ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷಕ್ಕೆ ಏರಿಕೆ ಸರ್ಕಾರಕ್ಕೆ ಆದಾಯದ ಮೂಲಗಳು…
News

ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷಕ್ಕೆ ಏರಿಕೆ ಸರ್ಕಾರಕ್ಕೆ ಆದಾಯದ ಮೂಲಗಳು…

February 2, 2023

ನವದೆಹಲಿ, ಫೆ.1-ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೂತನ ಆದಾಯ ತೆರಿಗೆ ಸ್ಲಾಬ್‍ಗಳನ್ನು ವಿವರಿಸಿದ್ದು, ಇದೇ ವೇಳೆ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ಹೆಚ್ಚಳ ಮಾಡಿದ್ದಾರೆ.

ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾ ರಾಮನ್ ಬುಧವಾರ ಲೋಕಸಭೆ ಯಲ್ಲಿ ಬಜೆಟ್ ಮಂಡಿಸಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ ವಾರ್ಷಿಕ 7 ಲಕ್ಷ ರೂ. ವರೆಗೆ ತೆರಿಗೆ ವಿನಾಯ್ತಿ ಘೋಷಿಸಲಾಗಿದೆ. ಇದು ಮಧ್ಯಮ ವರ್ಗದಲ್ಲಿ ಹರ್ಷ ತಂದಿದೆ.

ಆದಾಯ ತೆರಿಗೆಗೆ ಸಂಬಂಧಿಸಿದಂತೆ ನಿರ್ಮಲಾ ಸೀತಾರಾಮನ್ 5 ಮಹತ್ವದ ಕ್ರಮಗಳನ್ನು ಘೋಷಿ ಸಿದ್ದು, 7 ಲಕ್ಷ ರೂ. ವರೆಗೆ ಆದಾಯ ತೆರಿಗೆ ವಿನಾಯ್ತಿ ಪ್ರಕಟಿ ಸಿದ್ದಾರೆ. ಹೊಸ ತೆರಿಗೆ ಪದ್ಧತಿಯಲ್ಲಿ ಟ್ಯಾಕ್ಸ್ ಸ್ಲ್ಯಾಬ್‍ಗಳನ್ನು (ತೆರಿಗೆ ಹಂತಗಳು) 5ಕ್ಕೆ ಮಿತಗೊಳಿಸ ಲಾಗಿದ್ದು, 3 ಲಕ್ಷ ರೂ. ನಿಂದ ತೆರಿಗೆ ಹಂತ ಆರಂಭ ವಾಗಲಿದೆ. ಹೊಸ ತೆರಿಗೆ ಪದ್ಧತಿ ಆದಾಯ ತೆರಿಗೆ ವಿನಾಯ್ತಿ ಮೊತ್ತವನ್ನು ರೂ. 5 ಲಕ್ಷದಿಂದ ರೂ. 7 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ವಾರ್ಷಿಕ ರೂ. 9 ಲಕ್ಷ ವೇತನ ಪಡೆ ಯುವವರು ರೂ. 45,000 ತೆರಿಗೆ ಕಟ್ಟುತ್ತಾರೆ ಎಂದು ಹೇಳಿದರು. ಹೊಸ ತೆರಿಗೆ ಪದ್ಧತಿಯೇ ಇನ್ನು ಮುಂದೆ ಡಿಫಾಲ್ಟ್ ತೆರಿಗೆ ಪದ್ಧತಿ ಆಗಿರುತ್ತದೆ. ಆದರೆ ಹಳೆಯ ತೆರಿಗೆ ಪದ್ಧತಿಯೂ ಚಾಲ್ತಿಯಲ್ಲಿರುತ್ತದೆ. ತೆರಿಗೆ ಸ್ಲ್ಯಾಬ್‍ಗಳನ್ನು 6 ಹಂತಗಳಿಂದ 5 ಹಂತಗಳಿಗೆ ಬದಲಿಸ ಲಾಗಿದೆ. ಹೊಸ ತೆರಿಗೆ ಪದ್ಧತಿ ಆರಿಸಿಕೊಳ್ಳು ವವರಿಗೆ 7 ಲಕ್ಷ ರೂ. ವರೆಗಿನ ತೆರಿಗೆ ವಿನಾಯ್ತಿ ಲಭ್ಯವಾಗಲಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಅತೀ ಹೆಚ್ಚು ಸರ್ಚಾರ್ಜ್ ದರವನ್ನು 37% ರಿಂದ 25% ಕ್ಕೆ ಇಳಿಸಲು ಸರ್ಕಾರ ಪ್ರಸ್ತಾಪಿಸಿದೆ.

