ಬೆಂಗಳೂರು,ಅ.10-ನವರಾತ್ರಿ ಸಂಭ್ರಮ ದಲ್ಲಿರುವ ರಾಜ್ಯದ ಜನತೆಗೆ ವಿದ್ಯುತ್ ಸಮಸ್ಯೆ ತಲೆದೋರುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಪರದಾಡಬೇಕಾದ ಸಂದರ್ಭಗಳಿವೆ ಎಂದು ಮೂಲಗಳು ತಿಳಿಸಿವೆ.ರಾಜ್ಯ ಸೇರಿದಂತೆ ದೇಶಾದ್ಯಂತ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿ ದ್ದಲು ಕೊರತೆಯುಂಟಾಗಿರುವ ಹಿನ್ನೆಲೆ ಯಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆ ಯಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆ ಯಾಗುವ ಸಂಭವವಿದೆ ಎಂದು ಕೆಪಿ ಟಿಸಿಎಲ್ ಮೂಲಗಳು ತಿಳಿಸಿವೆ.
ರಾಜ್ಯದ ಪ್ರಮುಖ ವಿದ್ಯುತ್ ಉತ್ಪಾದನಾ ಘಟಕಗಳಾದ ರಾಯಚೂರು ಥರ್ಮಲ್ ವಿದ್ಯುತ್ ಪ್ಲಾಂಟ್ ಮತ್ತು ಬಳ್ಳಾರಿ ಥರ್ಮಲ್ ಪ್ಲಾಂಟ್‍ಗಳಲ್ಲಿ ಕಳೆದ ಮೂರು ದಿನಗಳಿಂದ ಕಲ್ಲಿದ್ದಲು ಪೂರೈಕೆಯಾಗದ ಕಾರಣ ಶೇ. 45ರಷ್ಟು ವಿದ್ಯುತ್ ಉತ್ಪಾದನೆ ಸ್ಥಗಿತಗೊಂ ಡಿದೆ. ಇದರಿಂದ ರಾಜ್ಯಕ್ಕೆ ಅಗತ್ಯ ಪ್ರಮಾಣ ದಲ್ಲಿ ವಿದ್ಯುತ್ ಪೂರೈಕೆ ಮಾಡಲು ಸಾಧ್ಯ ವಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಕೇಂದ್ರ ಸರ್ಕಾರದಿಂದ ನಿಗದಿತ ಪ್ರಮಾಣ ದಲ್ಲಿ ಕಲ್ಲಿದ್ದಲು ಪೂರೈಸಲು ಸಾಧ್ಯವಾಗದೇ ಇರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣ ವಾಗಿದ್ದು, ಕೊರತೆಯುಂಟಾಗಿರುವ ಕಲ್ಲಿದ್ದ ಲನ್ನು ಪೂರೈಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆಯಾದರೂ ಇದುವರೆಗೂ ಕಲ್ಲಿದ್ದಲು ಉತ್ಪಾದನಾ ಘಟಕಗಳಿಗೆ ತಲುಪಿಲ್ಲ. ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 13 ಯೂನಿಟ್ ಗಳಲ್ಲಿ 2 ಯೂನಿಟ್‍ಗಳು ತನ್ನ ಕಾರ್ಯವನ್ನು ಸ್ಥಗಿತಗೊಳಿಸಿವೆ. ಸಮರ್ಪಕವಾಗಿ ಕಲ್ಲಿದ್ದಲು ಪೂರೈಕೆಯಾಗದಿದ್ದಲ್ಲಿ ಮತ್ತಷ್ಟು ಯೂನಿಟ್‍ಗಳು ತನ್ನ ಕಾರ್ಯವನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಹಾಗೊಂದು ವೇಳೆ ಆ ರೀತಿಯಾದರೆ ವಿದ್ಯುತ್ ಕೊರತೆ ಮತ್ತಷ್ಟು ಬಿಗಡಾಯಿಸಲಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಭೇಟಿಯ ವೇಳೆ ಕಲ್ಲಿದ್ದಲಿನ ಕೊರತೆ ವಿಚಾರದ ಬಗ್ಗೆ ಸಂಬಂಧಿಸಿದ ಸಚಿವರನ್ನು ಭೇಟಿಯಾಗಿ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ಬಗ್ಗೆ ತಿಳಿಸಿ, ತ್ವರಿತವಾಗಿ ಕಲ್ಲಿದ್ದಲು ಪೂರೈಸುವಂತೆ ಮನವಿ ಮಾಡಿದರು ಎನ್ನಲಾಗಿದೆ. ಇದಕ್ಕೆ ಸ್ಪಂದಿಸಿದ ಸಚಿವರು ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ತಿಳಿಸಿದರಂತೆ.