ರೈತರ ತೀವ್ರ ವಿರೋಧದ ನಡುವೆಯೂ ಪರಿಷತ್‍ನಲ್ಲಿ ಭೂ ಸುಧಾರಣೆ ತಿದ್ದುಪಡಿ ಮಸೂದೆ ಅಂಗೀಕಾರ

Karnataka Legislative Council

ಬೆಂಗಳೂರು,ಡಿ.8-ರೈತ ಸಂಘಟನೆಗಳ ಪ್ರತಿಭಟನೆ ಹಾಗೂ ಕಾಂಗ್ರೆಸ್‍ನ ತೀವ್ರ ವಿರೋಧದ ನಡುವೆಯೇ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆಯನ್ನು ಮಂಗಳವಾರ ವಿಧಾನ ಪರಿಷತ್‍ನಲ್ಲಿ ಅಂಗೀಕರಿಸಲಾ ಯಿತು. ಹಿಂದಿನ ಅಧಿವೇಶನದಲ್ಲಿ ಭೂ ಸುಧಾರಣಾ ತಿದ್ದುಪಡಿ ಮಸೂ ದೆಗೆ ವಿಧಾನ ಪರಿಷತ್ ಒಪ್ಪಿಗೆ ದೊರಕಿರಲಿಲ್ಲ. ಹೀಗಾಗಿ ಸೋಮವಾರ ಆರಂಭವಾದ ಅಧಿ ವೇಶನದಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಮತ್ತೆ ಪರಿಷ್ಕೃತ ಮಸೂದೆ ಮಂಡಿಸಿದ್ದರು. ಮಸೂದೆಯ ಕುರಿತು ವಿಸ್ತೃತ ಚರ್ಚೆ ಆಗಬೇ ಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಪಟ್ಟು ಹಿಡಿದ ಹಿನ್ನೆಲೆ ಯಲ್ಲಿ ಚರ್ಚೆಯ ನಂತರ ಇಂದು ಮಸೂದೆಯನ್ನು ಮತಕ್ಕೆ ಹಾಕಲಾ ಯಿತು. ವಿಧೇಯಕದ ಪರವಾಗಿ 31 ಮತ ಹಾಗೂ ವಿರುದ್ಧವಾಗಿ 21 ಮತಗಳು ಚಲಾವಣೆಯಾಗಿದ್ದು, ಜೆಡಿಎಸ್ ಬೆಂಬಲದೊಂದಿಗೆ ಮಸೂದೆ ಅಂಗೀಕರಿಸಲಾಗಿದೆ. ಜೆಡಿಎಸ್ ವಿಧೇಯಕದ ಪರವಾಗಿ ಮತ ಚಲಾಯಿ ಸಿದ್ದಕ್ಕೆ ಬಿಜೆಪಿ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಈ ಮಸೂದೆ ಯನ್ನು ತೀವ್ರವಾಗಿ ವಿರೋಧಿಸಿದ ಕಾಂಗ್ರೆಸ್, `ನಾವೆಲ್ಲ ರೈತರು ಬೆಳೆದ ಅನ್ನ ತಿನ್ನುವವರು. ನೀವೂ ಅದನ್ನೇ ತಿನ್ನುತ್ತೀರಿ ಎಂದು ಭಾವಿಸಿರುವೆ’ ಎಂದು ಕಾಂಗ್ರೆಸ್‍ನ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ನಡೆಯಿತು.