ಕೆಲವು ಜಿಲ್ಲೆಗಳಲ್ಲಿ ದಲಿತರ  ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚಳ
ಮೈಸೂರು

ಕೆಲವು ಜಿಲ್ಲೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚಳ

February 22, 2019

ಮೈಸೂರು: ಕೆಲವು ಜಿಲ್ಲೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಿದ್ದು, ್ಲ ಇದನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಉಪಾಧ್ಯಕ್ಷ ಎಲ್.ಮುರುಗನ್ ತಿಳಿಸಿದರು. ಮೈಸೂರು ಜಿಪಂ ಸಭಾಂ ಗಣದಲ್ಲಿ ಗುರುವಾರ ಮೈಸೂರು, ಮಂಡ್ಯ, ಕೊಡಗು, ಚಾಮರಾಜ ನಗರ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಬಗ್ಗೆ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವು ದಾಗಿ ತಿಳಿಸಿದರು. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ ಜಿಲ್ಲೆಗಳಲ್ಲಿ 2016ರಿಂದ ಇಲ್ಲಿಯವರೆಗೆ ದಲಿತರ ಮೇಲಿನ ಕೊಲೆ, ಅತ್ಯಾಚಾರ, ಜಾತಿ ನಿಂದನೆ ಇನ್ನಿತರ ದೌರ್ಜನ್ಯ ಪ್ರಕರಣಗಳು 800ಕ್ಕೂ ಹೆಚ್ಚು ದಾಖಲಾಗಿವೆ. ಇದೇ ಅವಧಿಯಲ್ಲಿ ಹಾಸನದಲ್ಲಿ 50 ಪ್ರಕರಣಗಳು ಕಂಡು ಬಂದಿವೆ. ಈ ಬಗ್ಗೆ ವಿಶೇಷ ಗಮನ ಹರಿಸಿ, ದಲಿತರ ಮೇಲೆ ಹೆಚ್ಚು ದೌರ್ಜನ್ಯ ನಡೆಯುವ ಪ್ರದೇಶಗಳನ್ನು ಗುರುತಿಸುವಂತೆ ಅಲ್ಲಿನ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿರುವುದಾಗಿ ಹೇಳಿದರು.

ಚಾಮರಾಜನಗರ ಜಿಲ್ಲೆಯ ಸುಳವಾಡಿ ವಿಷ ಪ್ರಸಾದ ಪ್ರಕರಣದಲ್ಲಿ ಮೃತಪಟ್ಟವರಲ್ಲಿ ದಲಿತ ಸಮುದಾಯಕ್ಕೆ ಸೇರಿದ 9 ಮಂದಿಗೆ ಪರಿಶಿಷ್ಟ ಜಾತಿ-ಪಂಗಡದ ಕಾಯ್ದೆಯಡಿ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ತಿಳಿಸಿರುವುದಾಗಿಯೂ ಮುರುಗನ್ ಹೇಳಿದರು. ನಕಲಿ ಪ್ರಮಾಣಪತ್ರ ನೀಡಿ ಪರಿಶಿಷ್ಟ ಜಾತಿ-ಪಂಗಡದ ಸವಲತ್ತುಗಳನ್ನು ಪಡೆಯುತ್ತಿ ರುವವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಈ ಸಂಬಂಧ ಸುಳ್ಳು ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿಯೂ ತಿಳಿಸಿದರು. ಸುದ್ದಿಗೋಷ್ಠಿ ವೇಳೆ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾದ ರೂಪಾ, ಐಜಿಪಿ ಶರತ್ ಚಂದ್ರ, ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಇನ್ನಿತರರು ಇದ್ದರು.

Translate »