ಕನಕದಾಸ ಪತ್ತಿನ ಸಹಕಾರ ಸಂಘದ ಉದ್ಘಾಟನೆ
ಮೈಸೂರು

ಕನಕದಾಸ ಪತ್ತಿನ ಸಹಕಾರ ಸಂಘದ ಉದ್ಘಾಟನೆ

September 21, 2018

ಮೈಸೂರು:  ಶ್ರೀ ಕನಕದಾಸ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಹಾಗೂ ಪ್ರಸಕ್ತ ಸಾಲಿನ ವಾರ್ಷಿಕ ಸಭೆ ಹಾಗೂ ಸಂಘದ 20ನೇ ವಾರ್ಷಿಕೋತ್ಸವವನ್ನು ಸೆ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಿ.ಎನ್.ಕುಮಾರಸ್ವಾಮಿ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಕನಕದಾಸನಗರ 3ನೇ ಹಂತದಲ್ಲಿ ಸಿಎ ನಿವೇಶನದಲ್ಲಿ ನಿರ್ಮಿಸಿರುವ ಸಂಘದ ನೂತನ ಕಟ್ಟಡದಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ನಡೆಯಲಿವೆ. ಅಂದು ಬೆಳಿಗ್ಗೆ 10.30ಕ್ಕೆ ಸಮಾರಂಭ ಆರಂಭವಾಗಲಿದೆ ಎಂದು ಹೇಳಿದರು.

ಕಟ್ಟಡ ಮತ್ತು ಸಮಾರಂಭದ ಉದ್ಘಾಟನೆಯನ್ನು ಕನಕಗುರುಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ ನೆರವೇರಿಸಲಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಂಸದರಾದ ಎ.ಹೆಚ್.ವಿಶ್ವನಾಥ್, ಸಿ.ಹೆಚ್.ವಿಜಯಶಂಕರ್, ಶಾಸಕ ಯತೀಂದ್ರ ಸೇರಿದಂತೆ ಹಲವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಸಂಘದ ಉಪಾಧ್ಯಕ್ಷ ಜೆ.ರಾಜೇಶ್, ಕಾರ್ಯದರ್ಶಿ ಕೆ.ಬಸವೇ ಗೌಡ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

Translate »