ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೇದ್ ಅಖ್ತರ್ ಸೂಚನೆ
ಮಂಡ್ಯ: ಬರಪೀಡಿತ ತಾಲೂಕುಗಳಲ್ಲಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಬಳಕೆ ಮಾಡಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೇದ್ ಅಖ್ತರ್ ಸೂಚಿಸಿದರು.
ನಗರದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಯಾವ ತಾಲೂಕುಗಳಲ್ಲಿ ಕನಿಷ್ಠ ಮಳೆ ಯಾಗಿದೆ. ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಕುಡಿಯುವ ನೀರಿನ ಸಮಸ್ಯೆಯ ಬಗೆಹರಿಸಲು ಮುಂದಾ ಗಬೇಕು. ಅಲ್ಲದೆ ಅಧಿಕಾರಿಗಳು ಗ್ರಾಮ ಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಬೇಕು ಎಂದು ತಿಳಿಸಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೆಳೆ ವಿಮಾ ಯೋಜನೆಯ ನೋಂದಣೆಯ ಬಗ್ಗೆ ಕೃಷಿ ಅಧಿಕಾರಿಗಳು ರೈತರಿಗೆ ಅರಿವು ಮೂಡಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಕೃಷಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಚ್ಚು ಪ್ರಚಾರದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು, ಕರಪತ್ರಗಳ ಮೂಲಕ ಜಾಗೃತಿ ಮೂಡಿಸ ಬೇಕು. ಅಲ್ಲದೇ ಗ್ರಾಮ ಸಭೆಗಳಲ್ಲಿ ರೈತರಿಗೆ ನೋಂದಣೆ ಬಗ್ಗೆ ಮಾಹಿತಿ ನೀಡಬೇಕು ಎಂದರು. ಬೆಳೆ ಪರಿಹಾರವನ್ನು ರೈತರಿಗೆ ವಿಳಂಬ ಮಾಡದೇ ಆದಷ್ಟು ಬೇಗ ನೀಡಲು ಕ್ರಮವಹಿಸುವಂತೆ ತಿಳಿಸಿದ ಅವರು ಸಾಮಾಜಿಕ ಭದ್ರತಾ ಯೋಜನೆಗಳಾದ ವಿಧವಾ, ವೃದ್ದಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಪಿಂಚಣೆಯನ್ನು ಫಲಾನು ಭವಿಗಳಿಗೆ ನೀಡಲು ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದು ತಿಳಿಸಿದರು.
ಕುಡಿಯುವ ನೀರಿನ ಪೂರೈಕೆಗಾಗಿ ಪ್ರತಿ ತಾಲೂಕಿಗೆ 50 ಲಕ್ಷ ರೂ.ಬಿಡುಗಡೆ ಮಾಡಲಾಗಿದ್ದು, ತಾಲೂಕು ಮಟ್ಟದ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಭೆಯನ್ನು ನಡೆಸಿ ಮಾಹಿತಿಯನ್ನು ಆದಷ್ಟು ಬೇಗ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎನ್. ಮಂಜುಶ್ರೀ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ.ವಿಜಯ್, ಉಪವಿಭಾಗಾ ಧಿಕಾರಿಗಾಳದ ರಾಜೇಶ್, ಶೈಲಜಾ ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.