ಸಂಪುಟ ಸಂಕಟದ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಗ್ಗ-ಜಗ್ಗಾಟ

ಬೆಂಗಳೂರು:  ಸಚಿವ ಸಂಪುಟ ವಿಸ್ತರಣೆಯಿಂದ ಕಾಂಗ್ರೆಸ್ ನಲ್ಲಿ ಉಂಟಾದ ಭಿನ್ನಮತ ಕೊಂಚ ಶಮನವಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹಗ್ಗ-ಜಗ್ಗಾಟ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯ ಮಂತ್ರಿಯಾಗಿರುವ ಡಾ.ಜಿ.ಪರಮೇ ಶ್ವರ್ ಅವರಿಂದ ತೆರವಾಗುವ ಅಧ್ಯಕ್ಷ ಹುದ್ದೆ ಭರ್ತಿಗೆ ಹೈಕಮಾಂಡ್ ನಿರ್ಧಾರ ಹಿನ್ನೆಲೆಯಲ್ಲಿ ತೀವ್ರ ಪೈಪೆÇೀಟಿ ನಡೆದಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಅಧ್ಯಕ್ಷರನ್ನಾ ಗಿಸಿ ಯುವ ಸಮುದಾಯ ಸೆಳೆಯಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನ ಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ ನೇಮಕ ಸಂದರ್ಭದಲ್ಲಿ ನಮ್ಮ ಮಾತನ್ನೂ ಪರಿಗಣಿಸಬೇಕೆಂದು ಸಂಸದರಾದ ಕೆ.ಎಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ. ಡಾ.ಪರಮೇಶ್ವರ್ ಅವರ ಬಣ ಈಡಿಗ ಸಮುದಾಯದ ಬಿ.ಕೆ.ಹರಿಪ್ರಸಾದ್ ಅವರ ಬೆಂಬಲಕ್ಕೆ ನಿಂತಿದೆ. ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿಸಿ ಲೋಕಸಭಾ ಚುನಾವಣೆಗೆ ಹೋಗಬೇಕೆಂಬುದು ಕೆಲವರ ಒತ್ತಾಸೆಯಾಗಿದೆ. ಸದ್ಯದಲ್ಲೇ ಹಲವು ಶಾಸಕರು, ರಾಜ್ಯ ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಲಿದ್ದಾರೆ.