ರಾಜ್ಯಕ್ಕೆ ಬಂದ ನಂತರ ತಕ್ಕ ಪ್ರತ್ಯುತ್ತರ ನೀಡುತ್ತೇನೆ
ಮೈಸೂರು

ರಾಜ್ಯಕ್ಕೆ ಬಂದ ನಂತರ ತಕ್ಕ ಪ್ರತ್ಯುತ್ತರ ನೀಡುತ್ತೇನೆ

February 24, 2021

ನವದೆಹಲಿ, ಫೆ.23- “ನಾನು ಕರ್ನಾ ಟಕಕ್ಕೆ ಹಿಂದಿರುಗಿದ ನಂತರ ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇನೆ” ಎಂದು ಹೇಳುವ ಮೂಲಕ ವಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಾವು ಕಾಂಗ್ರೆಸ್‍ನ ಬಿ ಟೀಂ ಎಂದ ಸಚಿವ ಮುರುಗೇಶ್.ಆರ್ ನಿರಾಣಿ ಅವರಿಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‍ನ ಬಿ ಟೀಮ್‍ನಂತೆ ಕೆಲಸ ಮಾಡು ತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್‍ಗೆ ತಾಕತ್ತಿದ್ದರೆ, ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷೇತರ ಶಾಸಕನಾಗಿ ಗೆದ್ದು ಬರಲಿ ಎಂದು ಮುರುಗೇಶ್ ನಿರಾಣಿ ಬಹಿರಂಗ ಸವಾಲು ಹಾಕಿದ್ದರು.

ಇಂದು ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಯತ್ನಾಳ್, “ಕರ್ನಾ ಟಕದ ಇಬ್ಬರು ಸಚಿವರು ನನ್ನ ಮತ್ತು ನನ್ನ ಸಮುದಾಯದ ಮಠಾಧೀಶರ ವಿರುದ್ಧ ಮಾತನಾಡಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ನಾನು ರಾಜ್ಯಕ್ಕೆ ಮರಳಿದ ನಂತರ ಅವರ ಆರೋಪ ಗಳಿಗೆ ಉತ್ತರಿಸುತ್ತೇನೆ” ಎಂದಿದ್ದಾರೆ. ಇದೇ ವೇಳೆ ತಮ್ಮ ದೆಹಲಿ ಭೇಟಿ ಬಗ್ಗೆ ಪ್ರತಿ ಕ್ರಿಯಿಸಿದ ಯತ್ನಾಳ್, “ಪಕ್ಷದ ಹೈಕಮಾಂಡ್ ನನಗೆ ಬುಲಾವ್ ನೀಡಿಲ್ಲ ಮತ್ತು ನಾನು ಅವರ ಭೇಟಿಗೆ ಯಾವುದೇ ಸಮಯ ಕೋರಿಲ್ಲ. ಶ್ರೀ ಸಿದ್ದೇಶ್ವರ ಸಂಸ್ಥೆಯ ಸಿಬಿಎಸ್‍ಇ ಶಾಲೆ ಗಳಲ್ಲಿ ಒಂದನ್ನು ನೋಂದಾಯಿಸಲು ನಾನು ದೆಹಲಿಗೆ ಬಂದಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

Translate »