ಆದಾಯ ತೆರಿಗೆ ವಂಚನೆ ಆರೋಪ: ಸಚಿವ ಡಿಕೆಶಿಗೆ ಷರತ್ತುಬದ್ಧ ಜಾಮೀನು
ಮೈಸೂರು

ಆದಾಯ ತೆರಿಗೆ ವಂಚನೆ ಆರೋಪ: ಸಚಿವ ಡಿಕೆಶಿಗೆ ಷರತ್ತುಬದ್ಧ ಜಾಮೀನು

August 3, 2018

ಬೆಂಗಳೂರು: ಆದಾಯ ತೆರಿಗೆ ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧ ಪ್ರಕರಣಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಡಿ.ಕೆ.ಶಿವಕುಮಾರ್ ಸೇರಿದಂತೆ ಐವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಆದಾಯ ತೆರಿಗೆ ವಂಚನೆ, ಹವಾಲಾ ಹಣ ಸಾಗಾಣೆ ಸೇರಿದಂತೆ ಹಲವು ಪ್ರಕರಣಗಳ ಆರೋಪ ಹೊತ್ತಿದ್ದ ಡಿಕೆಶಿ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 4ನೇ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಡಿ.ಕೆ.ಶಿವಕುಮಾರ್, ಸಚಿನ್ ನಾರಾಯಣ, ಉದ್ಯಮಿ ಸುನೀಲ್‍ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ
ಮತ್ತು ಎನ್.ರಾಜೇಂದ್ರನ್ ಅವರುಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋ ಪಿಗಳ ಅರ್ಜಿ ಪರಿಗಣಿಸಿದ ನ್ಯಾಯಾಲಯ 5 ಸಾವಿರ ರೂ. ಭದ್ರತಾ ಬಾಂಡ್ ನೊಡನೆ ಷರತ್ತುಬದ್ಧ ಜಾಮೀನು ನೀಡಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಲಾಗಿದೆ. ಜಾಮೀನು ಪಡೆದ ಬಳಿಕ ಡಿಕೆಶಿ ಸುದ್ದಿಗಾರರೊಡನೆ ಮಾತನಾಡಿ “ನ್ಯಾಯಾಲಯದ ಆದೇಶಕ್ಕೆ ತಲೆ ಬಾಗುತ್ತೇನೆ” ಎಂದಿದ್ದಾರೆ.

Translate »