ನಾಳೆ ನಂದನ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ
ಮೈಸೂರು

ನಾಳೆ ನಂದನ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ

August 11, 2018

ಮೈಸೂರು: ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿ ನೂತನ ನಂದನ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯನ್ನು ಆ.12ರಂದು ಬೆಳಿಗ್ಗೆ 10 ಗಂಟೆಗೆ ಸುತ್ತೂರು ಶ್ತೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟನೆ ನೆರವೇರಿಸ ಲಿದ್ದಾರೆ ಎಂದು ಡಾ.ಕೆ.ವಿ.ರಾಜೇಶ್ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಸಂಸದ ಪ್ರತಾಪ್‍ಸಿಂಹ, ಶಾಸಕ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಉಪ ಪೊಲೀಸ್ ಆಯುಕ್ತ ಎನ್. ವಿಷ್ಣುವರ್ಧನ್, ಪಾಲಿಕೆ ಸದಸ್ಯ ಶಿವಕುಮಾರ್ ಭಾಗವಹಿಸುವರು ಎಂದರು. ಸ್ವಾತಂತ್ರೋ ತ್ಸವದ ಅಂಗವಾಗಿ ಆ.13ರಿಂದ ಸೆ.30ರವರೆಗೆ ಸ್ವಾತಂತ್ರ್ಯ ಹೋರಾಟಗಾರರು, ಹಿರಿಯ ನಾಗರಿಕರು, ಸೈನಿಕ ಅಧಿಕಾರಿಗಳು ಮತ್ತು ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು. ಗೋಷ್ಠಿಯಲ್ಲಿ ಡಾ.ಕೆ.ರವೀಂದ್ರನಾಥ್, ಡಾ.ಕವಿತಾ ಇದ್ದರು.

Translate »