ಕೊರೊನಾ ಸೋಂಕು ನಿರ್ವಹಣೆಯಲ್ಲಿ  ರಾಜ್ಯ ಸರ್ಕಾರ ಸಂಪೂರ್ಣ ವಿಫಲ
News

ಕೊರೊನಾ ಸೋಂಕು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ

May 5, 2021

ಬೆಂಗಳೂರು,ಮೇ4(ಕೆಎಂಶಿ)- ಕೋವಿಡ್ ಸೋಂಕು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜು ಅಗು ತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಚಾಮರಾಜನಗರ ಜಿಲ್ಲಾ ಪ್ರವಾಸ ತೆರಳುವುದಕ್ಕೂ ಮುನ್ನ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಈ ಸಮಯದಲ್ಲಿ ನಾವು ಜನರ ಜತೆ ಇರಬೇಕು. ಜನರ ನೋವು, ಕಷ್ಟ ಎಲ್ಲ ವಿಚಾರದಲ್ಲೂ ಅವರಿಗೆ ಧ್ವನಿಯಾಗಿರಬೇಕು. ಏನಾಯ್ತು, ಹೇಗಾಯ್ತು ಎಂಬುದನ್ನು ತಿಳಿದುಕೊಳ್ಳ ಬೇಕು ಎಂದರು. ಕೆಲವು ಮೃತದೇಹ ಗಳನ್ನು ಯಾರೂ ತೆಗೆದುಕೊಂಡು ಹೋಗದ ಕಾರಣ ಪೊಲೀಸ್ ಅಧಿಕಾರಿಗಳು ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ ಎಂದು ತಿಳಿಯಿತು.

ಜನರ ಆಕ್ರಂದನ ವಿಪರೀತ ಆಗುತ್ತಿದೆ. ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ 24 ಮಂದಿ ಸತ್ತಿದ್ದಾರೆ ಎಂದು ಲೆಕ್ಕ ಇದೆ. ಬೇರೆ ಕಡೆಗಳಲ್ಲಿ ಇದೇ ರೀತಿ ಜನ ಸಾಯುತ್ತಿರುವುದನ್ನು ನೋಡುತ್ತಿದ್ದೇವೆ. ಈ ಬಗ್ಗೆ ಜನರೇ ಮಾಹಿತಿ ನೀಡಿದ್ದಾರೆ.

ಅನೇಕರು ಕೋವಿಡ್ ಆತಂಕದಿಂದ ಸಾಯುತ್ತಿದ್ದಾರೆ. ನಿನ್ನೆ ರಾಜರಾಜೇಶ್ವರಿ ನಗರ ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್ ಕೊರತೆ ಇದ್ದಾಗ ಸಂಸದ ಡಿ.ಕೆ.ಸುರೇಶ್ ಅವರು ಮಧ್ಯಪ್ರವೇಶಿಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ ಕಾರಣ, ಆಕ್ಸಿಜನ್ ಪೂರೈಸಲಾಯಿತು. ನಾವು ಜಾಗೃತರಾಗ ದಿದ್ದರೆ ಜನರನ್ನು ಕಳೆದುಕೊಳ್ಳಬೇಕಾಗು ತ್ತದೆ. ಈಗ ರಾಜಕಾರಣ ಮುಖ್ಯ ಅಲ್ಲ. ಪ್ರತಿಯೊಬ್ಬರನ್ನು ಉಳಿಸಿ, ಆ ಕುಟುಂಬಕ್ಕೆ ಧೈರ್ಯ ತುಂಬಬೇಕು. ಈಗ ಯುವಕರು ಹೆಚ್ಚಾಗಿ ಸಾಯುತ್ತಿರುವುದು ಬಹಳ ಶೋಚ ನೀಯ. ನಾವು ಈ ಪರಿಸ್ಥಿತಿಯಲ್ಲಿ ಜಾಗೃತ ರಾಗಿರಬೇಕು. ಆಗ ಮಾತ್ರ ಜೀವ ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡೋಣ. ರಾಜ್ಯ 1750 ಟನ್ ಆಕ್ಸಿಜನ್ ಬೇಡಿಕೆ ಯನ್ನು ಕೇಂದ್ರದ ಮುಂದಿಟ್ಟಿತ್ತು. ಕೇಂದ್ರ 850 ಟನ್ ಕೊಟ್ಟಿದೆ. ಎಲ್ಲವನ್ನೂ ಕೇಂದ್ರ ಸರ್ಕಾರ ನಿಯಂತ್ರಣ ಮಾಡುತ್ತಿದೆ. ಆರೋಗ್ಯ ಸಚಿವರ ರಾಜೀನಾಮೆ ಮಾತ್ರವಲ್ಲ, ಈ ಸರ್ಕಾರವೇ ಹೋಗಬೇಕು. 33 ಜನ ಮಂತ್ರಿಗಳು ತಾವು ಉಸ್ತುವಾರಿ ಹೊತ್ತಿರುವ ಜಿಲ್ಲೆಗಳಿಗೆ ಹೋಗಲಿಲ್ಲ ಎಂದರೆ ಹೇಗೆ? ಸಚಿವ ಸುರೇಶ್‍ಕುಮಾರ್ ಸತ್ತವರ ಕುಟುಂಬಕ್ಕೆ ಧೈರ್ಯ ತುಂಬಿದ್ದಾರಾ? ಅವರಿಗೆ ಆಗ ಲಿಲ್ಲ ಅಂದರೆ ಅಧಿಕಾರ ಬಿಟ್ಟು ಹೋಗಲಿ. ರಾಜ್ಯಪಾಲರ ಆಡಳಿತ ಬಂದ ಮೇಲೆ ಅಧಿಕಾರಿ ಗಳು ಪರಿಸ್ಥಿತಿ ನಿಯಂತ್ರಣ ಮಾಡುತ್ತಾರೆ.

Translate »