ಅತ್ಯಾಚಾರಿಗಳಿಗೆ ಮರಣ ದಂಡನೆಗೆ ಆಗ್ರಹಿಸಿ ಮೈಸೂರಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು

ಅತ್ಯಾಚಾರಿಗಳಿಗೆ ಮರಣ ದಂಡನೆಗೆ ಆಗ್ರಹಿಸಿ ಮೈಸೂರಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

December 1, 2019

ಮೈಸೂರು, ನ.30(ಪಿಎಂ)- ಹೈದ ರಾಬಾದ್‍ನಲ್ಲಿ ಪಶುವೈದ್ಯೆ ಮೇಲೆ ಸಾಮೂ ಹಿಕ ಅತ್ಯಾಚಾರ ನಡೆಸಿ, ಹತ್ಯೆಗೈದಿರುವ ಪ್ರಕರಣದಲ್ಲಿ ಅಪರಾಧಿಗಳಿಗೆ ಗಲ್ಲುಶಿಕ್ಷೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವ ದಲ್ಲಿ ಕಾಲೇಜು ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು.

ಮೈಸೂರು ಡಿಸಿ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, ಹೈದ್ರಾ ಬಾದ್‍ನಲ್ಲಿ ಪಶುವೈದ್ಯೆ ಮೇಲೆ ಸಾಮೂ ಹಿಕ ಅತ್ಯಾಚಾರ ನಡೆಸಿ ಸಜೀವ ದಹನ ಮಾಡಲಾಗಿದೆ. ಇಂತಹ ಪೈಶಾಚಿಕ ಕೃತ್ಯ ನಡೆಸಿದವರಿಗೆ ಕೂಡಲೇ ಮರಣ ದಂಡನೆ ವಿಧಿಸಬೇಕು ಎಂದು ಆಗ್ರಹಿಸಿದರು.

ಈ ಘಟನೆ ನಡೆದು ಎರಡು ದಿನಗಳವ ರೆಗೆ ತನಿಖೆ ಚುರುಕುಗೊಳಿಸದ ಪೊಲೀಸರ ನಡೆ ಖಂಡನೀಯ. ತೆಲಂಗಾಣ ಗೃಹ ಸಚಿ ವರು ಪ್ರಕರಣ ಸಂಬಂಧ ಹಗುರವಾಗಿ ಮಾತನಾಡಿದ್ದು, ಇದು ನಾಚಿಕೆಗೇಡಿನ ಸಂಗತಿ. ಒಬ್ಬ ಮಹಿಳೆ ಸಹಾಯ ಆಪೇ ಕ್ಷಿಸಿದಾಗ ಸಹಾಯ ಮಾಡುವ ನೆಪದಲ್ಲಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ದ್ದಲ್ಲದೇ ಸಜೀವವಾಗಿ ದಹನ ಮಾಡಿ ದವರು ಈ ಭೂಮಿ ಮೇಲೆ ಬಾಳಲು ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿ ಸಿದರು.

ತ್ವರಿತ ನ್ಯಾಯಾಲಯದ ಮೂಲಕ ಅತ್ಯಾ ಚಾರಿಗಳಿಗೆ ಮರಣ ದಂಡನೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸಬಾರದು. ಹೀಗಾಗಿ ಇಂತಹ ಕಿಡಿಗೇಡಿಗಳಿಗೆ ಸಾರ್ವ ಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದರು.

ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿ ಗಳ ಸಂಘದ ಅಧ್ಯಕ್ಷ ಶಿವಪ್ರಸಾದ್ ಮಾತನಾಡಿ, ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ದೇಶವೇ ತಲೆ ತಗ್ಗಿಸುವ ಸಂಗತಿ. ಅಲ್ಲಿನ ರಾಜ್ಯ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡು ವಲ್ಲಿ ವಿಫಲವಾಗಿದೆ. ಅಲ್ಲದೆ, ಪ್ರಕರಣ ಸಂಬಂಧ ಅಲ್ಲಿನ ಗೃಹ ಸಚಿವರು ಬಾಲಿಶ ಹೇಳಿಕೆ ನೀಡಿದ್ದು, ಇದು ಖಂಡನೀಯ. ಅತ್ಯಾಚಾರಿಗಳ ಪರವಾಗಿ ಯಾವುದೇ ವಕೀಲರು ವಾದ ಮಂಡಿಸಬಾರದು. ಎಂದು ಆಗ್ರಹಿಸಿದರು.

ಎವಿಬಿಪಿ ಮೈಸೂರು ನಗರ ಘಟಕದ ಕಾರ್ಯದರ್ಶಿ ಶರತ್ ಮಾತನಾಡಿ, ದೇಶ ದಲ್ಲಿ ಇಂತಹ ಘಟನೆಗಳು ಆಗಾಗ್ಗೆ ಸಂಭ ವಿಸುತ್ತಿದ್ದು, ಇನ್ನಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಂಭೀರವಾದ ಕ್ರಮ ಕೈಗೊಳ್ಳಬೇಕು. ಇದೊಂದು ಅಮಾನ ವೀಯ ಘಟನೆ ಎಂದು ಖಂಡಿಸಿದರು.

ಎಬಿವಿಪಿ ನಗರ ಸಂಚಾಲಕ ರಾಕೇಶ್, ಜಿಲ್ಲಾ ಘಟಕದ ಸಂಚಾಲಕ ಗೌತಮ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿ ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »