ಮೈಸೂರು ಕೋರ್ಟ್ ಆವರಣದಲ್ಲಿ ಆರೋಗ್ಯ ಕೇಂದ್ರ ಉದ್ಘಾಟನೆ
ಮೈಸೂರು

ಮೈಸೂರು ಕೋರ್ಟ್ ಆವರಣದಲ್ಲಿ ಆರೋಗ್ಯ ಕೇಂದ್ರ ಉದ್ಘಾಟನೆ

November 19, 2019

ಮೈಸೂರು, ನ.18(ಎಂಟಿವೈ)- ಮೈಸೂರು ನ್ಯಾಯಾಲಯದ ಆವರಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೋಮವಾರ ಬೆಳಿಗ್ಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಕೆ.ವಂಟಿ ಗೋಡಿ ಸೇವೆಗೆ ಸಮರ್ಪಿಸಿದರು.

ಜಿಲ್ಲಾ ನ್ಯಾಯಾಲಯದ ಹಳೆ ಕಟ್ಟಡದ ಆವರಣದಲ್ಲಿ ಹೊಸದಾಗಿ ತೆರೆದಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನ್ಯಾಯಾ ಲಯಕ್ಕೆ ಬರುವ ಕಕ್ಷಿದಾರರು, ವಕೀಲರು, ನ್ಯಾಯಾಲಯದ ಸಿಬ್ಬಂದಿಗೆ ಇಲ್ಲಿ ಆರೋಗ್ಯ ಸೇವೆ ನೀಡಲಾಗುತ್ತದೆ. ಇಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾ ಟಿಸಿದ ನಂತರ ನ್ಯಾ.ಎಸ್.ಕೆ.ವಂಟಿಗೋಡಿ ಮಾತನಾಡಿ, ಮೈಸೂರು ನ್ಯಾಯಾಲಯದ ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲು ಹಲವು ವರ್ಷಗಳಿಂದ ಬೇಡಿಕೆ ಕೇಳಿ ಬರುತ್ತಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾ ಧೀಶರು, ನ್ಯಾಯವಾದಿಗಳು, ಸಿಬ್ಬಂದಿ, ಕಕ್ಷಿದಾರರಿಗೂ ಅನುಕೂಲವಾಗುವಂತೆ ಚಿಕಿತ್ಸಾ ಕೇಂದ್ರವನ್ನು ಆರಂಭಿಸಲಾಗಿದೆ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಬೇಕಾದ ಚಿಕಿತ್ಸೆ, ಔಷಧಿ ಈ ಕೇಂದ್ರದಲ್ಲಿರುತ್ತದೆ. ಓರ್ವ ವೈದ್ಯರು, ನರ್ಸ್ ಹಾಗೂ ಡಿ.ಗ್ರೂಪ್ ಸಿಬ್ಬಂದಿ ವ್ಯವಸ್ಥೆ ಮಾಡಿದ್ದು, ಇದರ ಸೌಲಭ್ಯ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾತನಾಡಿ, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸುವಂತೆ ಹಲವು ದಿನಗಳಿಂದ ಬೇಡಿಕೆ ಇತ್ತು. ಹೈಕೋರ್ಟ್ ಸಹ ಇಲ್ಲಿ ಪ್ರಾಥ ಮಿಕ ಆರೋಗ್ಯ ಚಿಕಿತ್ಸಾ ಮತ್ತು ತುರ್ತು ಸಲಹಾ ಕೇಂದ್ರ ಸ್ಥಾಪಿಸುವಂತೆ ಸೂಚನೆ ನೀಡಿತ್ತು. ನ್ಯಾಯಾಧೀಶರು, ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ ಎಲ್ಲರ ಪ್ರಯತ್ನದ ಫಲವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಿಸಲಾಗಿದೆ. ಎರಡು ದಿನಕ್ಕೆ ಒಬ್ಬರಂತೆ ಇಬ್ಬರು ವೈದ್ಯರನ್ನು ಈ ಕೇಂದ್ರಕ್ಕೆ ನಿಯೋಜಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆಗೆ ಬೇಕಾದ ಸೌಲಭ್ಯ ಕಲ್ಪಿಸಲಾಗಿದೆ. ಫುಡ್ ಪಾಯಿಸನ್, ಜ್ವರ, ಕೆಮ್ಮು, ನೆಗಡಿ, ತಲೆನೋವು ಸೇರಿದಂತೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೆ ಇಲ್ಲಿ ಚಿಕಿತ್ಸೆ ದೊರೆಯಲಿದೆ. ಮುಂದಿನ ದಿನಗಳಲ್ಲಿ ಬೇಡಿಕೆಗೆ ಅನುಗುಣ ವಾಗಿ ಸೌಲಭ್ಯ ಹೆಚ್ಚಿಸಲಾಗುವುದು. ನ್ಯಾಯಾಲಯದ ಕರ್ತವ್ಯ ಅವಧಿಯಲ್ಲಿ ಈ ಕೇಂದ್ರ ಕಾರ್ಯನಿರ್ವಹಿಸಲಿದೆ ಎಂದರು.

ಡಿಹೆಚ್‍ಓ ಡಾ.ಆರ್.ವೆಂಕಟೇಶ್ ಮಾತ ನಾಡಿ, ಇಂದಿನಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭವಾಗಿದೆ. ಇಲ್ಲಿ ಆರೋಗ್ಯ ಕೇಂದ್ರ ಮಂಜೂರು ಮಾಡುವಂತೆ ಸರ್ಕಾ ರಕ್ಕೆ ಪತ್ರ ಬರೆಯಲಾಗಿದೆ. ಸರ್ಕಾರ ಸಮ್ಮತಿ ನೀಡಿದರೆ, ಪ್ರತ್ಯೇಕ ಸಿಬ್ಬಂದಿ, ಅಗತ್ಯ ಸೌಲ ಭ್ಯವೂ ದೊರೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ದೇವಮಾನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು ವಿಭಾಗೀಯ ಜಂಟಿ ನಿರ್ದೇಶಕಿ ಡಾ.ಪುಷ್ಪಲತಾ, ವಕೀ ಲರ ಸಂಘದ ಅಧ್ಯP್ಷÀ ಎಸ್.ಅನಂತ್ ಕುಮಾರ್, ಜಂಟಿ ಕಾರ್ಯದರ್ಶಿ ಪುಷ್ಪಲತಾ, ಕಾರ್ಯದರ್ಶಿ ಬಿ.ಶಿವಣ್ಣ, ಹಿರಿಯ ಮಹಿಳಾ ವಕೀಲೆ ಅನಿತಾ ಜೋಷಿ, ವಿವಿಧ ನ್ಯಾಯಾ ಲಯಗಳ ನ್ಯಾಯಾಧೀಶರು ಪಾಲ್ಗೊಂಡಿದ್ದರು.

Translate »