀರ್‌ಸೇಠ್, ಮೇಯರ್ ಪುಷ್ಪಲತಾ ಜಗನ್ನಾಥ್, ಉಪ ಮೇಯರ್ ಶಫಿ ಅಹಮದ್, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಪೊಲೀಸ್ ವರಿ ಷ್ಠಾಧಿಕಾರಿ ಸಿ.ಬಿ.ರಿಶ್ಯಂತ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

Translate »