ಪ್ರಸ್ತುತ ಡಿಜಿಟಲ್ ವ್ಯವಹಾರದ ವೇಳೆ ಸೈಬರ್  ಸುರಕ್ಷತೆ ಸರ್ಕಾರದ ಶೀಘ್ರ ಕಾರ್ಯನೀತಿ ಜಾರಿ
ಮೈಸೂರು

ಪ್ರಸ್ತುತ ಡಿಜಿಟಲ್ ವ್ಯವಹಾರದ ವೇಳೆ ಸೈಬರ್  ಸುರಕ್ಷತೆ ಸರ್ಕಾರದ ಶೀಘ್ರ ಕಾರ್ಯನೀತಿ ಜಾರಿ

October 6, 2020

ಬೆಂಗಳೂರು, ಅ. 5(ಕೆಎಂಶಿ)- ಪ್ರಸ್ತುತ ಸನ್ನಿವೇಶದಲ್ಲಿ ಡಿಜಿಟಲ್ ವ್ಯವಹಾರಗಳು ಹೆಚ್ಚಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ಸೈಬರ್ ಸುರಕ್ಷತೆ ಕೂಡ ಪ್ರಾಮುಖ್ಯ ಪಡೆದು ಕೊಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಸೈಬರ್ ಸುರಕ್ಷತಾ ಕಾರ್ಯ ನೀತಿಯನ್ನು ರೂಪಿಸಲು ಸರ್ಕಾರ ಚಾಲನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ  ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ಟೋ ಬರ್ ತಿಂಗಳನ್ನು ಸೈಬರ್ ಸುರಕ್ಷತಾ ಮಾಸ ವನ್ನಾಗಿ ಆಚರಿಸಲಾಗುತ್ತಿದ್ದು, ಸೋಮ ವಾರ ವಿಧಾನಸೌಧದಲ್ಲಿ ನಡೆದ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೈಬರ್ ಸುರಕ್ಷತಾ ಲಾಂಛನಗಳನ್ನು ಅನಾವರಣ ಗೊಳಿಸಿ ಅವರು ಮಾತನಾಡಿದರು.

ಸಾರ್ವಜನಿಕ ಸೇವೆಯನ್ನು ಜನರಿಗೆ ತಲುಪಿಸುವುದಕ್ಕಾಗಿ ಮಾಹಿತಿ ತಂತ್ರಜ್ಞಾನ (ಐಟಿ) ಆಧಾರಿತ ತಂತ್ರೋಪಾಯಗಳ ಅಳವಡಿಕೆ ದಿನಗಳೆದಂತೆ ಹೆಚ್ಚಾಗುತ್ತಿದೆ. ಇದರೊಟ್ಟಿಗೆ ಸೈಬರ್ ಅಪಾಯಗಳು ಕೂಡ ಗಣನೀಯವಾಗಿ ಅಧಿಕವಾಗುವ ಅಪಾಯ ಇದೆ. ನಾಗರಿಕರು, ಉದ್ಯಮಗಳು, ವಿದ್ಯಾರ್ಥಿ ಗಳು ಹಾಗೂ ಸರ್ಕಾರವನ್ನು ಗಮನದಲ್ಲಿಟ್ಟು ಕೊಳ್ಳಲಾಗುತ್ತದೆ? ಸುರಕ್ಷತಾ ಕಾರ್ಯ ನೀತಿ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಅಮೆರಿಕದ ಎಫ್‍ಬಿಐ ವರದಿ ಪ್ರಕಾರ, ಕೊರೊನಾ ಪಿಡುಗಿನ ನಂತರದ ಅವಧಿ ಯಲ್ಲಿ ಸೈಬರ್ ದುಷ್ಕೃತ್ಯಕ್ಕೆ ಸಂಬಂಧಿಸಿದ ದೂರುಗಳ ಸಂಖ್ಯೆಯಲ್ಲಿ ಶೇ. 400ರಷ್ಟು ಹೆಚ್ಚಳವಾಗಿದೆ. ಈ ತನಿಖಾ ಸಂಸ್ಥೆಗೆ ಪ್ರತಿ ದಿನ 4000 ದೂರುಗಳು ಬರುತ್ತಿವೆ. ದುಷ್ಕರ್ಮಿ ಗಳು ಫಿಷಿಂಗ್, ರಾನ್ಸಮ್ ವೇರ್ ಮತ್ತು ಮಾಲ್ವೇರ್ ದಾಳಿಗಳ ಮೂಲಕ ಸುಲಿಗೆ ಮಾಡುತ್ತಿದ್ದಾರೆ. ಸೈಬರ್ ಕ್ರಿಮಿನಲ್‍ಗಳು ಕೊರೊನಾ ಸಂತ್ರಸ್ತರಿಗೆ ನೆರವು ನೀಡುವ ನೆಪದಲ್ಲಿ  ಸಂಬಂಧಿಸಿದಂತೆ ಸಾವಿರಾರು ವಂಚಕ ಪೋರ್ಟಲ್‍ಗಳನ್ನು ಆರಂಭಿಸಿ ದ್ದಾರೆ ಎಂದು ವಿವರಿಸಿದರು.

