ತಕ್ಷಣದಿಂದ ನೀತಿ ಸಂಹಿತೆ ಜಾರಿ ಹಿನ್ನೆಲೆ: ಜನಪ್ರತಿನಿಧಿಗಳ ಸರ್ಕಾರಿ ವಾಹನ ವಶಕ್ಕೆ ಡಿಸಿ ಸೂಚನೆ

ಮೈಸೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳು, ನಿಗಮ ಮಂಡಳಿಗಳು, ಸರ್ಕಾರಿ ಉದ್ದಿಮೆಗಳು, ಸಹಕಾರ ಸಂಘಗಳ ಒಕ್ಕೂಟ, ಮಾರುಕಟ್ಟೆ ವಲಯದ ಅಧ್ಯಕ್ಷರು, ಉಪಾಧ್ಯಕ್ಷರಿಗೆ ನೀಡಿದ್ದ ಸರ್ಕಾರಿ ವಾಹನಗಳನ್ನು ವಶಕ್ಕೆ ಪಡೆಯು ವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೈಸೂರು ಜಿಪಂ ಸಿಇಓ, ನಗರ ಪಾಲಿಕೆ, ಮುಡಾ ಆಯುಕ್ತರು, ಮೈಸೂರು ಮೃಗಾಲಯ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ, ಕಾಡಾ ಆಡಳಿ ತಾಧಿಕಾರಿ, ವಸ್ತು ಪ್ರದರ್ಶನ ಪ್ರಾಧಿಕಾರದ ಕಾರ್ಯ ನಿರ್ವಹಣಾಧಿಕಾರಿ, ಎಂಸಿಡಿ ಸಿಸಿ ಬ್ಯಾಂಕ್, ಮೈಸೂರು -ಚಾಮರಾಜ ನಗರ ಹಾಲು ಒಕ್ಕೂಟ, ಕೆಎಸ್ ಐಸಿ, ಬಣ್ಣ ಮತ್ತು ಅರಗು ಕಾರ್ಖಾನೆ, ಕರ್ನಾಟಕ ರಾಜ್ಯ ಸಹ ಕಾರಿ ಮೀನುಗಾರಿಕೆ ಮಹಾಮಂಡಳಿ ನಿಯ ಮಿತದ ವ್ಯವಸ್ಥಾಪಕ ನಿರ್ದೇಶಕರು, ಬಂಡಿ ಪಾಳ್ಯ ಎಪಿಎಂಸಿ ಕಾರ್ಯ ದರ್ಶಿಗಳು ತಮ್ಮ ವ್ಯಾಪ್ತಿಗೆ ಬರುವ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಅಧಿಕಾರಿಗಳ ಲ್ಲದ ಸದಸ್ಯರಿಗೆ ಒದಗಿ ಸಿರುವ ಸರ್ಕಾರಿ ವಾಹನಗಳನ್ನು ವಶಕ್ಕೆ ಪಡೆದು, ಚುನಾವಣಾ ಕಾರ್ಯಗಳಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿ ಕೊಡಬೇಕೆಂದು ಆದೇಶಿಸಿದ್ದಾರೆ.

ಈ ಸಂಬಂಧ `ಮೈಸೂರು ಮಿತ್ರ’ನಿಗೆ ಭಾನುವಾರ ರಾತ್ರಿ ದೂರ ವಾಣಿ ಮೂಲಕ ಪ್ರತಿ ಕ್ರಿಯಿಸಿದ ಜಿಲ್ಲಾಧಿಕಾರಿ ಗಳು ಜಿ.ಶಂಕರ್, ಚುನಾ ವಣಾ ನೀತಿ ಸಂಹಿತೆ ಜಾರಿಯಾದ 24 ಗಂಟೆ ಗಳಲ್ಲಿ ಅಧಿಕಾರಿಗಳ ಲ್ಲದವರಿಗೆ ಒದಗಿಸಿರುವ ಸರ್ಕಾರಿ ವಾಹನಗಳನ್ನು ವಶಕ್ಕೆ ಪಡೆದು, ಚುನಾವಣಾ ಕಾರ್ಯ ಗಳಿಗೆ ನಿಯೋಜಿಸಿ ಕೊಳ್ಳವುದರ ಜೊತೆಗೆ ಸರ್ಕಾರದ ವಿವಿಧ ಯೋಜನೆಗಳು, ಕಾರ್ಯಕ್ರಮಗಳಿಗೆ ಸಂಬಂಧಿಸಿದ ಫ್ಲೆಕ್ಸ್, ಹೋಲ್ಡಿಂಗ್ಸ್ ಸೇರಿದಂತೆ ಎಲ್ಲಾ ರೀತಿಯ ಪ್ರದರ್ಶಕಗಳನ್ನು ತೆರವು ಮಾಡಿ ಚುನಾ ವಣಾ ಆಯೋಗಕ್ಕೆ ವರದಿ ನೀಡಬೇಕಿದೆ. ಹಾಗಾಗಿ ಈಗಾಗಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಸ್ಥಳೀಯ ಸಂಸ್ಥೆಗಳ ಕಾರ್ಯ ನಿರ್ವಹಣಾಧಿಕಾರಿಗಳು, ತಹಶೀಲ್ದಾರ್‍ಗಳು ಇನ್ನಿತರ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೂ ತಿಳಿಸಲಾಗಿದೆ.

ಮೈಸೂರು ನಗರಪಾಲಿಕೆಯಿಂದ ಅಭಯ ತಂಡಗಳನ್ನು ಈಗಾಗಲೇ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಜಿಲ್ಲೆಯಾದ್ಯಂತ ಫ್ಲೆಕ್ಸ್, ಹೋಲ್ಡಿಂಗ್ಸ್, ಭಿತ್ತಿ ಪತ್ರಗಳು ಸೇರಿದಂತೆ ಸರ್ಕಾರಿ ಕಾರ್ಯಕ್ರಮ, ಯೋಜನೆಗಳ ಪ್ರದರ್ಶಕಗಳನ್ನು ಭಾನುವಾರ ರಾತ್ರಿಯಿಂದಲೇ ತೆರವುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

.