ಬರಗಿ ಬಳಿ ವಿದ್ಯುತ್ ಉಪ ಕೇಂದ್ರ ಲೋಕಾರ್ಪಣೆ
ಚಾಮರಾಜನಗರ

ಬರಗಿ ಬಳಿ ವಿದ್ಯುತ್ ಉಪ ಕೇಂದ್ರ ಲೋಕಾರ್ಪಣೆ

October 31, 2018

ಗುಂಡ್ಲುಪೇಟೆ: ನೂತನ ವಿದ್ಯುತ್ ಉಪಕೇಂದ್ರದಿಂದಾಗಿ ಕಾಡಂಚಿನ ಗ್ರಾಮಗಳ ವಿದ್ಯುತ್ ಕೊರತೆ ನೀಗಲಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು.

ತಾಲೂಕಿನ ಬರಗಿ ಗ್ರಾಮದ ಬಳಿ 5.5 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿ ಸಲಾಗಿರುವ ನೂತನ 66 ಕೆವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಈ ಅತ್ಯಾಧುನಿಕ ಉಪಕೇಂದ್ರ ಸ್ಥಾಪನೆಯಿಂದ ಸುತ್ತಲಿನ ಕಾಡಂಚಿನ ಗ್ರಾಮಗಳಾದ ಭೀಮನಬೀಡು, ಕೂತನೂರು, ಬರಗಿ, ಹೊಂಗಹಳ್ಳಿ, ಮೂಖಹಳ್ಳಿ, ಮಂಚಹಳ್ಳಿ, ಮಣಗಳ್ಳಿ, ದೇಶೀಪುರ, ಆಲತ್ತೂರು, ಸಿದ್ದಯ್ಯನಪುರ ಕಾಲೋನಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಈವರೆಗೆ ಕಾಡುತ್ತಿದ್ದ ವಿದ್ಯುತ್ ಕೊರತೆ ನೀಗಲಿದ್ದು, ಇದರಿಂದ ನಿರಂತರ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ. ರೈತರ ಕೊಳವೆ ಬಾವಿಗಳಿಗೆ ಗುಣಮಟ್ಟದ ವಿದ್ಯುತ್ ದೊರಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ಜಿಪಂ ಸದಸ್ಯ ಪಿ.ಚನ್ನಪ್ಪ, ತಾಪಂ ಅಧ್ಯಕ್ಷ ಜಗದೀಶಮೂರ್ತಿ, ಸದಸ್ಯೆ ಕಲಾವತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಸೆಸ್ಕ್ ಎಇಇ ಕೆ.ಎಂ.ಸಿದ್ದಲಿಂಗಪ್ಪ, ಬಿಜೆಪಿ ಮಂಡಲಾಧ್ಯಕ್ಷ ಎನ್.ಮಲ್ಲೇಶ್, ಪುರಸಭೆ ಸದಸ್ಯ ಗೋವಿಂದರಾಜನ್, ಹಾಪ್ ಕಾಮ್ಸ್ ಜಿಲ್ಲಾಧ್ಯಕ್ಷ ಬರಗಿ ಶ್ರೀಕಂಠಪ್ಪ, ಪುರಸಭೆ ಅಧ್ಯಕ್ಷ ಪಿ.ಗಿರೀಶ್ ಸೇರಿದಂತೆ ಹಲವರಿದ್ದರು.

Translate »