ಮೂರನೇ ಸ್ಥಾನದಲ್ಲಿ ಭಾರತ: ಅಮೆರಿಕದ ಎಫ್‍ಬಿಐ ವರದಿ ಪ್ರಕಾರ, ಪ್ರಪಂಚದ ಅಂತರ್ಜಾಲ ಅಪರಾಧಗಳು ನಡೆಯುವ ದೇಶಗಳ ಪಟ್ಟಿಯಲ್ಲಿ  ಭಾರತವು 3ನೇ ಸ್ಥಾನದಲ್ಲಿದೆ. ಫಿಷಿಂಗ್ ದಾಳಿ ಜೊತೆಗೆ ಅಂತರ್ಜಾಲಗಳ ವಿರೂಪಗೊಳಿಸುವಿಕೆ, ಡಿಡಿಒಎಸ್ ದಾಳಿ ಇತ್ಯಾದಿ ದಾಳಿಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ಭಾರತೀಯ ಕಂಪ್ಯೂಟರ್ ತುರ್ತು ಸ್ಪಂದನಾ ತಂಡವು (ಅಇಖಖಿ-Iಟಿ) ಸಲಹಾ ಸೂಚಿಯನ್ನು ಪ್ರಕಟಿಸಿ, ಕೊರೊನಾ ಸೋಂಕಿನ ನೆಪದಲ್ಲಿ ಹೇಗೆ ಸೈಬರ್ ದಾಳಿ ಗಳನ್ನು ಎಸಗಲಾಗುತ್ತಿದೆ ಎಂಬುದರ ಕುರಿತು ವಿವರಿಸಿದೆ. ಬಹುತೇಕ ಸೈಬರ್ ದಾಳಿ ಗಳನ್ನು ಫಿಷಿಂಗ್ ಇ-ಮೇಲ್‍ಗಳು, ಅಂತ ರ್ಜಾಲ ತಾಣಗಳಲ್ಲಿ ದಾರಿತಪ್ಪಿಸುವ ಜಾಹೀ ರಾತುಗಳು ಹಾಗೂ ಮೂರನೇ ಪಕ್ಷದಾ ರರ ಆ್ಯಪ್ ಹಾಗೂ ಪ್ರೋಗ್ರ್ಯಾಮ್‍ಗಳ ಮೂಲಕ ಎಸಗಲಾಗುತ್ತಿದೆ. ಅದೇ ರೀತಿ ಕಂಪ್ಯೂಟರ್‍ಗಳು, ರೌಟರ್‍ಗಳು, ಸುರಕ್ಷತೆ ಯಿಲ್ಲದ ಹೋಮ್ ನೆಟ್‍ವರ್ಕ್‍ಗಳ ಮೇಲೂ ಸೈಬರ್ ದಾಳಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವಿವರಿಸಿದರು.

ಬೆಂಗಳೂರು ಸಹಜವಾಗಿಯೇ ಸೈಬರ್ ಕ್ರಿಮಿನಲ್‍ಗಳ ಮುಖ್ಯ ಗುರಿಗಳಲ್ಲಿ ಒಂದಾ ಗಿದೆ. ಆದ್ದರಿಂದ ಸರ್ಕಾರದ ಹಾಗೂ ಸಂಸ್ಥೆಗಳಿಗೆ ಸೈಬರ್ ಜಾಗೃತಿ ಮೂಡಿಸಿ ಕೊಳ್ಳುವುದು ಅತ್ಯಂತ ಪ್ರಮುಖವಾಗಿ ಪರಿ ಣಮಿಸಿದೆ. ಯಾವುದೇ ಸಂಸ್ಥೆಯಲ್ಲಿ ಸೈಬರ್ ಅರಿವು ಇರುವ ಉದ್ಯೋಗಿಗಳೇ ಸೈಬರ್ ಅಪಾಯದ ವಿರುದ್ಧ ಅತ್ಯುತ್ತಮ ರಕ್ಷಕರಾಗಿ ರುತ್ತಾರೆ. ಇದನ್ನು ಗಮನದಲ್ಲಿರಿಸಿಕೊಂಡು ಜಾಗತಿಕವಾಗಿ ಅಕ್ಟೋಬರ್ ತಿಂಗಳನ್ನು ಸೈಬರ್ ಸುರಕ್ಷತಾ ಮಾಸವನ್ನಾಗಿ ಆಚರಿಸ ಲಾಗುತ್ತಿದೆ. ಅದಕ್ಕನುಗುಣವಾಗಿ ಕರ್ನಾ ಟಕದಲ್ಲಿಯೂ ಈ ಬಾರಿ ಕಾರ್ಯ ಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಎಂದರು.

