ಮಡಿಕೇರಿ: ಮೂರ್ನಾಡು ಸಮೀಪದ ಮುತ್ತಾರ್ಮುಡಿ ಗ್ರಾಮದಲ್ಲಿ ಶುಂಠಿ ಕೃಷಿಯ ನಡುವೆ ಅಕ್ರಮವಾಗಿ ಬೆಳೆಯಲಾಗಿದ್ದ 2 ಗಾಂಜಾ ಗಿಡಗಳನ್ನು ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಪತ್ತೆ ಹಚ್ಚಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಮುತ್ತಾರ್ಮುಡಿ ಗ್ರಾಮದ ನಿವಾಸಿ ಕೆ. ಪ್ರಸನ್ನ ಅಲಿಯಾಸ್ ವಿನು(38) ಬಂಧಿತ ಆರೋಪಿಯಾ ಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಪ್ರಸನ್ನ ಶುಂಠಿ ಕೃಷಿಯ ನಡುವೆ ಗಾಂಜಾ ಬೆಳೆಸಿರುವ ಖಚಿತ ಮಾಹಿತಿ ಪಡೆದ ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಗಳು ದಾಳಿ ನಡೆಸಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ. ಜಿಲ್ಲಾ ಆಪರಾಧ ಪತ್ತೆ ದಳದ ವೃತ್ತ ನಿರೀಕ್ಷಕ ಮಹೇಶ್ ನೇತೃತ್ವದಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾಧಿಕಾರಿ ಚೇತನ್, ಡಿಸಿಐಬಿಯ ಸಹಾಯಕ ಉಪ ನಿರೀಕ್ಷಕ ಹಮೀದ್, ಸಿಬ್ಬಂದಿಗಳಾದ ಯೋಗೇಶ್ ಕುಮಾರ್, ನಿರಂಜನ್, ವೆಂಕಟೇಶ್, ಅನಿಲ್ ಕುಮಾರ್, ವಸಂತ, ಕಿರಣ್, ದಿನೇಶ್, ಹಾಗೂ ಚಾಲಕರಾದ ಶಶಿಕುಮಾರ್, ಅರುಣ ಅವರುಗಳು ಕಾರ್ಯಾಚರಣೆ ನಡೆಸಿದ್ದಾರೆ.