ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವಿಗೆ ಸಹಕರಿಸಿ

ಹಾಸನ, ಫೆ.15- ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಪಕ್ಷದ ಕಾರ್ಯಕರ್ತರು ಸಹಕರಿಸಬೇಕು ಎಂದು ಜೆಡಿಎಸ್ ವರಿಷ್ಠರೂ ಆದ ಮಾಜಿ ಪ್ರಧಾನಿ ದೇವೇಗೌಡರು ಕರೆ ನೀಡಿದರು.

ಜೆಡಿಎಸ್ ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತ ನಾಡಿದ ದೇವೇಗೌಡರು, ದಕ್ಷಿಣ ಪದವೀ ಧರ ಕ್ಷೇತ್ರ-2022ರ ಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯ ಪಕ್ಷದ ಶಾಸಕರು ಹಾಗೂ ವಿಧಾನ ಪರಿ ಷತ್ ಸದಸ್ಯರು, 4 ಜಿಲ್ಲೆಯ ಪಕ್ಷದ ಜಿಲ್ಲಾ ಧ್ಯಕ್ಷರು, ಮುಖಂಡರು ಹಾಗೂ ಕಾರ್ಯ ಕರ್ತರ ಅಭಿಪ್ರಾಯ ಸಂಗ್ರಹಿಸಿ ಸರ್ವಾ ನುಮತದೊಂದಿಗೆ ಹೆಚ್.ಕೆ.ರಾಮು ಅವ ರನ್ನು ಅಭ್ಯರ್ಥಿಯನ್ನಾಗಿ ಘೋಷಿಸ ಲಾಗಿದೆ ಎಂದು ಹೇಳಿದರು.

ನೆರೆ ಸಂತ್ರಸ್ತರಿಗೆ ನೆರವಾಗಿದ್ದರು: ಮಂಡ್ಯ ಜಿಲ್ಲೆಯ ಕುಗ್ರಾಮದ ಬಡ ಕುಟುಂಬದಲ್ಲಿ ಜನಿಸಿದ ಹೆಚ್.ಕೆ.ರಾಮು ಅವರು, ಪರಿ ಶ್ರಮದಿಂದ ವ್ಯಾಸಂಗ ಮಾಡಿ ಸರ್ಕಾರಿ ಉದ್ಯೋಗ ಗಳಿಸಿದ ಬಳಿಕ ಸರ್ಕಾರಿ ನೌಕ ರರ ಸಂಘಟನೆಯಲ್ಲಿ ತೊಡಗಿಸಿಕೊಂಡಿ ದ್ದರು. 4 ಬಾರಿ ಸರ್ಕಾರಿ ನೌಕರರ ಸಂಘದ ಮೈಸೂರು ಜಿಲ್ಲಾಧ್ಯಕ್ಷರಾಗಿ, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿ, ಗೌರ ವಾಧ್ಯಕ್ಷರಾಗಿ, ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ಹೋರಾಟ ಮಾಡಿ ಸರ್ಕಾರಿ ನೌಕರರ ಹಿತ ಕಾಪಾಡಿದ್ದಾರೆ. ಸಂಘದ ರಾಜ್ಯಾಧ್ಯಕ್ಷರಾಗಿದ್ದ ರಾಮು ಅವರು 2018ರಲ್ಲಿ ಮಡಿಕೇರಿಯಲ್ಲಿ ಸಂಭವಿಸಿದ ಅತಿವೃಷ್ಟಿ ಯಿಂದಾಗಿ ಸಂತ್ರಸ್ತರಾದವರಿಗೆ ನೆರವಾಗಲು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಎಲ್ಲಾ ಸರ್ಕಾರಿ ನೌಕರರಿಂದ 100 ಕೋಟಿ ದೇಣಿಗೆ ಸಂಗ್ರಹಿಸಿ, ನಿರಾಶ್ರಿತ ಜನರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಸರ್ಕಾರಕ್ಕೆ ಸಹ ಕಾರಿಯಾಗಿದ್ದರು ಎಂದರು.

ರಾಮು ಅವರು ದಕ್ಷಿಣ ಪದವೀಧರ ಕ್ಷೇತ್ರದ-2022ರ ಚುನಾವಣೆಗೆ ಮತ ದಾರರ ನೋಂದಣಿ ಪ್ರಕ್ರಿಯೆಯಲ್ಲಿ ಅತಿ ಹೆಚ್ಚು ಮತದಾರರನ್ನು ನೋಂದಣಿ ಮಾಡಿಸಿದ್ದಾರೆ. ದಕ್ಷಿಣ ಪದವೀಧರ ಕ್ಷೇತ್ರದ ಪದವೀಧರರ ಹಿತದೃಷ್ಟಿಯಿಂದ ಹೆಚ್.ಕೆ.ರಾಮು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ, ಅವರ ಗೆಲುವಿಗೆ ಸಹಕರಿಸಬೇಕು ಎಂದು ಹೆಚ್.ಡಿ. ದೇವೇಗೌಡರು ಮನವಿ ಮಾಡಿದರು.

ವಿಧಾನಪರಿಷತ್‍ನ ಹಾಲಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಲಿಂಗೇಶ್‍ಗೌಡ, ಮಾಜಿ ಶಾಸಕ ಬಿ.ವಿ.ಕರೀಗೌಡ, ನಗರಸಭೆ ಮಾಜಿ ಅಧ್ಯಕ್ಷ ಸಿ.ಆರ್.ಶಂಕರ್, ಹಾಸನ ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್. ದ್ಯಾವೇಗೌಡ, ಪಕ್ಷದ ಜಿಲ್ಲಾ ವಕ್ತಾರ ರಘು, ಸಕಲೇಶಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಸೋಮೇಗೌಡ, ಮುಖಂಡರಾದ ಮಂಜೇಗೌಡ, ಶ್ರೀಕಾಂತ್, ತಮ್ಮಣ್ಣಗೌಡ, ಪ್ರಸಾದ್‍ಗೌಡ ಮೊದಲಾದವರಿದ್ದರು.