ಆನ್‍ಲೈನ್ ವೇದಿಕೆ ಮೂಲಕ ಕಾರ್ಯ ಕ್ರಮದಲ್ಲಿ ಪಾಲ್ಗೊಂಡಿದ್ದ ರಾಷ್ಟ್ರೀಯ ಸೈಬರ್ ಸುರಕ್ಷತಾ ಸಂಚಾಲಕ ಲೆಫ್ಟಿನೆಂಟ್ ಜನರಲ್ (ಡಾ.) ರಾಜೇಶ್ ಪಂತ್ ಅವರು ಪ್ರಧಾನ ಭಾಷಣ ಮಾಡಿದರು. ಸೈಬರ್ ಸುರಕ್ಷ ತೆಯ ಪ್ರಾಮುಖ್ಯ ಹಾಗೂ ಭಾರತದ ಮಹತ್ವದ ಮಾಹಿತಿ ತಂತ್ರಜ್ಞಾನ ಮೂಲ ಸೌಕರ್ಯಕ್ಕೆ ಇರುವ ಭೀತಿಗಳ ಕುರಿತು ಪ್ರಸ್ತಾಪಿಸಿದರು. ಬೆಂಗಳೂರು ಭಾರತೀಯ ವಿಜ್ಞಾನ ಸಂಸ್ಥೆ ಅಧ್ಯಕ್ಷ ಹಾಗೂ ಸೈಸೆಕ್ ಕೆ ತಾಂತ್ರಿಕ ಸಮಿತಿ ಸಂಚಾಲಕ ಪ್ರೊ.ನರ ಹರಿ  ಸರ್ಕಾರಿ ಉದ್ಯೋಗಿಗಳು ಹಾಗೂ ಅಧಿಕಾರಿಗಳಿಗೆ ಸೈಬರ್ ಜಾಗೃತಿ ಅಗತ್ಯದ ಬಗ್ಗೆ ಮಾತನಾಡಿದರು.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರ ಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ ಇ.ವಿ.ರಮಣ ರೆಡ್ಡಿ, ಸಿಐಡಿ-ಸೈಬರ್ ಅಪರಾಧ ಇಲಾಖೆಯ ಹೆಚ್ಚುವರಿ ಡಿಜಿಪಿ ಉಮೇಶ್ ಕುಮಾರ್, ಕರ್ನಾಟಕ ಮಾಹಿತಿ ತಂತ್ರಜ್ಞಾನ ದೂರದರ್ಶಿತ್ವ ತಂಡದ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್ ಅವರು ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕ ನಾವೀನ್ಯತಾ ಮತ್ತು ತಂತ್ರ ಜ್ಞಾನ ಸಂಸ್ಥೆಯ (ಕಿಟ್ಸ್) ವ್ಯವಸ್ಥಾಪಕ ನಿರ್ದೇಶಕಿ ಮೀನಾ ನಾಗರಾಜ್ ಸಮಾರೋಪ ನುಡಿ ಗಳನ್ನು ಆಡಿದರು. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ ಕಾರ್ಯ ದರ್ಶಿ ಪ್ರೊ.ಅಶೋಕ್ ರಾಯಚೂರು, ಸೈಸೆಕ್‍ಕೆ ಕೇಂದ್ರದ ಮುಖ್ಯಸ್ಥ ಕಾರ್ತಿಕ್ ಬಪ್ಪನಾಡ್ ಮತ್ತಿತರರು ಹಾಜರಿದ್ದರು.

ಹಲವು ಗೋಷ್ಠಿಗಳು:ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐ ಎಸ್‍ಸಿ) ನೇತೃತ್ವದಲ್ಲಿ ರಾಜ್ಯದ ಸೈಬರ್ ಸುರ ಕ್ಷತಾ ಉತ್ಕೃಷ್ಟತಾ ಕೇಂದ್ರವಾದ ಸೈಸೆಕ್‍ಕೆ (ಅಥಿ Seಛಿಏ), ಸೈಬರ್ ಜಾಗೃತಿ ಮೂಡಿ ಸಲು ತಿಂಗಳಿಡೀ ಹಲವಾರು ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿದೆ. ಕರ್ನಾಟಕ ನಾವೀನ್ಯತಾ ಮತ್ತು ತಂತ್ರಜ್ಞಾನ ಸಂಸ್ಥೆ (ಕಿಟ್ಸ್) ಇದಕ್ಕೆ ಸಹಕಾರ ನೀಡಲಿದೆ.

 

 

 

 

 

Translate »