ಹುಣಸೂರು,ಮೇ 8(ಕೆಕೆ)-ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಅನ್ನು ತಹಶೀಲ್ದಾರ್ ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ.
ಶುಕ್ರವಾರ ಸಂಜೆ ಕಾರ್ಯ ನಿಮಿತ್ತ ತಹಶೀಲ್ದಾರ್ ಬಸವರಾಜು ಅವರು ತಾಲೂಕಿನ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ, ನಗರಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ಪಿರಿಯಪಟ್ಟಣ ಕಡೆಯಿಂದ ನಗರ ಪ್ರವೇಶಿಸಿ ಮೈಸೂರಿನಯತ್ತ ಮರಳು ಸಾಗಿಸುತ್ತಿದ್ದ ಟಿಪ್ಪರ್ (ಕೆಎ18 ಬಿ5668) ಅನ್ನು ನಗರದ ಅರಸು ಪ್ರತಿಮೆ ಬಳಿ ತಡೆದು ಪರಿಶೀಲಿಸಿದಾಗ ಅಕ್ರಮವಾಗಿ ಮರಳು ಸಾಗಿಸುತ್ತಿದ್ದುದು ಬೆಳಕಿಗೆ ಬಂದಿದೆ. ಸ್ಥಳದಲ್ಲೇ ವಾಹನ ನಿಲ್ಲಿಸಿ, ಚಾಲಕ ಪರಾರಿಯಾಗಿ ದ್ದಾನೆ. ವಾಹನವನ್ನು ವಶಕ್ಕೆ ಪಡೆದ ತಹಶೀಲ್ದಾರ್ ನಗರ ಠಾಣೆ ಪೆÇಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೂ ಮಾಹಿತಿ ನೀಡಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.