ಮೈಸೂರು ವಿವಿಯಲ್ಲಿ ಅಕ್ರಮ ಆರೋಪ; ಪ್ರತಿಭಟನೆ
ಮೈಸೂರು

ಮೈಸೂರು ವಿವಿಯಲ್ಲಿ ಅಕ್ರಮ ಆರೋಪ; ಪ್ರತಿಭಟನೆ

September 5, 2021

ಮೈಸೂರು,ಸೆ.4(ಪಿಎಂ)-ಮೈಸೂರು ವಿವಿಯ ಮಾನಸ ಗಂಗೋತ್ರಿ ಆವರಣದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾ ಖರೀದಿಯಲ್ಲಿ ಅಕ್ರಮ ಸೇರಿದಂತೆ ಹಲವು ರೀತಿಯ ಭ್ರಷ್ಟಾಚಾರ ನಡೆ ಯುತ್ತಿದೆ ಎಂದು ಆರೋಪಿಸಿ ಹಾಗೂ ಈ ಸಂಬಂಧ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರ ಹಿಸಿ ವಿವಿಯ ದಲಿತ ವಿದ್ಯಾರ್ಥಿ ಒಕ್ಕೂಟದ ವತಿ ಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ (ಕೆ-ಸೆಟ್) ಅಕ್ರಮ ನಡೆದಿದೆ. ಮಾನಸಗಂಗೋತ್ರಿ ಆವರಣದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾ ಖರೀದಿ ಯಲ್ಲೂ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿದರು. ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯಡಿ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಬಳಸದೇ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಿದರು. ಒಕ್ಕೂಟದ ಅಧ್ಯಕ್ಷ ಕಿರಣ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜು, ಕಾರ್ಯಾಧ್ಯಕ್ಷ ಟಿ.ತಾಂಡವಮೂರ್ತಿ, ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

Translate »