ಸ್ಟಾಂಡರ್ಡ್ ಡಿಡಕ್ಷನ್: 15.5 ಲಕ್ಷ ರೂ ಅಥವಾ ಅದಕ್ಕೂ ಹೆಚ್ಚಿನ ಆದಾಯವನ್ನು ವೇತನದಿಂದ ಪಡೆಯುವವರಿಗೆ 52,500 ರೂ ಸ್ಟಾಂಡರ್ಡ್ ಡಿಡಕ್ಷನ್ ಸೌಲಭ್ಯ ಸಿಗಲಿದೆ.

ಗರಿಷ್ಠ ತೆರಿಗೆ ಇಳಿಕೆ: ಈವರೆಗೆ ಗರಿಷ್ಠ ತೆರಿಗೆಯ ಮೇಲೆ ಶೇ.37ರಷ್ಟು ಸರ್‍ಚಾರ್ಜ್ ವಿಧಿಸಲಾಗುತ್ತಿತ್ತು. ಈ ಪ್ರಮಾಣವನ್ನು ಹೊಸ ತೆರಿಗೆ ನೀತಿಯಡಿ ಶೇ 25ಕ್ಕೆ ಇಳಿಸಲಾಗಿದೆ. ಈ ಬೆಳವಣಿಗೆಯೊಂದಿಗೆ ದೇಶದಲ್ಲಿರುವ ಗರಿಷ್ಠ ತೆರಿಗೆ ದರವು ಶೇ.39ಕ್ಕೆ ಮಿತಗೊಳ್ಳಲಿದೆ. ಪ್ರಸ್ತುತ ಅತಿ ಹೆಚ್ಚು ವೈಯಕ್ತಿಕ ತೆರಿಗೆ
ದರ 42% ವಿಶ್ವದಲ್ಲೇ ಅತ್ಯಧಿಕವಾಗಿದೆ. ಅತೀ ಹೆಚ್ಚು ಆದಾಯ ಗಳಿಸುವವರಿಗೆ ಸರ್ಚಾರ್ಜ್ ಅನ್ನು 37% ರಿಂದ 25% ಕ್ಕೆ ಇಳಿಸಲಾಗಿದೆ. ಗರಿಷ್ಠ ತೆರಿಗೆ ಪ್ರಮಾಣವನ್ನು ಶೇಕಡಾ 39ಕ್ಕೆ ಇಳಿಸಲಾಗಿದೆ. ನಮ್ಮ ದೇಶದಲ್ಲಿ ಅತ್ಯಧಿಕ ತೆರಿಗೆ ದರವು 42.74 ಶೇಕಡಾ. ಇದು ವಿಶ್ವದಲ್ಲೇ ಅತೀ ಹೆಚ್ಚು ಎನ್ನಲಾಗಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಅತ್ಯಧಿಕ ಸರ್ಚಾರ್ಜ್ ದರವನ್ನು ಶೇಕಡಾ 37 ರಿಂದ ಶೇಕಡಾ 25ಕ್ಕೆ ಇಳಿಸುವುದಾಗಿ ಪ್ರಸ್ತಾಪಿಸಿದ್ದಾರೆ. ಇದು ಗರಿಷ್ಠ ತೆರಿಗೆ ದರವನ್ನು ಶೇಕಡಾ 39ಕ್ಕೆ ಇಳಿಸಲು ಕಾರಣವಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರಜೆ ನಗದೀಕರಣ: ನಿವೃತ್ತರಾದಾಗ ಸಿಗುವ ರಜೆ ನಗದೀಕರಣ (ಲೀವ್ ಎನ್‍ಕ್ಯಾಶ್ ಮೆಂಟ್) ಸೌಲಭ್ಯದ ಮೇಲೆ ಈವರೆಗೆ  3 ಲಕ್ಷ ರೂಗೆ ಮಾತ್ರ ತೆರಿಗೆ ವಿನಾಯ್ತಿ ಇತ್ತು. ಈ ಮೊತ್ತವನ್ನು  25 ಲಕ್ಷ ರೂಗೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.]

Translate »